ಸುಬ್ರಮಣ್ಯ: ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಆ.29ರಂದು ಸೋಣ ಶನಿವಾರ ಆಚರಿಸಲಾಯಿತು. ಆ ಪ್ರಯುಕ್ತ ಶ್ರೀ ದೇವರಿಗೆ ವಿಶೇಷ ಪೂಜೆ ನಡೆದು ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನೆರವೇರಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಜಗದೀಶ್ ಪಡ್ಪು, ಶ್ರೀ ದೇವಳದ ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್ ಮತ್ತು ವ್ಯವಸ್ಥಾಪನಾ ಸಮಿತಿಯ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದು ಶ್ರೀ ದೇವರ ದರ್ಶನ ಪಡೆದು ಪ್ರಸಾದ…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶನಿವಾರ ದಿನವಿಡೀ ಪ್ರಖರ ಬಿಸಿಲು ಸಹಿತ ಸಂಜೆ ಸಾಧಾರಣ ಮಳೆಯಾಗಿದೆ. ಬೆಳಗಿನ ಜಾವ ಮೋಡ ಮತ್ತು ಬಿಸಿಲಿನಿಂದ ಆರಂಭವಾದ ವಾತಾವರಣ, ಸಂಜೆಯ ವೇಳೆಗೆ ಗ್ರಾಮೀಣ ಭಾಗಗಳಲ್ಲಿ ಬಿರುಸು ಪಡೆದುಕೊಂಡಿತು. ಸೂರ್ಯನ ಪ್ರಖರ ದರ್ಶನದಿಂದ ಬಿಸಿಲು ಹೆಚ್ಚಿದ್ದು, ಮುಂಬರುವ ದಿನಗಳಲ್ಲಿ ಮಳೆಯ ತೀವ್ರತೆ ಕೊಂಚ ತಗ್ಗುವ ಲಕ್ಷಣಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದೊಂದಿಗೆ ಒಂದೆರಡು ಸಾಮಾನ್ಯ…
ಮಂಗಳೂರು: ಸುಳ್ಯ, ಬೆಳ್ತಂಗಡಿ ಅರಣ್ಯದಂಚಿನ ಗ್ರಾಮೀಣ ಭಾಗಗಳಲ್ಲಿ ಸುಮಾರು 80ರಷ್ಟು ಆನೆಗಳಿಂದ ತೊಂದರೆಯಾಗುತ್ತಿದ್ದು, ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ತೊಂದರೆಯಾಗುತ್ತಿರುವ ಕುರಿತಂತೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅಧ್ಯಕ್ಷತೆಯಲ್ಲಿ ಶನಿವಾರ ಜಿ.ಪಂ.ನ ನೇತ್ರಾವತಿ ಸಭಾಂಗಣದಲ್ಲಿ ನಡೆದ ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ (ದಿಶಾ) ಸಮಿತಿ ಸಭೆಯಲ್ಲಿ ತೀವ್ರ ಚರ್ಚೆ ನಡೆಯಿತು. ಸುಳ್ಯ ಶಾಸಕಿ ಭಾಗೀರಥಿ ಮಾತನಾಡಿ, ತೋಟಗಳಿಗೆ ನುಗ್ಗುತ್ತಿರುವ ಆನೆಗಳು…
ಮಂಗಳೂರು: ಪಿಎಂ ಜನಮನ್ ಯೋಜನೆಯಡಿ ಜಿಲ್ಲೆಯ ಪ್ರತಿ ಕೊರಗ ಕುಟುಂಬಗಳಿಗೂ ಮನೆ ಒದಗಿಸುವ ನಿಟ್ಟಿನಲ್ಲಿ ಕ್ರಿಯಾ ಯೋಜನೆ ರೂಪಿಸುವಂತೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಶನಿವಾರ ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ (ದಿಶಾ) ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 1135 ಕೊರಗ ಕುಟುಂಬಗಳಿದ್ದು, ಪಿಎಂ ಜನ್‌ಮನ್‌ನಡಿ ಮ್ಯಾಪಿಂಗ್ ಕಾರ್ಯ ನಡೆದಿದೆ. ಪಿಎಂ ಜನ ಮನ…
ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತ ವ್ಯವಸ್ಥೆಯು ಸರ್ವಾಧಿಕಾರ ಧೋರಣೆ ತಾಳುತ್ತಿದ್ದು ಸ್ಥಳೀಯ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ವಹಿಸಲಾಗುತ್ತಿದೆ. ಏರ್‌ಪೋರ್ಟನ್ನು ಅದಾನಿಗೆ ಮಾರಾಟ ಮಾಡಿಲ್ಲ. ಲೀಸ್‌ಗೆ ನೀಡಿರುವುದು ಎಂಬುದು ಗಮನದಲ್ಲಿರಲಿ ಎಂದು ಶಾಸಕ ಉಮಾನಾಥ ಕೋಟ್ಯಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಶನಿವಾರ ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ (ದಿಶಾ) ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.…
ಮಂಗಳೂರು: ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ಚಂದ್ ಅವರು ತಮ್ಮ ಅಪ್ರತಿಮ ಕ್ರೀಡಾ ಸಾಧನೆಯ ಮೂಲಕ ದೇಶಕ್ಕೆ ಸ್ವರ್ಣದ ಗೌರವ ತಂದುಕೊಟ್ಟು ಭಾರತೀಯ ಕ್ರೀಡಾ ಇತಿಹಾಸದಲ್ಲಿ ಅಧ್ಯಾಯ ನಿರ್ಮಿಸಿದ್ದಾರೆ. ಅವರು ನಿರ್ಮಿಸಿದಂತಹ ಇತಿಹಾಸವನ್ನು ಇಂದಿನ ಯುವಜನತೆ ತಮ್ಮ ಪ್ರತಿಭೆ, ಪರಿಶ್ರಮದ ಮೂಲಕ ಮರುನಿರ್ಮಿಸಬೇಕು. ಯುವಜನರು ದೇಶದ ಆಸ್ತಿ. ಸ್ವಾತಂತ್ರ್ಯ ಸಂಗ್ರಾಮದಿಂದ ಹಿಡಿದು ಇಂದಿನವರೆಗೂ ಯುವ ಜನತೆ ಕ್ರೀಡಾ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಮತ್ತು ಸಾಮಥ್ರ್ಯವನ್ನು…
ಮಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹ ಲಕ್ಷ್ಮಿಗೆ ಮೂರು ವರ್ಷಗಳ ಸಂಭ್ರಮ. ಈ ಸಂಭ್ರಮದ ಸವಿನೆನಪಿಗಾಗಿ ಬೆಂಗಳೂರಿನ ವಿಧಾನಸೌಧ, ಬೆಳಗಾವಿಯ ಸುವರ್ಣಸೌಧ, ಮೈಸೂರು ಅರಮನೆ, ಚಿತ್ರದುರ್ಗದ ಕಲ್ಲಿನಕೋಟೆ, ಹಂಪಿಯ ಕಲ್ಲಿನರಥ, ಮಂಗಳೂರಿನ ಪಡೀಲ್ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಕಟ್ಟಡ, ಬೆಳಗಾವಿ ಕಿತ್ತೂರು ಚೆನ್ನಮ್ಮ ವೃತ್ತಗಳು ಆ.30 ಸಂಜೆ 6 ರಿಂದ ರಾತ್ರಿ 10 ರವರೆಗೆ ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ…
ಮಂಗಳೂರು: ಪಶ್ಚಿಮ ವಲಯದ ಪೊಲೀಸ್ ಮಹಾನಿರ್ದೇಶಕ (ಐಜಿಪಿ) ಆಗಿ ಸೇವೆ ಸಲ್ಲಿಸುತ್ತಿದ್ದ ಅಮಿತ್ ಸಿಂಗ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಮೀಸಲು ಪೊಲೀಸ್ ಐಜಿಪಿಯಾಗಿ ನೇಮಿಸಲಾಗಿದೆ. 2010 ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಚೇತನ್ ಆರ್. ಅವರನ್ನು ಪಶ್ಚಿಮ ವಲಯದ ಹೊಸ ಐಜಿಪಿಯಾಗಿ ನೇಮಿಸಲಾಗಿದೆ. ಹಿರಿಯ ಪೊಲೀಸ್ ಆಡಳಿತದಲ್ಲಿ ರಾಜ್ಯ ಸರ್ಕಾರ ಮಾಡಿದ ಇತ್ತೀಚಿನ ಬದಲಾವಣೆಗಳ ಭಾಗವಾಗಿ ಈ ನೇಮಕಾತಿ ಬಂದಿದೆ.
