RSS Amplifier

Blog

Samagra Samachara

ಮುಕ್ತ, ನಿರ್ಭೀತ, ನಿಷ್ಪಕ್ಷಪಾತ ವರದಿ

samagrasamachara.comSource feed ↗46 posts

Overdue Last read · last published · next check
Last read 14 hours ago, longer than this feed's 2 hours schedule.

Written by

Latest posts

ಉಜಿರೆ: ಅಪ್ರಾಪ್ತೆಯ ಅತ್ಯಾಚಾರ; ಆರೋಪಿಯ ಬಂಧನ

ಸಮಗ್ರ ನ್ಯೂಸ್: 16 ವರ್ಷದ ಬಾಲಕಿಯೊಬ್ಬಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಪ್ರಕರಣ ಸಂಬಂಧ ಆರೋಪಿ ಶ್ರೀಕಾಂತ್ (21) ಎಂಬಾತನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ‘ಬಾಲಕಿಯ ಮೇಲೆ ಆರೋಪಿ ಶ್ರೀಕಾಂತ್ (21) ಒಂದು ವರ್ಷದ ಅವಧಿಯಲ್ಲಿ ಅತ್ಯಾಚಾರ ಮಾಡಿ, ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದ. ಬಳಿಕ ಬಾಲಕಿ ಗರ್ಭಿಣಿಯಾಗಿದ್ದು, ಆ.22ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ’ ಎಂದು ಪೊಲೀಸರು ತಿಳಿಸಿದ್ದಾರೆ. ಆ.23ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಪ್ರಕರಣ ದಾಖ ಲಾಗಿತ್ತು.…

ವಾಲ್ಮೀಕಿ ನಿಗಮ ಹಗರಣ| ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡಲು ಹೈಕಮಾಂಡ್ ಸೂಚನೆ

ಸಮಗ್ರ ನ್ಯೂಸ್: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಚಿವ ಬಿ. ನಾಗೇಂದ್ರ ಅವರಿಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟ ಸೂಚನೆ ನೀಡಿದೆ. ಪ್ರಕರಣದ ತನಿಖೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಂದ ರಾಜ್ಯದ ಪ್ರಸಕ್ತ ರಾಜಕೀಯ ಬೆಳವಣಿಗೆಗಳು ಮತ್ತು ತನಿಖೆಯ ವಿವರಗಳನ್ನು ಹೈಕಮಾಂಡ್…

ಇಂದು ಪವಿತ್ರ ರಕ್ಷಾ ಬಂಧನ| ರಾಖಿ ಕಟ್ಟುವ ಸಂಪ್ರದಾಯಕ್ಕಿದೆ ಪೌರಾಣಿಕ ಹಿನ್ನಲೆ

ಸಮಗ್ರ ನ್ಯೂಸ್: ಶ್ರಾವಣ ಮಾಸದ ಹುಣ್ಣಿಮೆಯಂದು ಆಚರಿಸುವ ರಕ್ಷಾಬಂಧನ ಸಹೋದರ-ಸಹೋದರಿಯರ ನಡುವಿನ ಪ್ರೀತಿ ಮತ್ತು ಬಾಂಧವ್ಯವನ್ನು ಸಾರುವ ಪ್ರಮುಖ ಹಬ್ಬ. ಈ ದಿನ ಸಹೋದರಿ ಸಹೋದರನ ಕೈಗೆ ರಾಖಿ ಕಟ್ಟಿ, ಆತನ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ಹಾರೈಸುತ್ತಾಳೆ. ಸಹೋದರ ಕೂಡ ತನ್ನ ತಂಗಿ ಅಥವಾ ಅಕ್ಕನ ಬೆಂಬಲಕ್ಕೆ ನಿಲ್ಲುವ ಭರವಸೆ ನೀಡುತ್ತಾನೆ. ರಾಖಿ ಕಟ್ಟುವ ಈ ಸಂಪ್ರದಾಯಕ್ಕೆ ಸಂಬಂಧಿಸಿದಂತೆ ಹಲವು ಪೌರಾಣಿಕ ಕಥೆಗಳು ಹಾಗೂ ಜನಪ್ರಿಯ ಐತಿಹಾಸಿಕ ಉಲ್ಲೇಖಗಳು ಚಾಲ್ತಿಯಲ್ಲಿವೆ. ಇಂದ್ರ ಮತ್ತು…

