RSS Amplifier

News source

News Karkala

ಸುದ್ದಿ, ಮಾಹಿತಿ ಮತ್ತು ಮಾರ್ಗದರ್ಶನ

newskarkala.comSource feed ↗20 articles

Overdue Last read · last published · next check
Last read 3 hours ago, longer than this feed's 1 hour schedule.

Latest articles

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ಪ್ರಧಾನ ಸಂಚಾಲಕರಾಗಿ ರಮೇಶ್ ಬಿ. ಪೆರ್ವಾಜೆ

ಕಾರ್ಕಳ : ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ)ಯ ಕಾರ್ಕಳ ಶಾಖೆಯ ಪ್ರಧಾನ ಸಂಚಾಲಕರಾಗಿ ರಮೇಶ್ ಬಿ. ಪೆರ್ವಾಜೆ ಆಯ್ಕೆಯಾದ್ದಾರೆ.ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ತರ್, ಉಡುಪಿ ವಿಭಾಗೀಯ ಸಂಚಾಲಕ ಶ್ಯಾಮ್‌ರಾಜ್ ಭಿರ್ತಿ, ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕ ಟಿ. ಮಂಜುನಾಥ ಗಿಳಿಯಾರು ಆಯ್ಕೆ ಪ್ರಕ್ರಿಯೆ ನೆರವೇರಿಸಿದರು. The post ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ಪ್ರಧಾನ ಸಂಚಾಲಕರಾಗಿ ರಮೇಶ್ ಬಿ. ಪೆರ್ವಾಜೆ appeared first on News Karkala .

ವರದಿ ಪ್ರಕಟಿಸಿದ ಬೆನ್ನಲ್ಲೇ ಪತ್ರಕರ್ತನ ಮೇಲೆ ಸರಕಾರಿ ವೈದ್ಯನಿಂದ ಹಲ್ಲೆ

ಕುಂದಾಪುರ : ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಭ್ರಷ್ಟಾಚಾರದ ಕುರಿತು ಸರಣಿ ವರದಿ ಪ್ರಕಟಿಸಿದ್ದ ಹಿನ್ನೆಲೆಯಲ್ಲಿ, ಕನ್ನಡಪ್ರಭ ದಿನಪತ್ರಿಕೆಯ ಕುಂದಾಪುರ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ಸರ್ಕಾರಿ ವೈದ್ಯರೊಬ್ಬರು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಕುಂದಾಪುರದ ಖಾಸಗಿ ಹೊಟೇಲಿನಲ್ಲಿ ತನ್ನ ಪತ್ನಿ ಹಾಗು ಗೆಳಯರೊಂದಿಗೆ ಕುಳಿತಿದ್ದ ಶ್ರೀಕಾಂತ್ ಹೆಮ್ಮಾಡಿಯವರ ಮೇಲೆ ಕುಂದಾಪುರ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ. ಮಹೇಂದ್ರ ಶೆಟ್ಟಿ ಏಕಾಏಕಿ ಹಲ್ಲೆ…

ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಕಾಯ್ದೆ 2006

ಲಾಭದ ಆಸೆಗಾಗಿ ಆಹಾರ ಪದಾರ್ಥಗಳಲ್ಲಿ ಕಳಪೆ ಗುಣಮಟ್ಟದ, ಹಾನಿಕರ ಅಥವಾ ನಿಷೇಧಿತ ವಸ್ತುಗಳನ್ನು ಬೆರೆಸಿ ಅದರ ಮೂಲ ಗುಣಮಟ್ಟವನ್ನು ಕಡಿಮೆ ಮಾಡುವುದನ್ನು ಆಹಾರ ಕಲಬೆರಕೆ ಎನ್ನಲಾಗುತ್ತದೆ. ನಮ್ಮ ಭಾರತ ದೇಶದಲ್ಲಿ ಆಹಾರ ಸುರಕ್ಷತೆಯನ್ನು ಕಾಪಾಡುವುದಕ್ಕಾಗಿ ಹಳೆಯದಾದ ‘ಆಹಾರ ಕಲಬೆರಕೆ ನಿಯಂತ್ರಣ ಕಾಯ್ದೆ 1954 ಎಂಬ ಕಾನೂನು ಜ್ಯಾರಿಯಲ್ಲಿತ್ತು. ಆಹಾರ ಪದಾರ್ಥಗಳ ಕಲಬೆರಕೆಯ ದುಷ್ಟತನವು ನಮ್ಮ ದೇಶಾದ್ಯಂತ ವ್ಯಾಪಕವಾಗಿ ಮತ್ತು ನಿರಂತರವಾಗಿ ಬೆಳೆದ ಕಾರಣ ಮತ್ತು ಈ ಕಾನೂನಿನಲ್ಲಿ ಕಂಡು ಬರುತ್ತಿದ್ದ…