ಕಡಬ: ಕಳೆದ ಕೆಲ ದಿನಗಳಿಂದ ಕಡಬ ಬಳ್ಳ ಪ್ರದೇಶದಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳ ಹಿಂಡು ಶುಕ್ರವಾರ ಐತೂರು ಗ್ರಾಮದತ್ತ ತೆರಳಿ, ಕೊರಿಯರ್ ಸಮೀಪದ ಅರಣ್ಯ ಇಲಾಖೆಯ ರಬ್ಬರ್ ತೋಟಕ್ಕೆ ನುಗ್ಗಿದೆ. ಇದರಿಂದ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಹಿಂಡಿನಲ್ಲಿ ಎರಡು ಮರಿಯಾನೆಗಳು ಸೇರಿದಂತೆ ಒಟ್ಟು ಎಂಟು ಕಾಡಾನೆಗಳಿವೆ. ಬಳ್ಳ ಗ್ರಾಮದ ಪಠೋಳಿ ಪ್ರದೇಶದಲ್ಲಿ ಕಾಡಾನೆಗಳ ಹೆಜ್ಜೆ ಗುರುತುಗಳು ಪತ್ತೆಯಾದ ಬಳಿಕ ಹಿಂಡು ಕಲ್ಕಲ್ ಪ್ರದೇಶದತ್ತ ಸಾಗಿತ್ತು. ಈ ವೇಳೆ ಕಾಡಾನೆಗಳು ಹಲವು ಬೈನೆ…
ಮಂಗಳೂರು: ಕುಂಬಾರ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಬದ್ಧವಾಗಿದ್ದು, ಸಮಾಜದ ಅಭಿವೃದ್ಧಿಗಾಗಿ ದೊರೆಯುವ ವಿವಿಧ ಯೋಜನೆಗಳು, ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲಾಗುವುದು ಎಂದು ರಾಜ್ಯ ಕುಂಬಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶ್ರೀನಿವಾಸ್ ವೇಲು ಹೇಳಿದ್ದಾರೆ. ಶನಿವಾರ ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಭೇಟಿ ಕುಂಬಾರ ಸಮಾಜದ ಕಾಂಗ್ರೆಸ್ ಕಾರ್ಯಕರ್ತರ ಅಹವಾಲು ಸ್ವೀಕರಿಸಿ ಬಳಿಕ ಅವರು…
ಮಂಗಳೂರು: ಶಕ್ತಿ ವಿದ್ಯಾ ಸಂಸ್ಥೆ ಮತ್ತು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಮಂಗಳೂರು ಇದರ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಕೃಷ್ಣ ವೇಷ ಸ್ಪರ್ಧೆ ಶ್ರೀ ಕೃಷ್ಣಮಯ-2026ರ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಾರ್ಡೋ ಲೈಟ್ ಸ್ಪೆಷಾಲಿಟಿ ಕೆಮಿಕಲ್ಸ್ ಇಂಡಿಯಾ ಇದರ ಮುಖ್ಯ ವ್ಯವಸ್ಥಾಪಕ ದಿವಾಕರ್ ಕದ್ರಿ ಅವರು ದೀಪವನ್ನು ಬೆಳಗಿಸಿ, ನಂತರ ಪುಟ್ಟ ಶ್ರೀ ಕೃಷ್ಣನನ್ನು ತೊಟ್ಟಿಲಲ್ಲಿ ಮಲಗಿಸಿ ತೊಟ್ಟಿಲನ್ನು ತೂಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಅವರು ಮಾತನಾಡಿ, ‘ಇವತ್ತು…
ಮಂಗಳೂರು: ಕರುಣೆ, ಸಹೋದರತ್ವ ಹಾಗೂ ಸಾಮಾಜಿಕ ಒಳಗೊಳ್ಳುವಿಕೆಯ ಸಂದೇಶ ಸಾರುವ ನಿಟ್ಟಿನಲ್ಲಿ ಪ್ರಿಸನ್ ಮಿನಿಸ್ಟ್ರಿ ಇಂಡಿಯಾ ಮಂಗಳೂರು ಘಟಕದ ವತಿಯಿಂದ ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ರಕ್ಷಾಬಂಧನ ಆಚರಿಸಲಾಯಿತು. ಬಂಧಿಗಳು ಹಾಗೂ ಜೈಲು ಸಿಬ್ಬಂದಿಯನ್ನು ಒಂದೇ ವೇದಿಕೆಯಲ್ಲಿ ಸೇರಿಸಿ, ಸಹೋದರತ್ವ ಮತ್ತು ಮಾನವೀಯತೆಯ ಭಾವನೆ ಮೂಡಿಸಲಾಯಿತು. ಬಂಧಿಗಳು, ಜೈಲು ಸಿಬ್ಬಂದಿ ಹಾಗೂ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸ್ವಯಂಸೇವಕರಿಗೆ ದೇವರ ಆಶೀರ್ವಾದ ದೊರೆಯಲಿ ಎಂದು ಪ್ರಾರ್ಥಿಸಲಾಯಿತು. ರಕ್ಷಾಬಂಧನದ…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸಂತ ಆಗ್ನೆಸ್ ಕಾಲೇಜಿನ (ಸ್ವಾಯತ್ತ) ರಾಜ್ಯಶಾಸ್ತ್ರ ವಿಭಾಗದ ಜಂಟಿ ಆಶ್ರಯದಲ್ಲಿ ‘ಕನ್ನಡ ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಗೆ ಕ್ರೈಸ್ತರ ಕೊಡುಗೆ’ ವಿಷಯದ ಕುರಿತು ದತ್ತಿ ಉಪನ್ಯಾಸ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಭ. ಡಾ. ವೆನಿಸ್ಸಾ ಎ.ಸಿ. ಅವರು, ಕನ್ನಡ ಭಾಷೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಇಂತಹ ಸಾಹಿತ್ಯಿಕ…
ಬಂಟ್ವಾಳ: ಬಿ.ಸಿ. ರೋಡಿನ ಕೈಕುಂಜೆ ರಸ್ತೆಯಲ್ಲಿ ಶುಕ್ರವಾರ ಬೆಳಗ್ಗಿನಿಂದ ಸಂಜೆಯವರೆಗೆ ಉನ್ಮತ್ತ ಬೀದಿನಾಯಿಯೊಂದು ಐವರ ಮೇಲೆರಗಿದೆ. ಇವರಲ್ಲಿ ಓರ್ವ ಮಹಿಳೆ ಮತ್ತು ಶಾಲೆಗೆ ಹೋಗುವ ಪುಟ್ಟ ಬಾಲಕಿ ಸೇರಿದ್ದಾರೆ. ನೂರಾರು ಜನರು ಸಂಚರಿಸುವ ಸರಕಾರಿ ಕಚೇರಿಗಳು ಹಾಗೂ ಜನವಸತಿ ಇರುವ ಪ್ರದೇಶದಲ್ಲಿ ದಿನವಿಡೀ ನಡೆದ ಈ ಘಟನೆಯಿಂದ ಜನರು ಆತಂಕಕ್ಕೀಡಾಗಿದ್ದಾರೆ. ಬೆಳಗ್ಗೆ ಸುಮಾರು 6 ಗಂಟೆಯಿಂದ ಸಂಜೆ ಸುಮಾರು 4.30ರ ಅವಧಿಯಲ್ಲಿ ಐದು ಮಂದಿಗೆ ಈ ನಾಯಿ ಕಚ್ಚಿದೆ. ಮೊದಲ ಘಟನೆ ಬೆಳಗ್ಗೆ ಸುಮಾರು 6…