ದ.ಕ ಜಿಲ್ಲೆಯಲ್ಲಿ 87 H1N1 ಪ್ರಕರಣ ದೃಢ – ಡಿಎಚ್ಒ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026ರಲ್ಲಿ ಇದುವರೆಗೆ ಒಟ್ಟು 87 ಎಚ್‌1ಎನ್‌1 ರೀತಿಯ (ಇನ್‌ಫ್ಲುಯೆಂಜಾ 1) ಪ್ರಕರಣಗಳು ದೃಢಪಟ್ಟಿವೆ. ಈ ರೋಗವನ್ನು ಪತ್ತೆ ಹಚ್ಚಲು, ಹರಡದಂತೆ ನಿಗಾ ವಹಿಸಲು ಹಾಗೂ ಸೂಕ್ತ ಚಿಕಿತ್ಸೆ ಒದಗಿಸಲು ಆರೋಗ್ಯ ಇಲಾಖೆ ಕ್ರಮ ವಹಿಸಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಚ್.ಆರ್‌.ತಿಮ್ಮಯ್ಯ ತಿಳಿಸಿದರು. ಇಲ್ಲಿ ಸುದ್ದಿಗೋಷ್ಠಿಯಲ್ಲಿ ಗುರುವಾರ ಈ ಕುರಿತು ಮಾಹಿತಿ ನೀಡಿದ ಅವರು, ‘ಇನ್‌ಫ್ಲುಯೆಂಜಾ ವೈರಸ್‌ನಿಂದ…

ಝೀ ಗ್ರೂಪ್ ನ ಸುಭಾಷ್ ಚಂದ್ರ 22 ಸಾವಿರ ಕೋಟಿ ಸಾಲ 6.5 ಕೋಟಿಗೆ ಸೆಟ್ಲ್ ಮೆಂಟ್!!

ಸಮಗ್ರ ನ್ಯೂಸ್: ಝೀ ಗ್ರೂಪ್ ಸಂಸ್ಥಾಪಕ ಹಾಗೂ ಉದ್ಯಮಿ ಸುಭಾಷ್ ಚಂದ್ರ ಅವರ ವೈಯಕ್ತಿಕ ದಿವಾಳಿತನ ಪ್ರಕರಣದಲ್ಲಿ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ (NCLT) ನೀಡಿರುವ ಆದೇಶವು ಭಾರೀ ಚರ್ಚೆಗೆ ಗ್ರಾಸವಾಗಿದೆ. ಒಟ್ಟು ₹22,000 ಕೋಟಿಗೂ ಅಧಿಕ ಸಾಲದ ಕ್ಲೇಮ್‌ಗಳಿಗೆ ಪ್ರತಿಯಾಗಿ, ಕೇವಲ ₹6.5 ಕೋಟಿ ಪಾವತಿಸುವ ಸುಭಾಷ್ ಚಂದ್ರ ಅವರ ಮರುಪಾವತಿ ಯೋಜನೆಗೆ ನ್ಯಾಯಮಂಡಳಿ ಅನುಮೋದನೆ ನೀಡಿದೆ. ಈ ಯೋಜನೆಯ ಪ್ರಕಾರ ಸಾಲ ನೀಡಿದ ಬ್ಯಾಂಕ್‌ಗಳು ಹಾಗೂ ಹಣಕಾಸು ಸಂಸ್ಥೆಗಳಿಗೆ ಮೂಲ ಸಾಲದ ಪೈಕಿ ಕೇವಲ […]…