ದಸ್ಕತ್ ಸಿನೆಮಾ ನಿರ್ದೇಶಕರಿಂದ ಹೊಸ ಚಿತ್ರ ‘ಅಜ್ಜಿಕಥೆ’!

ದುಬೈನಲ್ಲಿ ಶೀರ್ಷಿಕೆ ಅನಾವರಣ ಕಾರ್ಕಳ : ಲವ್ ಕಾಕ್‌ಟೈಲ್, ಅಪ್ಪೆ ಟೀಚರ್, ಮಾಲ್ಗುಡಿ ಡೇಸ್, ಹೌದ್ದೋ ಹುಲಿಯ ಸೇರಿದಂತೆ ವಿಭಿನ್ನ ಕಥೆಗಳು ಹಾಗೂ ಮನರಂಜನೆಯ ಚಿತ್ರಗಳನ್ನು ಪ್ರೇಕ್ಷಕರಿಗೆ ನೀಡಿರುವ ಸ್ವಯಂ‌ಪ್ರಭ ಎಂಟರ್ಟೈನ್ಮೆಂಟ್ & ಪ್ರೋಡಕ್ಷನ್ ಸಂಸ್ಥೆಯಿಂದ ಇದೀಗ ಮತ್ತೊಂದು ಹೊಸ ಚಿತ್ರ ತೆರೆಗೆ ಬರಲು ಸಜ್ಜಾಗಿದೆ. ವಿಭಿನ್ನ ಕಥಾಹಂದರ ಹಾಗೂ ಹಾಸ್ಯ ಮನರಂಜನೆಯೊಂದಿಗೆ ಮೂಡಿಬರುತ್ತಿರುವ ಹೊಸ ಚಿತ್ರವೇ ‘ಅಜ್ಜಿಕಥೆ’. ಆ. 20ರಂದು ದುಬೈನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ‘ಅಜ್ಜಿಕಥೆ’…

ಸರ್ವರ್‌ ಡೌನ್ :‌ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿಗೆ ತಾತ್ಕಾಲಿಕ ತಡೆ

ಬೆಂಗಳೂರು : ಸರ್ವರ್‌ ಡೌನ್‌ ಬೆನ್ನಲ್ಲೇ ರಾಜ್ಯದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿಗೆ ತಾತ್ಕಾಲಿಕ ತಡೆ ನೀಡಲಾಗಿದೆ.ಸೆಪ್ಟೆಂಬರ್ 1ರ ಬಳಿಕ ಇ-ಕೆವೈಸಿಗೆ ಸೂಚನೆ ನೀಡಲಾಗಿದೆ. ಸೆಪ್ಟೆಂಬರ್ ಅಂತ್ಯದೊಳಗೆ ರೇಷನ್ ಕಾರ್ಡ್ ಇ-ಕೆವೈಸಿ ಮಾಡಬೇಕು. ಇ-ಕೆವೈಸಿಗೆ ಗಡುವು ವಿಧಿಸಿದ್ದರಿಂದ ಜನ ಏಕಾಏಕಿ ಮುಗಿಬಿದ್ದಿದ್ದರು. ಈ ತಿಂಗಳು ಒಂದೇ ಸಲ ಎರಡು ತಿಂಗಳ ಅಕ್ಕಿ ಕೊಡಬೇಕಾಗಿರುವುದರಿಂದ ಎರಡು ಸಲ ಬಯೋಮೆಟ್ರಿಕ್ ನೀಡಬೇಕಾಗಿತ್ತು. ಹೀಗಾಗಿ, ಸರ್ವರ್ ಕ್ಲ್ಯಾಷ್ ಆಗಿ ಜನ ಕ್ಯೂನಲ್ಲಿ ನಿಂತು…