ಕಡಬ: ಅಕ್ರಮವಾಗಿ ಅಂದರ್ ಬಾಹರ್ ಇಸ್ಪಿಟ್ ಆಟವಾಡುತ್ತಿದ್ದ ಸ್ಥಳಕ್ಕೆ ಕಡಬ ಪೊಲೀಸರು ದಾಳಿ ನಡೆಸಿದ್ದು, ಓರ್ವನನ್ನು ಬಂಧಿಸಿದ್ದು, ಮೂರು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತನನ್ನು ಕಡಬ ಕುದ್ಮಾರು ನಿವಾಸಿ ಗುರುವ (44) ಎಂದು ಗುರುತಿಸಲಾಗಿದೆ. ಆ.28 ರಂದು ಸಂಜೆ ಕಡಬದ ಹಳೆನೆರೆಂಕಿ ಗ್ರಾಮದ ಕುನ್ನಿಕು ಎಂಬಲ್ಲಿ ಅಕ್ರಮವಾಗಿ ಇಸ್ಪಿಟ್ ಆಡುತ್ತಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಜಂಬುರಾಜ್ ಮಹಾಜನ್ ಅವರಿಗೆ ಮಾಹಿತಿ ಬಂದ ಮೇರೆಗೆ ಸಿಬ್ಬಂದಿಗಳೊಂದಿಗೆ ಸದ್ರಿ…
ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೇ ಕಳೆದ ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮುಕಚೇರಿ ಸಮೀಪದ ಹಿಲರಿಯ ನಗರ ನಿವಾಸಿ ಮುವಾಝ್ (45) ಬಂಧಿತ ಆರೋಪಿ. ಈತ ಕೇರಳದ ಇರಿಕ್ಕೂರು ಎಂಬಲ್ಲಿ ವಾಸವಾಗಿದ್ದ. ಈತನ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನ್ಯಾಯಾಲಯಕ್ಕೆ ಹಾಜರಾಗದೆ ತಲೆಮೆರೆಸಿಕೊಂಡಿದ್ದ ಈತನ ವಿರುದ್ಧ ನ್ಯಾಯಾಲಯವು ಎಲ್ ಪಿ ಸಿ ವಾರೆಂಟ್ ಹೊರಡಿಸಿತ್ತು.ಈತನನ್ನು ಮಂಗಳೂರು ಪೂರ್ವ ಪೊಲೀಸ್ ಠಾಣಾ ಪೊಲೀಸರು…
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಮಾನವಿಕ ಸಂಘದ ಆಶ್ರಯದಲ್ಲಿ ಆ.28 ರಂದು ವಿದ್ಯಾರ್ಥಿಗಳಿಗಾಗಿ ವೃತ್ತಿ ಮಾರ್ಗದರ್ಶನ ತರಬೇತಿ ಕಾರ್ಯಗಾರ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ನಿವೃತ್ತ ಪ್ರಾಂಶುಪಾಲ ಹಾಗೂ ರಾಷ್ಟ್ರೀಯ ತರಬೇತುದಾರ ಸೀತಾರಾಮ ಕೇವಳ ಮಾತನಾಡಿ, ಕಲಾ ವಿಭಾಗವನ್ನು ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಕಲಾ ವಿಭಾಗದಲ್ಲಿ ಅಡಗಿರುವ ಸೃಜನಶೀಲತೆ, ಸ್ವಂತಿಕೆ ಹಾಗೂ ಪ್ರತಿಭೆಯ ಬಗ್ಗೆ ತಿಳಿಸಿದರು. ವಿದ್ಯಾರ್ಥಿಗಳು ತಮಗೆ…
ಪುತ್ತೂರು: ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜು ಪುತ್ತೂರು ಇದರ ಆಶ್ರಯದಲ್ಲಿ ಆ.28 ರಂದು ನಡೆದ ‘ಫಿಲೋನೆಕ್ಸ-2026’ ಅಂತರ್ ಕಾಲೇಜು ಮಟ್ಟದ ವಿವಿಧ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ. ವಿಜ್ಞಾನ ಮಾದರಿ ತಯಾರಿ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಶಿಶಿರ್ ರೈ ಹಾಗೂ ಆಶ್ರಯ್ ಎ. ಶೆಟ್ಟಿ ಪ್ರಥಮ ಸ್ಥಾನ ಹಾಗೂ ವಿಜ್ಞಾನ ರಂಗೋಲಿ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಸಿಯಾ ಸುಧೀರ್ ಹಾಗೂ…
ಮೂಡುಬಿದಿರೆ: ಇಲ್ಲಿನ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಇತ್ತೀಚೆಗೆ ಮೂಡುಬಿದಿರೆಯ ಕನ್ನಡ ಭವನದಲ್ಲಿ ನಡೆದ ರಾಜ್ಯಪಟ್ಟದ ವಿವಿಧ ವಿಭಾಗಗಳ ಕರಾಟೆ ಸ್ಪರ್ಧೆಯಲ್ಲಿ ಅಮೋಘ ಪ್ರದರ್ಶನ ನೀಡುವುದರೊಂದಿಗೆ ಹಲವು ಬಹುಮಾನಗಳನ್ನು ಗಳಿಸಿ ಚಾಂಪಿಯನ್ ಪಟ್ಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ವಿವಿಧ ವಿಭಾಗಗಳಲ್ಲಿ ನಡೆದ ಕರಾಟೆ ಸ್ಪರ್ಧೆಯಲ್ಲಿ ಒಟ್ಟು 8 ಚಿನ್ನದ ಪದಕ, 7 ಬೆಳ್ಳಿ ಪದಕ ಮತ್ತು 4 ಕಂಚಿನ ಪದಕಗಳಿಗೆ ಎಕ್ಸಲೆಂಟ್ ಶಾಲೆಯ ವಿದ್ಯಾರ್ಥಿಗಳು ಭಾಜನರಾಗಿದ್ದಾರೆ. ವಿಜೇತ…
ಮೂಡುಬಿದಿರೆ: ರಕ್ಷಾ ಬಂಧನದ ಪ್ರಯುಕ್ತ ಬಿಜೆಪಿ ಮಹಿಳಾ ಮೋಚಾ೯ದ ವತಿಯಿಂದ ಮೆಸ್ಕಾಂ ಕಛೇರಿ, ಅಗ್ನಿಶಾಮಕ ಮತ್ತು ಪೊಲೀಸ್ ಠಾಣೆಯ ಸಿಬಂದಿಗಳಿಗೆ ಮತ್ತು ಮಾಜಿ ಸೈನಿಕರಿಗೆ ರಾಖಿಯನ್ನು ಕಟ್ಟುವ ಮೂಲಕ ಸಹೋದರತೆಯ ಬಾಂಧವ್ಯವನ್ನು ನೆನಪಿಸಿ ಶುಭವನ್ನು ಹಾರೈಸಲಾಯಿತು. ಮಹಿಳಾ ಮೋಚಾ೯ದ ಅಧ್ಯಕ್ಷೆ ಗೀತಾಲಕ್ಷ್ಮೀ ಮತ್ತು ಸದಸ್ಯರು, ಯುವ ಮೋಚಾ೯ದ ಅಧ್ಯಕ್ಷ ಕುಮಾರ್ ಪ್ರಸಾದ್ ಈ ಸಂದಭ೯ದಲ್ಲಿದ್ದರು.