ಸಹಕಾರ ಮಹಾಮಂಡಲದ ನಿರ್ದೇಶಕ ಸ್ಥಾನಕ್ಕೆ ಚುನಾವಣೆ| ಶಶಿಕುಮಾರ್ ಬಾಲ್ಯೊಟ್ಟು ಭರ್ಜರಿ ಗೆಲುವು

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳದ ಆಡಳಿತ ಮಂಡಳಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಮೈಸೂರು ವಿಭಾಗದ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಎಲ್ಲ 18 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಬೆಂಬಲದಿಂದ ಮೈಸೂರು ವಿಭಾಗದಲ್ಲಿದ್ದ 18ಕ್ಕೆ 18 ಮತಗಳು ಶಶಿಕುಮಾರ್ ರೈ ಅವರಿಗೆ ದೊರೆತಿದೆ. ಈ ಮೂಲಕ ಕರ್ನಾಟಕ ರಾಜ್ಯ ಸಹಕಾರ…

ಗುಂಡ್ಯದಲ್ಲಿ‌ ಕಾರು ಅಪಘಾತ| ಎಲಿಮಲೆಯ ಯುವಕ‌ ಚಿಕಿತ್ಸೆ ಫಲಿಸದೇ ಸಾವು

ಸಮಗ್ರ ನ್ಯೂಸ್: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಲಿಮಲೆಯ ಯುವಕ ಕಿಶನ್ ಮಾವಿನಕಟ್ಟೆ ಇಂದು ನಿಧನರಾಗಿದ್ದಾರೆ. ಎಲಿಮಲೆ ನಿವಾಸಿಯಾಗಿದ್ದ ಕಿಶನ್ ಹಾಗೂ ಹರ್ಷಿತ್ ಪ್ರಯಾಣಿಸುತ್ತಿದ್ದ ಕಾರು ಗುಂಡ್ಯ ಸಮೀಪ ಲಾರಿಯೊಂದಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿತ್ತು. ಅಪಘಾತದ ತೀವ್ರತೆಗೆ ಇಬ್ಬರೂ ಯುವಕರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದವು. ಕೂಡಲೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ…

ನೇಪಾಳದಲ್ಲಿ ಭೀಕರ ಜಲಸ್ಪೋಟ| 500 ಮಂದಿ‌ ಕಣ್ಮರೆ, 100 ಕ್ಕೂ ಹೆಚ್ಚು ಮಂದಿ ಸಾವು

ಸಮಗ್ರ ನ್ಯೂಸ್: ಟಿಬೆಟ್ ಗಡಿಗೆ ಹೊಂದಿಕೊಂಡಂತಿರುವ ನೇಪಾಳದ ಉತ್ತರ ರಸುವಾ ಜಿಲ್ಲೆಯಲ್ಲಿ ಬುಧವಾರ ಭೋಟೆ ಕೋಶಿ ನದಿಯಲ್ಲಿ ಉಂಟಾದ ಭಾರಿ ಹಠಾತ್ ಪ್ರವಾಹಕ್ಕೆ ಕನಿಷ್ಠ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಮನೆಗಳು, ವಾಹನಗಳು, ಸೇತುವೆಗಳು ಹಾಗೂ ಮೂಲಸೌಕರ್ಯ ಯೋಜನೆಗಳು ನೀರಿನಲ್ಲಿ ಕೊಚ್ಚಿಹೋಗಿವೆ. ನೇಪಾಳ-ಟಿಬೆಟ್ ಗಡಿ ಭಾಗದ ಭೋಟೆ ಕೋಶಿ ಮತ್ತು ತ್ರಿಶೂಲಿ ನದಿಗಳಲ್ಲಿ ಬುಧವಾರ ಸಂಭವಿಸಿದ ಹಠಾತ್ ಪ್ರವಾಹ ಹಾಗೂ ಭೂಕುಸಿತದಿಂದಾಗಿ ನೀರಿನ ಮಟ್ಟ ಸುಮಾರು 30 ಅಡಿಗಳಷ್ಟು ಏರಿಕೆಯಾಗಿದೆ.…