ಮೋದಿ, ಶಾ ಟೆಲಿಪ್ರಾಂಪ್ಟರ್ ಇಲ್ಲದೆ ಪೂರ್ತಿ ವಂದೇ ಮಾತರಂ ಹಾಡಿದ್ರೆ ರಾಜೀನಾಮೆ ಕೊಡ್ತೀನಿ : ಪ್ರಿಯಾಂಕ್ ಖರ್ಗೆ ಸವಾಲ್

ಬೆಂಗಳೂರು : ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ವಂದೇ ಮಾತರಂ ಗೀತೆಯನ್ನು ಟೆಲಿಪ್ರಾಂಪ್ಟರ್ ಇಲ್ಲದೇ ಪೂರ್ತಿ ಹಾಡಿದರೆ ನಾನು ರಾಜೀನಾಮೆ ಕೊಡ್ತೀನಿ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸವಾಲ್ ಹಾಕಿದ್ದಾರೆ. ವಂದೇ ಮಾತರಂ ಗೀತೆ ಎರಡೇ ಪ್ಯಾರ ಹಾಡುವ ಕಾಂಗ್ರೆಸ್ ನಿರ್ಣಯದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, 1937ರಲ್ಲಿ ಸರ್ದಾರ್ ಪಟೇಲ್, ನೆಹರೂ, ಬೋಸ್, ಟ್ಯಾಗೂರ್ ಸೇರಿ ಒಂದು ತೀರ್ಮಾನಕ್ಕೆ ಬಂದರು. ಎರಡು ಪ್ಯಾರ ಅಂತ ತೀರ್ಮಾನ ಮಾಡಿದರು. ಅದನ್ನ ನಾವು ಅಳವಡಿಸಿಕೊಂಡು […] The post…

ಚಿನ್ನ ಅಡವಿರಿಸಿಕೊಂಡು ಮುತ್ತೂಟ್‌ ಫೈನಾನ್ಸ್‌ ಸಿಬ್ಬಂದಿಯಿಂದ ಮಹಿಳೆಗೆ ವಂಚನೆ

ಹೆಬ್ರಿ : ಮಹಿಳೆಯಿಂದ ಚಿನ್ನ ಅಡವಿರಿಸಿಕೊಂಡು ಮುತ್ತೂಟ್‌ ಫೈನಾನ್ಸ್‌ ಸಿಬ್ಬಂದಿ ವಂಚನೆ ಮಾಡಿರುವ ಬಗ್ಗೆ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಬ್ರಿ ಗ್ರಾಮದ ಶೃತಿ ಎಂಬವರು 2025ರ ಫೆ. 23ರಂದು ತಮ್ಮ ತಾಯಿಗೆ ಆರೋಗ್ಯ ಸರಿಯಿಲ್ಲದ ಕಾರಣ ತುರ್ತು ಚಿಕಿತ್ಸೆಗಾಗಿ ಹಣದ ಅಗತ್ಯವಿದ್ದುದರಿಂದ ಹೆಬ್ರಿ ಮುತ್ತೂಟ್‌ ಪೈನಾನ್ಸ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಪರಿಚಯದ ಮಂಜುನಾಥರವರಲ್ಲಿ ತಿಳಿಸಿದಾಗ ಅವರು ನಿಮ್ಮಲ್ಲಿ ಚಿನ್ನ ಇದ್ದರೆ ಕೊಡಿ ತಾನು ಪೈನಾನ್ಸ್‌ನಲ್ಲಿ ಇಟ್ಟು ಹಣ…