ಮೂಡುಬಿದಿರೆ: ನಮ್ಮ ಜೀವಕ್ಕಿಂತ ಅಮೂಲ್ಯವಾದದ್ದು ಯಾವುದೂ ಇಲ್ಲ. ದ್ವಿಚಕ್ರ ವಾಹನದಲ್ಲಿ ಕಾಲೇಜಿಗೆ ಬರುವ ವಿದ್ಯಾರ್ಥಿಗಳು ಮನೆಯಲ್ಲಿ ತಂದೆತಾಯಿಗಳು ತಮ್ಮ ಬರುವಿಕೆಯನ್ನು ಎದುರು ನೋಡುತ್ತಿರುತ್ತಾರೆ, ರಸ್ತೆಯಲ್ಲಿ ಯದ್ವಾತದ್ವಾ ವಾಹನ ಚಲಾಯಿಸಿ ಪ್ರಾಣಕ್ಕೆ ಕುತ್ತುಂಟಾಗಿ ಹೆತ್ತವರನ್ನು ಅನಾಥರನ್ನಾಗಿ ಮಾಡಬೇಡಿ ಎಂದು .ಜಿ. ಸೋನ್ಸ್ ಕೈಗಾರಿಕಾ ತರಬೇತಿ ಸಂಸ್ಥೆಯ ತರಬೇತಿ ಅಧಿಕಾರಿ ಲಯನ್ ಶಿವಪ್ರಸಾದ್ ಹೆಗ್ಡೆ ಕಣಂಜಾರು ಹೇಳಿದರು. ಅವರು ಬಂಟರ ಮಹಿಳಾ ಘಟಕ ಮೂಡುಬಿದಿರೆ ಮತ್ತು ಆಳ್ವಾಸ್…
ಮೂಡುಬಿದಿರೆ: ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ನಾರಾಯಣಗುರು ಸೇವಾದಳ ಹಾಗೂ ನಾರಾಯಣಗುರು ಮಹಿಳಾ ಘಟಕದ ವತಿಯಿಂದ 9ನೇ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ವ್ರತ ಪೂಜೆಯು ಶುಕ್ರವಾರ ನಡೆಯಿತು. ಮಹಿಳಾ ಘಟಕದ ಅಧ್ಯಕ್ಷೆ ಸವಿತಾ ಜಿತೇಶ್, ಕಾರ್ಯದರ್ಶಿ ಸುಶ್ಮಿತಾ ಕೋಟ್ಯಾನ್, ಕೋಶಾಧಿಕಾರಿ ಸ್ಮಿತಾ ಬಾಸ್ಕರ, ಉಪಾಧ್ಯಕ್ಷರಾದ ಮಮತಾ ನಾರಾಯಣ ಹಾಗೂ ಪೂರ್ಣಿಮಾ ಬಾಲಕೃಷ್ಣ ಸೇರಿದಂತೆ ಎಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರು ಕಾರ್ಯಕ್ರಮದ ವ್ಯವಸ್ಥೆಯಲ್ಲಿ ಸಹಕರಿಸಿದರು. ಮಾತೃ ಸಂಘದ…
ಉಜಿರೆ: ನಮ್ಮ ಮನ ಮತ್ತು ಮನೆ ಪರಿಶುದ್ಧವಾಗಿ, ಸ್ವಚ್ಛ ಇದ್ದರೆ ಲಕ್ಷ್ಮೀ ಚಂಚಲೆ ಆಗುವುದಿಲ್ಲ ಎಂದು ಬೆಂಗಳೂರಿನ ಕ್ಷೇಮವನದ ಸಿ.ಇ.ಒ. ಶ್ರದ್ಧಾ ಅಮಿತ್ ಹೇಳಿದರು. ಅವರು ಶುಕ್ರವಾರ ಕೊಲ್ಲಿ ದುರ್ಗಾದೇವಿ ದೇವಸ್ಥಾನದ ವಠಾರದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಮಹಿಳಾ ವಿಭಾಗದ ಆಶ್ರಯದಲ್ಲಿ ನಡೆದ ವರಮಹಾಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಸಾಮಾನ್ಯವಾಗಿ ಲಕ್ಷ್ಮೀ ಚಂಚಲೆ ಎಂಬ ನಂಬಿಕೆ ಇದೆ. ಲಕ್ಷ್ಮೀ ಚಂಚಲೆ ಆಗುವುದಿಲ್ಲ. ಅಷ್ಟಲಕ್ಷ್ಮೀಯರ ಆರಾಧನೆಯಿಂದ…
ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ)ದಲ್ಲಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಕುತೂಹಲ, ಸೃಜನಶೀಲತೆ ಮತ್ತು ನವೀನ ಚಿಂತನೆಯನ್ನು ಬೆಳೆಸುವ ಉದ್ದೇಶದಿಂದ 2026-27ನೇ ಸಾಲಿನ ಸೈನ್ಸ್ ಫೋರಂ (ವಿಜ್ಞಾನ ವೇದಿಕೆ)ಯನ್ನು ಆ.24 ರಂದು ಉದ್ಘಾಟಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ವಂ. ಡಾ. ಆಂಟನಿ ಪ್ರಕಾಶ್ ಮೊಂತೇರೊ ಅವರು ಮಾತನಾಡಿ, ವಿದ್ಯಾರ್ಥಿಗಳು ಭೌತಿಕವಾದಿ ಮನೋಭಾವದಿಂದ ಹೊರಬಂದು ವಿಜ್ಞಾನದ ಬಗ್ಗೆ ಆಸಕ್ತಿ, ಶಿಸ್ತು ಮತ್ತು ದೃಢಸಂಕಲ್ಪವನ್ನು…
ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ (ಪದವಿಪೂರ್ವ) ಉಪನಿರ್ದೇಶಕರ ಕಚೇರಿ, ಮಂಗಳೂರು ಇವರ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಅಂಡರ್–19 ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ಯೋಗಾಸನ ಸ್ಪರ್ಧೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ಬಾಲಕ ಹಾಗೂ ಬಾಲಕಿಯರ ತಂಡ ಅತ್ಯುತ್ತಮ ಸಾಧನೆಗೈದು ಸಮಗ್ರ ತಂಡ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಆಳ್ವಾಸ್ ತಂಡವು ಸ್ಪರ್ಧೆಯಲ್ಲಿ 7 ಚಿನ್ನ ಹಾಗೂ 1 ಬೆಳ್ಳಿ ಸೇರಿದಂತೆ ಒಟ್ಟು 8 ಪದಕಗಳನ್ನು ಗೆದ್ದು ಗಮನಾರ್ಹ ಸಾಧನೆ ಮಾಡಿದೆ. ತಂಡದ…