12 ಸಾವಿರಕ್ಕೂ ಹೆಚ್ಚು ತೆರೆಯ ಮೇಲೆ ‘ಟಾಕ್ಸಿಕ್’ ರಿಲೀಸ್

ಸಮಗ್ರ ನ್ಯೂಸ್: ರಾಕಿಂಗ್‌ಸ್ಟಾರ್‌ ಯಶ್‌ ಅವರ ಬಹು ನಿರೀಕ್ಷಿತ ಸಿನಿಮಾ ‘ಟಾಕ್ಸಿಕ್‌’ ಇಂದು ಕನ್ನಡ, ಇಂಗ್ಲಿಷ್, ಹಿಂದಿ, ತೆಲುಗು, ತಮಿಳು, ಮಲಯಾಳಂ ಸೇರಿ ಆರು ಭಾಷೆಗಳಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಚಿತ್ರದ ಅವಧಿ 3 ಗಂಟೆ 14 ನಿಮಿಷಗಳು. ಎಲ್ಲಾ ಭಾಗಗಳಲ್ಲಿಯೂ ಚಿತ್ರದ ಮೇಲೆ ನಿರೀಕ್ಷೆ ಇದ್ದು, ಟಿಕೆಟ್ ದರಗಳು ಹೆಚ್ಚಾಗಿವೆ. ಭಾರತದ ಸಿನಿಮಾರಂಗದ ಇತಿಹಾಸದಲ್ಲೇ ಅತ್ಯಧಿಕ ರು.3600 ಟಿಕೆಟ್‌ ದರ ಬೆಂಗಳೂರಿನಲ್ಲಿ ನಿಗದಿಯಾಗಿದ್ದು, ಅಷ್ಟೂ ಟಿಕೆಟ್‌ಗಳೂ ಸೋಲ್ಡೌಟ್‌ ಆಗಿವೆ.…

ಮಲೆನಾಡು, ಘಟ್ಟಪ್ರದೇಶದಲ್ಲಿ ಅಬ್ಬರಿಸಿದ ವರುಣ| ಕುಕ್ಕೆ ಸುಬ್ರಹ್ಮಣ್ಯ, ಭಾಗಮಂಡಲ ಜಲಾವೃತ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಂಗಳವಾರ ಬೆಳಿಗ್ಗೆಯಿಂದ ನಿರಂತರವಾಗಿ ಧಾರಾಕಾರ ಮಳೆ ಸುರಿಯಿತು. ಕುಮಾರಧಾರಾ ಹಾಗೂ ಆದಿಸುಬ್ರಹ್ಮಣ್ಯದ ದರ್ಪಣತೀರ್ಥ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಆದಿಸುಬ್ರಹ್ಮಣ್ಯ ದೇವಸ್ಥಾನದ ಆವರಣದ ಮೆಟ್ಟಿಲಿನವರೆಗೂ ನೀರು ಬಂದಿತ್ತು. ಸುಬ್ರಹ್ಮಣ್ಯದ ದೇವರಗದ್ದೆ ರಸ್ತೆಯಲ್ಲಿ ಮಳೆ ನೀರು ಹರಿದು ಪಾದಚಾರಿಗಳು ಹಾಗೂ ವಾಹನ ಸವಾರರು ತೊಂದರೆ ಅನುಭವಿಸಿದರು. ಬಿಸಿಲೆಘಾಟ್ ಮಾರ್ಗದಲ್ಲಿ ಗಾಳಿ-ಮಳೆಗೆ ಮರಗಳು ಬಿದ್ದು ವಾಹನಗಳಲ್ಲಿದ್ದ ಪ್ರವಾಸಿಗರು…

ಸುಬ್ರಹ್ಮಣ್ಯ: ಭಾರೀ ಮಳೆಗೆ ಆದಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಜಲದಿಗ್ಬಂಧನ

ಸಮಗ್ರ ನ್ಯೂಸ್: ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರಿಂದಾಗಿ ದರ್ಪಣ ತೀರ್ಥ ಹೊಳೆ ಉಕ್ಕಿ ಹರಿಯುತ್ತಿದೆ. ಸತತ ಮಳೆಯ ಪ್ರಭಾವದಿಂದ ದರ್ಪಣ ತೀರ್ಥ ನದಿಯಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದ್ದು, ನದಿ ನೀರು ಪ್ರವಾಹದ ರೂಪದಲ್ಲಿ ಬಂದು ಆದಿ ಸುಬ್ರಹ್ಮಣ್ಯ ಕ್ಷೇತ್ರದ ಬಾಗಿಲ ತನಕ ನುಗ್ಗಿದೆ. ಹೊಳೆ ನೀರು ಕ್ಷೇತ್ರ ವ್ಯಾಪ್ತಿಗೆ ನುಗ್ಗಿರುವ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುತ್ತಿರುವ…