ಚಿತ್ರ ಕಲಾವಿದ ಕಮಲ್ ಅಹ್ಮದ್ ಮಾಳೇಕೊಪ್ಪ ಅವರಿಗೆ ರಾಷ್ಟ್ರಪತಿ ಗೌರವ

ಕಾರ್ಕಳ : ಕಾರ್ಕಳದಲ್ಲಿ ವಾಸ್ತವ್ಯವಿರುವ ಗದಗ ಜಿಲ್ಲೆಯ ಖ್ಯಾತ ಚಿತ್ರಕಲಾವಿದ, ವಿಜಯನಗರ ಗರುಡಾದ್ರಿ ಶೈಲಿಯಿಂದ ಪ್ರಭಾವಿತರಾದ ಕಮಲ್ ಅಹ್ಮದ್ ಮಾಳೇಕೊಪ್ಪ ಅವರಿಗೆ ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರತಿಷ್ಠಿತ “ಆರ್ಟಿಸ್ಟ್ ಇನ್ ರೆಸಿಡೆನ್ಸಿ” ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಗೌರವ ದೊರಕಿದೆ. ದೆಹಲಿಯ ರಾಷ್ಟ್ರಪತಿ ಭವನದಲ್ಲಿ 10 ದಿನಗಳ ಕಾಲ ಆಯೋಜಿಸಲಾದ ಈ ವಿಶೇಷ ಕಾರ್ಯಕ್ರಮದಲ್ಲಿ ಭಾರತದೆಲ್ಲೆಡೆಯ ವಿವಿಧ ಸಾಂಪ್ರದಾಯಿಕ ಕಲಾ…

ಅಬ್ದುಲ್‌ ರಹಿಮಾನ್ ಹತ್ಯೆ ಪ್ರಕರಣ – 5 ಆರೋಪಿಗಳಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಇರಾಕೋಡಿಯಲ್ಲಿ ನಡೆದಿದ್ದ ಕೊಳತ್ತಮಜಲು ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೊಕಾ) ಅಡಿಯಲ್ಲಿ ಆರೋಪಿಗಳಾಗಿದ್ದ ಐವರಿಗೆ ಹೈಕೋರ್ಟ್ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಆರೋಪಿಗಳಾದ ಪವನ್ ಮಾರುತಿ ಗಾಯಕ್ವಾಡ್ (ಎ19), ಅನಂತ ನಾಗೋಜಿ ಸಾವಂತ್ (ಎ21), ಬಿಟ್ಟಪ್ಪ ನಾಗಪ್ಪ ತರಿಹಾಳ (ಎ22), ಎಂ. ನವೀನ್ ಕುಮಾರ್ (ಎ23) ಹಾಗೂ ಸಾಗರದ…

ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ : ಹರಿಪ್ರಸಾದ್ ಸವಾಲು

ಬೆಂಗಳೂರು : ವಂದೇ ಮಾತರಂ ಮುಂದಿಟ್ಟುಕೊಂಡು ರಾಜಕೀಯ ಮಾಡುವ ದೇಶದ್ರೋಹಿಗಳೇ ತಾಕತ್ತಿದ್ರೆ ಆರ್‌ಎಸ್‌ಎಸ್‌ ಶಾಖೆಯಲ್ಲಿ ರಾಷ್ಟ್ರಗೀತೆ ಹಾಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಆರೆಸ್ಸೆಸ್, ಬಿಜೆಪಿಗೆ ಸವಾಲು ಹಾಕಿದರು. ಆ. 21ರಂದು ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ವಂದೇ ಮಾತರಂ ಎರಡು ಚರಣ ಮಾತ್ರ ಹಾಡುತ್ತೇವೆ. CWC ಸರಿಯಾದ ನಿರ್ಣಯವನ್ನು ತೆಗೆದುಕೊಂಡಿದೆ. ನಾವು ಇದನ್ನ ಸ್ವಾಗತಿಸುತ್ತೇನೆ. ಬಿಜೆಪಿಯವರು ಏನೇ ಕಾನೂನು ತರಲಿ, ಇವರು ನಮ್ಮನ್ನು…

ವಂದೇ ಮಾತರಂನ ಎರಡು ಚರಣ ಹಾಡುವ ನಿರ್ಧಾರ ದೇಶ ವಿರೋಧಿ -ಕಾಂಗ್ರೆಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ

ಚೆನ್ನೈ : ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಕಾಂಗ್ರೆಸ್‌ ಕಾರ್ಯಕ್ರಮಗಳಲ್ಲಿ ಹಾಡುವ ನಿರ್ಧಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಈ ನಿರ್ಧಾರವನ್ನು ಅವರು ದೇಶವಿರೋಧಿ ಎಂದು ಟೀಕಿಸಿದ್ದು, ಇದು ಕಾಂಗ್ರೆಸ್‌ನ ಹಳೆಯ ತುಷ್ಟೀಕರಣ ರಾಜಕಾರಣವನ್ನು ಮತ್ತೆ ಮುನ್ನೆಲೆಗೆ ತಂದಿದೆ ಎಂದು ಆರೋಪಿಸಿದ್ದಾರೆ. ತಮಿಳುನಾಡಿನ ಚೆಂಗಲ್ಪಟ್ಟಿನಲ್ಲಿ ಮಾತನಾಡಿದ ಅಮಿತ್ ಶಾ, 1937ರಲ್ಲಿ ಕಾಂಗ್ರೆಸ್ ವಂದೇ ಮಾತರಂ ಅನ್ನು…