ಮೂಡುಬಿದಿರೆ: ಬೆಳುವಾಯಿ ಸಹಕಾರಿ ವ್ಯವಸಾಯಿಕ ಸಂಘ ನಿಯಮಿತ ವತಿಯಿಂದ ಮೂಡುಬಿದಿರೆ ಕಾರ್ಕಳ ರಾಜ್ಯ ಹೆದ್ದಾರಿಯಲ್ಲಿನ ಬನ್ನಡ್ಕ ದೈವಸ್ಥಾನದ ಸಮೀಪ ನಿರ್ಮಿಸಲಾದ ನೂತನ ಸೋಲಾರ್ ದಾರಿ ದೀಪವನ್ನು ದಕ್ಷಿಣ ಕನ್ನಡ ಜಿಲ್ಲಾ ಡಿಸಿಸಿ ಬ್ಯಾಂಕ್ ನಿರ್ದೇಶಕ, ಬೆಳುವಾಯಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಸಹಕಾರಿ ರತ್ನ ಬೆಳುವಾಯಿ ಭಾಸ್ಕರ್ ಕೋಟ್ಯಾನ್ ಲೋಕಾಪ೯ಣೆಗೊಳಿಸಿದರು. ಈ ಸ್ಥಳದಲ್ಲಿ ಬೆಳಕಿನ ಕೊರತೆಯಿಂದ ಹಾಗೂ ಇನ್ನಿತರ ಕಾರಣಗಳಿಂದ ಆಗಾಗ ಸಂಭವಿಸುತ್ತಿರುವ ಅಪಘಾತಗಳ ಬಗ್ಗೆ ದಾರಿದೀಪದ…
ಮಂಗಳೂರು: ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆ ಬೆಳೆಸುವುದರ ಜೊತೆಗೆ, ಅವರಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಕಲ್ಕೂರ ಪ್ರತಿಷ್ಠಾನ ಹಾಗೂ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಸಹಯೋಗದಲ್ಲಿ ರಾಷ್ಟ್ರಮಟ್ಟದ 44ನೇ ಮಕ್ಕಳ ಉತ್ಸವ ಹಾಗೂ ಶ್ರೀಕೃಷ್ಣ ವೇಷ ಸ್ಪರ್ಧೆ ಸೆ.4ರಂದು ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಆವರಣದಲ್ಲಿ ನಡೆಯಲಿದೆ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 44…
ಪೊಳಲಿ: ಮುಜರಾಯಿ ಇಲಾಖೆಗೊಳಪಟ್ಟ ಐತಿಹಾಸಿಕವಾದ ಹಿನ್ನಲೆಯನ್ನು ಹೊಂದಿರುವ ಮತ್ತು ಸಾವಿರ ಸೀಮೆಯ ಒಡತಿ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕಾಗಮಿಸುವ ಭಕ್ತರು ಕಡ್ಡಾಯವಾಗಿ ವಸ್ತ್ರ ಸಂಹಿತೆಯನ್ನು ಪಾಲಿಸುವಂತೆ ದೇವಸ್ಥಾನದ ವತಿಯಿಂದ ಕ್ರಮ ಕೈಗೊಳ್ಳಬೇಕು ಸಹಿತ ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಆಗ್ರಹಿಸಿ ಕರಿಯಂಗಳ, ಪೊಳಲಿ ಹಿಂದೂ ಧಾರ್ಮಿಕ ಶಿಕ್ಷಣ ಹಕ್ಕೊತ್ತಾಯ ಸಮಿತಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಹಾಗೂ ಆಡಳಿತ ಮೊಕ್ತೇಸರರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದೆ. ದೇವಳದಲ್ಲಿ…
ಬಂಟ್ವಾಳ: ಟೆಂಪೋ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಪಾದಚಾರಿ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತ ಪಟ್ಟ ಘಟನೆ ಸಂಭವಿಸಿದೆ. ಬೆಳ್ತಂಗಡಿ ತಾಲೂಕಿನ ಕುಕ್ಕಳ ಗ್ರಾಮದ ಬಾಬು ಅವರ ಪುತ್ರ ಸುನಿಲ್ (23) ಮೃತಪಟ್ಟ ಯುವಕನಾಗಿದ್ದಾನೆ. ಸುನಿಲ್ ಅವರು ಪುಂಜಾಲಕಟ್ಟೆಯಲ್ಲಿ ಕೋಳಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಆ.20 ರಂದು ರಾತ್ರಿ ಕೆಲಸ ಮುಗಿಸಿ ನಡೆದುಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಮಡಂತ್ಯಾರು ಕಡೆಯಿಂದ ಪುಂಜಾಲಕಟ್ಟೆ ಕಡೆಗೆ ಬರುತ್ತಿದ್ದ ಟೆಂಪೋ ಢಿಕ್ಕಿ…
ಮೂಡುಬಿದಿರೆ: ಕರ್ನಾಟಕ ಕ್ರೀಡಾ ಪ್ರಾಧಿಕಾರದಿಂದ ಮಾನ್ಯತೆ ಪಡೆದ ರಾಜ್ಯ ಕಂಬಳ ಅಸೋಸಿಯೇಷನ್ ಹಾಗೂ ಜಿಲ್ಲಾ ಕಂಬಳ ಸಮಿತಿ ಸಂಯುಕ್ತ ಆಶ್ರಯದಲ್ಲಿ ಕಂಬಳ ಓಟಗಾರರ ತರಬೇತಿ ಶಿಬಿರಕ್ಕೆ ಆಯ್ಕೆ ಪ್ರಕ್ರಿಯೆ ಸೆಪ್ಟೆಂಬರ್ 6, 2026ರ ಭಾನುವಾರ ಬೆಳಿಗ್ಗೆ 9.30ಕ್ಕೆ ಕಾರ್ಕಳದ ಮಿಯಾರಿನಲ್ಲಿ ನಡೆಯಲಿದೆ. ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಯುವಕರು ಮತ್ತು ಓಟಗಾರರು ಬೆಳಿಗ್ಗೆ 9ರಿಂದ 10 ಗಂಟೆಯೊಳಗೆ ಹಾಜರಿದ್ದು ನೋಂದಣಿ ಮಾಡಿಸಿಕೊಳ್ಳಬೇಕು. ಆಯ್ಕೆ ಪ್ರಕ್ರಿಯೆಯಲ್ಲಿ ಆಯ್ಕೆಯಾದ ಓಟಗಾರರಿಗೆ…
ಮೂಡುಬಿದಿರೆ: ಆಳ್ವಾಸ್ ಪದವಿ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಜೂನ್‌ನಲ್ಲಿ ನಡೆದ ಕಂಪನಿ ಸೆಕ್ರೆಟರೀಸ್ (ಸಿ.ಎಸ್.) ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆ ಮೆರೆದಿದ್ದಾರೆ. ಕಂಪನಿ ಸೆಕ್ರೆಟರಿ ವೃತ್ತಿಪರ ಅರ್ಹತೆಯ ಅಂತಿಮ ಹಂತದ ಪರೀಕ್ಷೆಯಾದ ಸಿ.ಎಸ್. ಪ್ರೊಫೆಷನಲ್‌ನ ಗ್ರೂಪ್–1 ಮತ್ತು ಗ್ರೂಪ್–2 ಪರೀಕ್ಷೆಗಳಲ್ಲಿ ಆಳ್ವಾಸ್ ಬಿ.ಕಾಂ. ವಿದ್ಯಾರ್ಥಿಗಳಾದ ಅನನ್ಯ ಕೆ.ಎ. (382 ಅಂಕ) ಹಾಗೂ ನಾಗನಾಥ್ (353 ಅಂಕ) ಮೊದಲ ಪ್ರಯತ್ನದಲ್ಲೇ ಉತ್ತೀರ್ಣರಾಗುವ ಮೂಲಕ ಗಮನಾರ್ಹ ಸಾಧನೆ…