ವಿಟ್ಲ: ಕೋಟಿಕೆರೆಗೆ ಈಜಲು ತೆರಳಿದ್ದ ಯುವಕ ಮುಳುಗಿ ಸಾವು

ಸಮಗ್ರ ನ್ಯೂಸ್: ವಿಟ್ಲದ ಕೋಟಿಕೆರೆ ಎಂಬಲ್ಲಿ ಈಜಲು ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಕರುಣಾಜನಕ ಘಟನೆ ಆ.25ರ ಬೆಳಗಿನ ಜಾವ ನಡೆದಿದೆ. ಮೃತರನ್ನು ವಿಟ್ಲ ಕಸಬಾ ಗಾಳಿಹಿತ್ಲು ನಿವಾಸಿ ವೀರಪ್ಪ ಗೌಡ ಅವರ ಪುತ್ರ, ಎಸ್‌ಸಿಡಿಸಿಸಿ ಬ್ಯಾಂಕ್ ಉದ್ಯೋಗಿ ಲಿತಿನ್ (32) ಎಂದು ಗುರುತಿಸಲಾಗಿದೆ. ಬೆಳಗಿನ ಜಾವ ಈಜಲು ಕೆರೆಗೆ ಇಳಿದಿದ್ದ ಲಿತಿನ್ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಕೆರೆಗೆ ಇಳಿದು ಅವರನ್ನು ಮೇಲಕ್ಕೆತ್ತಿ ರಕ್ಷಿಸಲು…

ಬಂಗಾರ ಈಗ ಮತ್ತಷ್ಟು ಭಾರ| ದೇಶೀಯ ಮಾರುಕಟ್ಟೆಯಲ್ಲಿ ಭಾರಿ ಏರಿಕೆ ಕಂಡ ಚಿನ್ನ

ಸಮಗ್ರ ನ್ಯೂಸ್: ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ತೀವ್ರ ಏರಿಳಿತ ಹಾಗೂ ಅಮೆರಿಕ ಮತ್ತು ಇರಾನ್ ನಡುವೆ ಹೆಚ್ಚುತ್ತಿರುವ ರಾಜಕೀಯ ಉದ್ವಿಗ್ನತೆಯ ನೇರ ಪರಿಣಾಮ ಈಗ ಹೂಡಿಕೆದಾರರು ಮತ್ತು ಗ್ರಾಹಕರ ಜೇಬಿನ ಮೇಲೆ ಬಿದ್ದಿದೆ. ಸೋಮವಾರ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯು ಭಾರಿ ಏರಿಕೆ ಕಂಡಿದ್ದು, ಕಳೆದ ಐದು ತಿಂಗಳಲ್ಲೇ ಅತ್ಯಂತ ಗರಿಷ್ಠ ಮಟ್ಟವನ್ನು ತಲುಪಿದೆ. ಆಲ್ ಇಂಡಿಯಾ ಸರಾಫ್ ಅಸೋಸಿಯೇಷನ್ ನೀಡಿರುವ ಮಾಹಿತಿಯ ಪ್ರಕಾರ, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 900 ರೂಪಾಯಿ…

ಫಾರ್ಚೂನರ್ ಕಾರಲ್ಲಿ ಬಂದು ಕಸ ಗುಡಿಸುತ್ತಾರೆ ಈ ಪೌರಕಾರ್ಮಿಕ| ಇದು ಬಂಟ್ವಾಳದ ಸೇಸಪ್ಪಣ್ಣನ ಕಥೆ!!