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ರಾಜೀವ್ ಗಾಂಧಿ, ದೇವರಾಜ ಅರಸು ಜನ್ಮದಿನಾಚರಣೆ

ಕಾರ್ಕಳ : ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಭಾರತ ರತ್ನ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಬ್ಲಾಕ್ ಅಧ್ಯಕ್ಷ ಶುಭದರಾವ್ ಮಹನೀಯರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪಾರ್ಚನೆಗೈದು ಗೌರವ ಸಲ್ಲಿಸಿದರು. ಕಾಂಗ್ರೆಸ್ ಉಡುಪಿ ಜಿಲ್ಲಾ ವಕ್ತಾರ ಬಿಪಿನ್ ಚಂದ್ರಪಾಲ್ ನಕ್ರೆ ಮಾತನಾಡಿ, ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಅವರು ಪಂಚಾಯತ್ ರಾಜ್ ವ್ಯವಸ್ಥೆಯನ್ನು ಸಮರ್ಪಕವಾಗಿ ಅನುಷ್ಠಾನಿಸಿದ…

ಘನತ್ಯಾಜ್ಯ ನಿರ್ವಹಿಸದ ಮಾಲ್‌, ಹೊಟೇಲ್‌ಗಳಿಗೆ ವಿದ್ಯುತ್, ನೀರು ಸಂಪರ್ಕ ಕಡಿತ : ಸುಪ್ರೀಂ ಕೋರ್ಟ್ ಆದೇಶ

ದೆಹಲಿ : ಘನತ್ಯಾಜ್ಯ ನಿರ್ವಹಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ, ಅದು ಕೇವಲ ನೈರ್ಮಲ್ಯ ಕಾರ್ಮಿಕರ ಹೊಣೆಗಾರಿಕೆಯಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. ಘನತ್ಯಾಜ್ಯ ನಿರ್ವಹಣಾ ನಿಯಮಗಳನ್ನು ಪಾಲಿಸದ ದೊಡ್ಡ ಮಾಲ್‌ಗಳು, ಹೊಟೇಲ್‌ಗಳು, ಆಸ್ಪತ್ರೆಗಳು, ವಾಣಿಜ್ಯ ಸಂಕೀರ್ಣಗಳು ಹಾಗೂ ದೊಡ್ಡ ವಸತಿ ಸಂಘಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆದೇಶಿಸಿದೆ. ನಿಯಮ ಪಾಲಿಸದ ಬೃಹತ್ ತ್ಯಾಜ್ಯ ಉತ್ಪಾದಕರನ್ನು ಆರು ವಾರಗಳೊಳಗೆ ಗುರುತಿಸಬೇಕು. ನಿಯಮ ಪಾಲನೆಗೆ ವಿಫಲವಾದರೆ ಅವರ ನೀರು ಅಥವಾ…

ಬಾಳೆಹಣ್ಣಿಗೆ ಕೃತಕ ಬಣ್ಣ ಹಚ್ಚುತ್ತಿದ್ದ ಜಾಲ ಪತ್ತೆ – ಅಧಿಕಾರಿಗಳಿಂದ ದಿಢೀರ್‌ ದಾಳಿ

ಉಡುಪಿ : ಉಡುಪಿ ಸಮೀಪದ ಅಲೆವೂರು ಗ್ರಾಮದ 3-4 ಬಾಳೆ ಹಣ್ಣು ದಾಸ್ತಾನು ಕೇಂದ್ರಗಳಿಗೆ ಆ. 20ರಂದು ಏಕಕಾಲದಲ್ಲಿ ಧಿಡೀರ್ ದಾಳಿ ನಡೆಸಿದ ಕುಂದಾಪುರ ಅಸಿಸ್ಟೆಂಟ್ ಕಮಿಷನರ್ ರಶ್ಮಿ ಎಸ್. ಆರ್. ಹಾಗೂ ಆರೋಗ್ಯಾಧಿಕಾರಿಗಳು ಬಾಳೆ ಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಸುತ್ತಿದ್ದ ಹಲವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಗುರುವಾರ ಮಂಜಾನೆ ಕೆಸ್ತೂರು ಹಾಗೂ ಮಣಿಪಾಲ ಸಮೀಪದ ದುಗ್ಗಿ ಪರಿಸರದಲ್ಲಿ ಬಾಳೆ ಹಣ್ಣು ರಖಂ ವ್ಯಾಪಾರಸ್ಥರು ಹಾಗೂ ದಾಸ್ತಾನುದಾರರ ಗೋದಾಮುಗಳಿಗೆ ದಾಳಿ ನಡೆಸಿದ ಅಧಿಕಾರಿಗಳು,…