ಮೂಡುಬಿದಿರೆ: ರಾಮಾಯಣದ ಅಲಕ್ಷಿತ ಪಾತ್ರವೆಂದೇ ಗುರುತಿಸಲ್ಪಡುವ ಊರ್ಮಿಳೆಯ ನೋವು, ಭಾವನೆ, ತ್ಯಾಗ ಹಾಗೂ ವ್ಯಕ್ತಿತ್ವದ ವಿವಿಧ ಆಯಾಮಗಳನ್ನು ರಂಗಭೂಮಿಯ ಮೂಲಕ ಪರಿಣಾಮಕಾರಿಯಾಗಿ ಅನಾವರಣಗೊಳಿಸಿದ ‘ಅಯನಾ ಪ್ರೆಸೆಂಟ್ಸ್ –ಊರ್ಮಿಳಾ’ ಏಕವ್ಯಕ್ತಿ ರಂಗಪ್ರಯೋಗವು ಬುಧವಾರ ಆಳ್ವಾಸ್‌ನ ಶಿವರಾಮ ಕಾರಂತ ವೇದಿಕೆಯಲ್ಲಿ ನಡೆಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಏಕವ್ಯಕ್ತಿ ರಂಗಪ್ರಯೋಗದಲ್ಲಿ ವಿದುಷಿ ಅಯನಾ ವಿ. ರಮಣ್ ತಮ್ಮ ಅಭಿನಯ, ಭಾವಾಭಿವ್ಯಕ್ತಿ,…
ಮೂಡುಬಿದಿರೆ: ಕೃತಕ ಬುದ್ಧಿಮತ್ತೆಯ ಯುಗದಲ್ಲಿ ಕೇವಲ ಉತ್ತರಗಳನ್ನು ಪಡೆಯುವವರಾಗದೆ, ಪ್ರಶ್ನಿಸುವ, ಯೋಚಿಸುವ ಹಾಗೂ ಸ್ವತಂತ್ರವಾಗಿ ನಿರ್ಧರಿಸುವ ಸಾಮರ್ಥ್ಯವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಇದಕ್ಕೆ ಓದುವ ಅಭ್ಯಾಸ ಅತ್ಯಂತ ಪರಿಣಾಮಕಾರಿ ಸಾಧನವಾಗಿದೆ ಎಂದು ಎಸ್‌ಡಿಎಮ್ ಇಂಜಿನಿಯರಿಂಗ್ ಕಾಲೇಜಿನ ಮುಖ್ಯ ಗ್ರಂಥಾಪಾಲಕಿ ಡಾ ರಜತಾ ಪಿ. ಶೆಟ್ಟಿ ಹೇಳಿದರು. ಅವರು ರಾಷ್ಟ್ರೀಯ ಗ್ರಂಥಾಲಯ ದಿನಾಚರಣೆಯ ಅಂಗವಾಗಿ ಆಳ್ವಾಸ್ ಪದವಿ ಕಾಲೇಜಿನ ಗ್ರಂಥಾಲಯ ವಿಭಾಗದ ವತಿಯಿಂದ ಕುವೆಂಪು ಸಭಾಂಗಣದಲ್ಲಿ…
ಮೂಡುಬಿದಿರೆ: ತುಳು, ಕನ್ನಡ ಭಾಷೆ ಮತ್ತು ಸಂಸ್ಕೃತಿಗೆ ಅಪಾರ ಕೊಡುಗೆ ನೀಡಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರು ಅಲೋಪತಿ ವೈದ್ಯಕೀಯ ಕಾಲೇಜನ್ನು ಆರಂಭಿಸಿದ್ದು, ಕಾಲೇಜಿನ ಒಟ್ಟು 150 ಸೀಟುಗಳ ಪೈಕಿ 52 ಸೀಟುಗಳನ್ನು ತುಳು ಮಾತೃಭಾಷಿಕರಿಗೆ ಮೀಸಲಿರಿಸಿದ್ದಾರೆ. ಈ ಕೊಡುಗೆಯನ್ನು ಶ್ಲಾಘಿಸಿ ಮೂಡುಬಿದಿರೆಯಲ್ಲಿ ಅಖಿಲ ಭಾರತ ತುಳು ಒಕ್ಕೂಟದ ವತಿಯಿಂದ ಡಾ.ಎಂ ಮೋಹನ ಆಳ್ವ ಅವರಿಗೆ ‘ತುಳುವರ ಕಾಮಧೇನು’ ಎಂಬ ಬಿರುದು ನೀಡಿ ಸನ್ಮಾನಿಸಲಾಯಿತು. ಡಾ. ಎಂ. ಮೋಹನ…
ಉಡುಪಿ: ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠ ಉಡುಪಿ ಆಶ್ರಯದಲ್ಲಿ 'ಉಡುಪಿಗೆ ಬನ್ನಿ' ನೇತೃತ್ವದಲ್ಲಿ ಎನ್.ಎನ್. ಇನ್ಫ್ರಾಸ್ಟ್ರಕ್ಚರ್ ಡೆವಲಪರ್ಸ್, ಚಿತ್ರಕೂಟ ಆಯುರ್ವೇದ, ಅನಂತ ವೈದಿಕ ಕೇಂದ್ರ ಉಡುಪಿ ಸಹಕಾರದೊಂದಿಗೆ ವಿಟ್ಲಪಿಂಡಿ ಪ್ರಯುಕ್ತ 'ಕೃಷ್ಣ ರಂಗ' ರಾಜ್ಯಮಟ್ಟದ ರೀಲ್ಸ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಈ ಸ್ಪರ್ಧೆಯ ಪೋಸ್ಟರ್ ಅನ್ನು ಪರ್ಯಾಯ ಶ್ರೀ ಶೀರೂರು ಮಠಾಧೀಶರಾದ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಬುಧವಾರ ಬಿಡುಗಡೆಗೊಳಿಸಿ ಸ್ಪರ್ಧೆಯು ಯಶಸ್ವಿಯಾಗಿ ನಡೆಯಲಿ ಎಂದು…
ಮೂಡುಬಿದಿರೆ: ಮೂಡುಬಿದಿರೆಯಲ್ಲಿ ನಡೆಯುವ ಕೃಷ್ಣ ಜನ್ಮಾಷ್ಟಮಿ ಆಚರಣೆಯು ಅತ್ಯಂತ ವಿಭಿನ್ನ ಹಾಗೂ ವಿಶಿಷ್ಟ. ಶತಮಾನಗಳ ಧಾರ್ಮಿಕ ಪರಂಪರೆಯುಳ್ಳ ಈ ಮೊಸರು ಕುಡಿಕೆ ಉತ್ಸವದಲ್ಲಿ, ಈ ಬಾರಿ ಇಬ್ಬರು ಕೃಷ್ಣ ವೇಷಧಾರಿಗಳು ಚೆಂಡೆಯ ನಾದದೊಂದಿಗೆ ಮನಮೋಹಕವಾಗಿ ನೃತ್ಯ ಪ್ರದರ್ಶಿಸುತ್ತಾ ಮೊಸರಿನ ಕುಡಿಕೆಯನ್ನು ಒಡೆಯುವ ಅಪರೂಪದ ದೃಶ್ಯ ವೈಭವವನ್ನು ಕಣ್ತುಂಬಿಕೊಳ್ಳುವುದೇ ಒಂದು ಮಹಾಸಂಭ್ರಮ. ಬೇರೆಲ್ಲೂ ಕಾಣಸಿಗದ ಇಂತಹ ಅದ್ಭುತ ಸಾಂಸ್ಕೃತಿಕ ಕ್ಷಣಗಳನ್ನು ಸೆರೆಹಿಡಿಯಲು ಮತ್ತು ಸೃಜನಶೀಲತೆಯನ್ನು…
ಮಂಗಳೂರು: ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲ್ವೆ ಪ್ರದೇಶವನ್ನು ನೈರುತ್ಯ ರೈಲ್ವೆಯ ಮೈಸೂರು ವಿಭಾಗದ ಆಡಳಿತ ವ್ಯಾಪ್ತಿಗೆ ಒಳಪಡಿಸಿದರಷ್ಟೇ ಸಾಲದು. ಮಂಗಳೂರನ್ನು ಕೇಂದ್ರೀಕರಿಸಿ ರಾಜ್ಯದ ವಿವಿಧ ಭಾಗಗಳಿಗೆ, ವಿಶೇಷವಾಗಿ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಹಾಗೂ ಹೈದರಾಬಾದ್ ಕರ್ನಾಟಕದ ಭಾಗಗಳಿಗೆ ಹೆಚ್ಚುವರಿ ರೈಲು ಸೇವೆಗಳನ್ನು ಕಲ್ಪಿಸುವ ಕ್ರಮಗಳು ಒಳಗೊಳ್ಳಲು ಸಾಧ್ಯವಾಗಬೇಕೆಂದು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಕೇಂದ್ರದ ರೈಲ್ವೇ ಇಲಾಖೆಯನ್ನು…
ಪುತ್ತೂರು: ದರ್ಬೆಯ ಪ್ರಕರಣವನ್ನು ಕೋಮುರಾಜಕೀಯ ಬಳಕೆ ಮಾಡಲಾಗುತ್ತಿದ್ದು, ಅಡಿಕೆ ಬೆಳೆಗಾರರಿಗೆ ಹಂದಿ ಮತ್ತು ಮಂಗಗಳ ಕಾಟವಾದರೆ ಪುತ್ತೂರಿಗೆ ಬಿಜೆಪಿ ಮತ್ತು ಸಂಘಪರಿವಾರದ ಕಾಟ ವಿಪರೀತವಾಗಿದೆ. ಪುತ್ತೂರಿನ ಘಟನೆಗೆ ಕೋಮುಬಣ್ಣ ಹಚ್ಚುವ ಪ್ರಯತ್ನವನ್ನು ಬಿಜೆಪಿ ನಾಯಕರು ಮಾಡುತ್ತಿದ್ದು, ದರ್ಬೆಯಲ್ಲಿ ಕೊಲೆ ಸುಲಿಗೆ ಅತ್ಯಾಚಾರ ಅನಾಚಾರ ನಡೆದಿಲ್ಲ. ಸಣ್ಣಮಟ್ಟಿನ ತಳ್ಳಾಟವನ್ನು ದೊಡ್ಡ ವಿಷಯವಾಗಿಸಿ ಗಲಭೆ ನಡೆಸಲು ಬಿಜೆಪಿ ಮತ್ತು ಸಂಘಪರಿವಾರ ಮುಂದಾಗಿದೆ ಎಂದು ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ…
ಧರ್ಮಸ್ಥಳ: ಗ್ರಾಮೀಣ ಬದುಕಿನ ಸೊಗಡು, ಸಂಸ್ಕೃತಿ ಹಾಗೂ ಸಾಂಪ್ರದಾಯಿಕ ಕ್ರೀಡೆಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಮೂಡಂಗಲ್ ಫ್ರೆಂಡ್ಸ್, ಧರ್ಮಸ್ಥಳ ಇವರ ನೇತೃತ್ವದಲ್ಲಿ ಧರ್ಮಸ್ಥಳದಲ್ಲಿ ‘ಕೆಸರ್‌ಡ್ ಒಂಜಿ ದಿನ’ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಉದ್ಘಾಟಿಸಿ, ಮಾತನಾಡಿ, ಕೆಸರ್‌ಡ್ ಒಂಜಿ ದಿನದಂತಹ ಕಾರ್ಯಕ್ರಮಗಳು ಗ್ರಾಮೀಣ ಬದುಕಿನ ಸೊಗಡು,…
ಉಳ್ಳಾಲ: ಹಜ್, ಉಮ್ರಾ ವ್ಯವಸ್ಥೆ ಮಾಡುವ ಖಾಸಗಿ ಸಂಸ್ಥೆಗಳು ಯಾತ್ರಾರ್ಥಿಗಳನ್ನು ಅರ್ಧದಾರಿಯಲ್ಲಿ ಬಿಟ್ಟು ಬಂದಿರುವ ಬಗ್ಗೆ ಆರೋಪಗಳು ಬಹಳಷ್ಟು ಇವೆ. ಈ ಹಿನ್ನೆಲೆಯಲ್ಲಿ ಹಜ್, ಉರ್ಮಾ ನಿರ್ವಾಹಕ ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿ ವಿಶೇಷ ಕಾನೂನು ಜಾರಿ ಮಾಡಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಇಲಾಖೆ ಸಚಿವ ಯು.ಟಿ. ಖಾದರ್ ಹೇಳಿದರು. ಅವರು ಮೀಲಾದುನ್ನಬಿ ಪ್ರಯುಕ್ತ ಉಳ್ಳಾಲ ದರ್ಗಾ ಅಧೀನದಲ್ಲಿ ಬರುವ 27 ಮೊಹಲ್ಲಾಗಳ ವ್ಯಾಪ್ತಿಯ 34 ಮದ್ರಸ ವಿದ್ಯಾರ್ಥಿಗಳನ್ನು ಒಳಗೊಂಡ…
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರ ಶಾಂತಿ ಸುವ್ಯವಸ್ಥೆ ಕದಡುವಂತಹ ಹಾಗೂ ಪ್ರಚೋದನಕಾರಿ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ್ದ ಮಂಜುನಾಥ್ ಎಂಬಾತನ ಮೇಲೆ ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಟ್ಸ್‌ಆಪ್‌ನಲ್ಲಿ ಮಂಜುನಾಥ್ ಎಂಬ ಹೆಸರಿನ ಖಾತೆಯನ್ನು ಹೊಂದಿರುವ ವ್ಯಕ್ತಿಯು, ವಾಟ್ಸಾಪ್ ಮೂಲಕ ರಾಜಕೀಯ ಪಕ್ಷವೊಂದರ ಹೆಸರಿನಲ್ಲಿ ಆ.26 ರಂದು ಪುತ್ತೂರು ಬಂದ್ ನಡೆಸಲು ಸವಾಲು ಹಾಕುವಂತಹ ಪ್ರಚೋದನಕಾರಿ ಹಾಗೂ ಸಾರ್ವಜನಿಕ ಶಾಂತಿ ಸುವ್ಯವಸ್ಥೆ…
ಪುತ್ತೂರು: ಹಿಂದೂ ಜಾಗರಣ ವೇದಿಕೆ ದರ್ಬೆ ಪ್ರಕರಣಕ್ಕೆ ಸಂಬಂಧಿಸಿ ಸ್ವಯಂಪ್ರೇರಿತ ಬಂದ್ ಕರೆಗೆ ಸಾರ್ವತ್ರಿಕ ರಜಾ ದಿನ ಹಾಗೂ ಈದ್‌ಮಿಲಾದ್ ಹಬ್ಬದ ಸಹಕಾರ ಉತ್ತಮ ಬೆಂಬಲ ನೀಡಿದ ಪರಿಣಾಮ ಮಂಗಳವಾರ ಪುತ್ತೂರು ನಗರವಿಡೀ ಬಂದ್ ಆಚರಿಸಿತು. ದರ್ಬೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿ ಹಿಂದೂ ಜಾಗರಣಾ ವೇದಿಕೆ ಸ್ವಯಂಪ್ರೇರಿತ ಬಂದ್‌ಗೆ ಕರೆ ನೀಡಿತ್ತು. ಈ ಹಿನ್ನಲೆಯಲ್ಲಿ ಬಹುತೇಕ ಅಂಗಡಿ-ಮುಂಗಟ್ಟುಗಳು ಬಾಗಿಲೇ ತೆರೆಯಲಿಲ್ಲ. ಈ ನಡುವೆ ಈದ್ ಮಿಲಾದ್ ಹಬ್ಬದ ಕಾರಣ ಮುಸ್ಲಿಂ ಸಮುದಾಯ ತಮ್ಮ ಅಂಗಡಿಗಳ…