ಡಿ.‌ ದೇವರಾಜ ಅರಸು 111ನೇ ಜನ್ಮ‌ ದಿನಾಚರಣೆ

ಅರಸು ಆಡಳಿತಾವಧಿಯಲ್ಲಿ ಕ್ರಾಂತಿಕಾರಿ ಬದಲಾವಣೆ – ಪ್ರದೀಪ್‌ ಆರ್. ಕಾರ್ಕಳ : ಭೂ ಸುಧಾರಣೆ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನದೊಂದಿಗೆ ರಾಜ್ಯದಲ್ಲಿ ಕ್ರಾಂತಿಕಾರಿ ಬದಲಾವಣೆಗೆ ನಾಂದಿ ಹಾಡಿದ ಡಿ. ದೇವರಾಜ ಅರಸು ಅವರನ್ನು ಸದಾ ಸ್ಮರಿಸುವ ಕಾರ್ಯವಾಗಬೇಕೆಂದು ಕಾರ್ಕಳ ತಹಶೀಲ್ದಾರ್‌ ಪ್ರದೀಪ್‌ ಆರ್.‌ ಹೇಳಿದರು. ಅವರು ಜಿಲ್ಲಾ ಪಂಚಾಯತ್, ಕಾರ್ಕಳ ತಾಲೂಕು ಪಂಚಾಯತ್, ತಾಲೂಕು ಆಡಳಿತ, ಪುರಸಭೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆ. 20ರಂದು ಕಾರ್ಕಳ ಡಿ. ದೇವರಾಜ…

ಅರ್ಹ ಫಲಾನುಭವಿಗಳಿಗೆ ಪಿಂಚಣಿ ಮುಂದುವರೆಸುವಂತೆ ಕಂದಾಯ ಇಲಾಖೆ ಆದೇಶ

ಬೆಂಗಳೂರು : ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯಡಿ ಪರಿಶೀಲನೆಯ ನಂತರ 1.20 ಲಕ್ಷ ರೂ.ಒಳಗಿನ ವಾರ್ಷಿಕ ಆದಾಯ ಮಿತಿ ಹೊಂದಿರುವ ಅರ್ಹ ಫಲಾನುಭವಿಗಳ ಪಿಂಚಣಿಗಳನ್ನು ಮುಂದುವರೆಸುವಂತೆ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಈ ಬಗ್ಗೆ ಮಾಹಿತಿ ನೀಡಿದ ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ.ಜಿ.ಪರಮೇಶ್ವರ್ ಅವರು ವಿವಿಧ ಸಾಮಾಜಿಕ ಪಿಂಚಣಿಗಳಾದ ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲ ವೇತನ ಇತ್ಯಾದಿಗಳಿಗೆ 32 ಸಾವಿರ ರೂ. ಆದಾಯ ಮಿತಿ ಇತ್ತು. ಬಹಳ ದಿನಗಳಿಂದ ಇದೇ ಆದಾಯ ಮಿತಿಯಿದ್ದ ಕಾರಣ […] The…

ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ

ಉಡುಪಿ : ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಬ್ರಹ್ಮಾವರ ಸಮೀಪ ಬೆಂಕಿ ಹೊತ್ತಿಕೊಂಡ ಘಟನೆ ಸಂಭವಿಸಿದ್ದು, ಬಸ್‌ನಲ್ಲಿದ್ದ ಏಳು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್‌ನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಬಳಿಕ ಬಸ್‌ನ ಎಲೆಕ್ಟ್ರಿಕಲ್ ಬಾಕ್ಸ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ವ್ಯಾಪಿಸಲು ಆರಂಭಿಸಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ನಿರ್ವಾಹಕರು ತಕ್ಷಣ ಸಮಯಪ್ರಜ್ಞೆ ಮೆರೆದು ಬಸ್ ನಿಲ್ಲಿಸಿ…

ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಿ ಅಭಿಮನ್ಯುಗೆ ರಾಜೋಚಿತ ಬೀಳ್ಕೊಡುಗೆ ನೀಡಿ – ಈಶ್ವರ ಖಂಡ್ರೆ ಮನವಿ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅಭಿಮನ್ಯು ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಿ ರಾಜೋಚಿತ ಬೀಳ್ಕೊಡುಗೆ ನೀಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಮನವಿ ಮಾಡಿದ್ದಾರೆ. ಈ ಸಂಬಂಧ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಪತ್ರ ಬರೆದಿರುವ ಅವರು, ದಸರಾ ಮಹೋತ್ಸವದಲ್ಲಿ ನಾಡದೇವಿ ಚಾಮುಂಡೇಶ್ವರಿ ವಿರಾಜಮಾನಳಾದ 750 ಕೆ.ಜಿ. ತೂಕದ ಚಿನ್ನದಂಬಾರಿ ಹೊತ್ತು ಗಜಗಾಂಭೀರ್ಯದಿಂದ ಹೆಜ್ಜೆ…

ಆಳ್ವಾಸ್ ಪ್ರಗತಿಯಲ್ಲಿ 2416 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಉದ್ಯೋಗ : 6183 ಮಂದಿ ಶಾರ್ಟ್‌ಲಿಸ್ಟ್ – ವಿವೇಕ್ ಆಳ್ವ

ಮಂಗಳೂರು : ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ವತಿಯಿಂದ ಆಯೋಜಿಸಲಾದ 16ನೇ ಆವೃತ್ತಿಯ ಉದ್ಯೋಗ ಮೇಳ ಆಳ್ವಾಸ್ ಪ್ರಗತಿಯಲ್ಲಿ 2416 ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ಉದ್ಯೋಗದ ಆಫರ್ ದೊರಕಿದೆ. 6183 ಅಭ್ಯರ್ಥಿಗಳು ವಿವಿಧ ಹುದ್ದೆಗಳಿಗೆ ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ ಎಂದು ಪ್ರತಿಷ್ಟಾನದ ಟ್ರಸ್ಟಿ ವಿವೇಕ್ ಆಳ್ವ ತಿಳಿಸಿದ್ದಾರೆ. ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಆ.19ರಂದು ಸುದ್ದಿಗೋಷ್ಟಿಯಲ್ಲಿ ಪ್ರಗತಿ ಯಶಸ್ಸಿನ ಬಗ್ಗೆ ಮಾಹಿತಿ ಹಂಚಿಕೊಂಡ ಅವರು, ಉದ್ಯೋಗ ಮೇಳದಲ್ಲಿ 332 ಕಂಪನಿಗಳು ಹಾಗೂ…

ಎಸ್‌ಕೆಪಿಎ ಕಾರ್ಕಳ ವಲಯ – ಆರೋಗ್ಯ ತಪಾಸಣಾ ಶಿಬಿರ

ಕೆ.ಎಂ. ಖಲೀಲ್ ಅವರಿಗೆ ವಲಯದ ವತಿಯಿಂದ ʼಛಾಯಾ ಸಾಧಕʼ ಪ್ರಶಸ್ತಿ ಕಾರ್ಕಳ : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದಕ್ಷಿಣ ಕನ್ನಡ–ಉಡುಪಿ ಜಿಲ್ಲೆ ಕಾರ್ಕಳ ವಲಯದ ವತಿಯಿಂದ ವಿಶ್ವ ಛಾಯಾಗ್ರಾಹಕರ ದಿನಾಚರಣೆಯ ಪ್ರಯುಕ್ತ ಕಸ್ತೂರ್ಬಾ ಮೆಡಿಕಲ್ ಹಾಸ್ಪಿಟಲ್ ಮಣಿಪಾಲ ಹಾಗೂ ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ ಕಾರ್ಕಳ ಇವರ ಸಹಯೋಗದಲ್ಲಿ ಸಾಲ್ಮರದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.ಜಮಾತುಲ್…