ಪುತ್ತೂರು: ದರ್ಬೆ ಪ್ರಕರಣದಲ್ಲಿ ಮಹಿಳೆ ಮತ್ತು ಇತರರ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿ ಸ್ವಯಂಪ್ರೇರಿತ ಬಂದ್ ಕರೆಗೆ ಬೆಂಬಲ ವ್ಯಕ್ತವಾಗಿದೆ. ಆ.21ರಂದು 3 ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪುತ್ತೂರು ಚಲೋ ಹೋರಾಟದ ಮೂಲಕ ಹೋರಾಟ ಮುಂದುವರಿಸಲಿದ್ದೇವೆ ಎಂದು ಹಿಂದೂ ಜಾಗರಣಾ ವೇದಿಕೆ ಪ್ರಾಂತ ಸಹಕಾರ್ಯದರ್ಶಿ ಪ್ರಶಾಂತ್ ತಿಳಿಸಿದ್ದಾರೆ. ಮಂಗಳವಾರ ಹಲ್ಲೆಗೊಳಗಾದ ಮಹಿಳೆ ಅಂಜನಾ ಪೈ ಅವರನ್ನು ಭೇಟಿಯಾದ ಬಳಿಕ ಅವರು ಮಾದ್ಯಮಗಳೊಂದಿಗೆ ಮಾತನಾಡಿದರು. ಹಿಂದೂ ಜಾಗರಣಾ ವೇದಿಕೆ, ವಿಶ್ವಹಿಂದೂ…
ಮಂಗಳೂರು: ಭಾರತ್ ಜೋಡೋ ಯುವ ಸಂಘ ಯೋಜನೆಯ ನೋಂದಣಿ ಪ್ರಕ್ರಿಯೆಯನ್ನು ಚುರುಕುಗೊಳಿಸಿ ನಿರಂತರವಾಗಿ ಅನುಸರಣೆ ಮಾಡುವಂತೆ ಮಂಗಳೂರು ಮನಪಾ ಆಯುಕ್ತ ರಾಹುಲ್ ರತ್ನಂ ಪಾಂಡೆ ಸೂಚನೆ ನೀಡಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಸೋಮವಾರ ನಡೆದ ಭಾರತ್ ಜೋಡೋ ಯುವ ಸಂಘ (DM-UÀR) ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿಶೇಷವಾಗಿ ಯುವಜನರಿಗೆ ಯೋಜನೆಯ ಪ್ರಯೋಜನಗಳ ಕುರಿತು ಸೂಕ್ತ ಮಾಹಿತಿ ನೀಡಿ ಜಾಗೃತಿ ಮೂಡಿಸು ವಂತೆ ನಿರ್ದೇಶಿಸಿದ ಅವರು…
ಮಂಗಳೂರು: ಮಂಗಳೂರು ಸುತ್ತಮುತ್ತಲಿನ ರೈಲ್ವೆ ಅಧಿಕಾರ ವ್ಯಾಪ್ತಿಯನ್ನು ನೈಋತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಒಳಪಡಿಸುವ ರೈಲ್ವೆ ಮಂಡಳಿಯ ನಿರ್ಧಾರವನ್ನು ಅಕ್ಟೋಬರ್ 1ರಿಂದಲೇ ಜಾರಿಗೊಳಿಸಲು ಕರ್ನಾಟಕ ಸರ್ಕಾರ ಕೇಂದ್ರ ಸರ್ಕಾರಕ್ಕೆ ತನ್ನ ಬೆಂಬಲವನ್ನು ಅಧಿಕೃತವಾಗಿ ತಿಳಿಸಬೇಕು ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿಗೆ ಪತ್ರ ಬರೆದಿರುವ ಅವರು, ಆ.21ರಂದು ರೈಲ್ವೆ ಮಂಡಳಿ ಹೊರಡಿಸಿರುವ…
ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಲ್ಲೇಗ ಸಮೀಪದ ಮುರ ನಿವಾಸಿ ಹರ್ಷದ್ ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇಂದು ಪರ್ಲೋಟು ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹರ್ಷದ್ ತೀವ್ರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಲ್ಲೆ: ಮಲ್ಪೆ ಬಂದರಿನಲ್ಲಿ ಲಂಗರು ಹಾಕಲಾಗಿದ್ದ ಮೀನುಗಾರಿಕಾ ಬೋಟ್‌ನ ಕ್ಯಾಬಿನ್‌ನಲ್ಲಿ ಮೀನುಗಾರ ಕಾರ್ಮಿಕರಿಬ್ಬರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಚೂರಿ ಇರಿತದಿಂದ ಓರ್ವ ಮೃತಪಟ್ಟಿರುವ ಘಟನೆ ಮಂಗಳವಾರ ಮುಂಜಾನೆ ನಡೆದಿದೆ. ಮೃತನನ್ನು ಚಿಕ್ಕಮಗಳೂರು ಮೂಲದ ಅಭಿಷೇಕ್ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದ ಎಂಬಾತನನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಸೋಮವಾರ ರಾತ್ರಿ ಬೋಟ್‌ನಲಗಲೀಯೇ ಗೋವಿಂದ ಹಾಗೂ ಅಭಿಷೇಕ್ ನಡುವೆ ಗಲಾಟೆ ನಡೆದಿತ್ತು. ಇದೇ ವಿಚಾರವಾಗಿ…
ಮಂಗಳೂರು: ಮುಂಗಡ ಬುಕಿಂಗ್‌ನಲ್ಲಿ ಟಾಕ್ಷಿಕ್ ಸಿನಿಮಾ ದಾಖಲೆ ಬರೆಯುತ್ತಿರುವ ಕುರಿತು ಸಂತಸ ವ್ಯಕ್ತಪಡಿಸಿರುವ ಚಿತ್ರದ ನಾಯಕ ನಟ ಯಶ್, "ಇದೆಲ್ಲವೂ ಶ್ರೀ ಮಂಜುನಾಥ ಸ್ವಾಮಿ ಹಾಗೂ ಜನರ ಆಶೀರ್ವಾದ. ಇದರಲ್ಲಿ ನಮ್ಮದೇನೂ ಇಲ್ಲ, ಎಲ್ಲವೂ ದೇವರ ಮತ್ತು ಜನರ ಪ್ರೀತಿ. ಎಲ್ಲರಿಗೂ ಒಳ್ಳೆಯದಾಗಲಿ, ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹ ಎಲ್ಲರ ಮೇಲೂ ಸದಾ ಇರಲಿ’ ಎಂದಿದ್ದಾರೆ. ಟಾಕ್ಷಿಕ್ ಬಿಡುಗಡೆ ಹಿನ್ನೆಲೆಯಲ್ಲಿ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥನಿಗೆ ಪೂಜೆ ಸಲ್ಲಿಸಿದ ಬಳಿಕ…