ಸಮಗ್ರ ನ್ಯೂಸ್: ಭಾರತ ನಿಧಾನವಾಗಿ ಅಭಿವೃದ್ಧಿಯತ್ತ ಹೊರಳುತ್ತಿದೆ. ಇದಕ್ಕೆ ಈ ಪೌರಕಾರ್ಮಿಕರೇ ಸಾಕ್ಷಿ. ಇವರು ಬಂಟ್ವಾಳದ ಸೇಸಪ್ಪ. ಅವರು ಇಲ್ಲಿನ ಪುರಸಭೆಯ ಪೌರ ಕಾರ್ಮಿಕ. ಬೀದಿ ಬದಿಯಲ್ಲಿ ಕಸ ಗುಡಿಸುವ ಕೆಲಸಕ್ಕೆ ಅವರು ಬರುವುದು ಟೊಯೊಟ ಫಾರ್ಚೂನರ್ ಕಾರಿನಲ್ಲಿ. ಕಸ ಗುಡಿಸುವ ಅವರ ಕೆಲಸ ನಿತ್ಯ ಬೆಳಿಗ್ಗೆ 5ಕ್ಕೆ ಶುರುವಾಗುತ್ತದೆ. ಕೆಲಸದ ಸ್ಥಳಕ್ಕೆ ಫಾರ್ಚೂನ‌ರ್ ಕಾರನ್ನು ಸ್ವತಃ ಚಲಾಯಿಸಿಕೊಂಡು ಬರುವ ಅವರು, ಮಧ್ಯಾಹ್ನ 12ರ ವರೆಗೆ ಕಸ ಗುಡಿಸುತ್ತಾರೆ. ಬಳಿಕ ಅದೇ ಕಾರಿನಲ್ಲಿ…

ರಾಜ್ಯಾದ್ಯಂತ ಚುರುಕುಗೊಂಡ ಮುಂಗಾರು| ಕರಾವಳಿಯ ಹಲವೆಡೆ ಭಾರೀ ಮಳೆ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಮುಂಗಾರು ಚುರುಕುಗೊಂಡಿದೆ. ಅದರಲ್ಲೂ ಕರಾವಳಿ ಭಾಗಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಅನೇಕ ಭಾಗಗಳಲ್ಲಿ ವಿಪರೀತ ಮಳೆಯಾಗುತ್ತಿದ್ದು, ಬೆಂಗಳೂರಲ್ಲೂ ಕೂಡ ಹೆಚ್ಚಿನ ಮಳೆಯಾಗುತ್ತಿದೆ. ಬೆಂಗಳೂರಲ್ಲಿ ದಿನವಿಡೀ ಮೋಡ ಕವಿದ ವಾತಾವರಣ ಇರುತ್ತಿದೆ. ಆಗಸ್ಟ್‌ 24ರಂದು ಅತಿಹೆಚ್ಚು ಮಳೆ 9 ಸೆಂ.ಮೀ. ಬಿದ್ದಿತ್ತು. ಇನ್ನು ಬೀದರ್‌ನ ಹುಮನಾಬಾದ್‌, ಕೊಡಗಿನ ಶ್ರೀಮಂಗಲ, ಶಿವಮೊಗ್ಗದ ಆಗುಂಬೆ, ದಕ್ಷಿಣ ಕನ್ನಡದ ಧರ್ಮಸ್ಥಳದಲ್ಲಿ ಭಾರಿ ಮಳೆಯಾಗಿದೆ.…

ಕರ್ನಾಟಕದಲ್ಲಿ ಮೊದಲ ಎಸ್ಐಆರ್ ಕರಡು ಮತದಾರರ ಪಟ್ಟಿ ಪ್ರಕಟ| 1.7 ಕೋಟಿ ಮತದಾರರ ಹೆಸರು ಡಿಲಿಟ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕೈಗೊಳ್ಳಲಾದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಗಿದ್ದು, ಒಟ್ಟು 1,07,96,399 ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ (ಡಿಲೀಟ್ ಮಾಡಲಾಗಿದೆ) ಎಂದು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ತಿಳಿಸಿದ್ದಾರೆ. ಗೈರುಹಾಜರಿ, ಶಾಶ್ವತ ಸ್ಥಳಾಂತರ, ಮೃತರು ಹಾಗೂ ನಕಲಿ ಹೆಸರುಗಳು ಸೇರಿದಂತೆ ಒಟ್ಟು 1,07,96,399 ಮತದಾರರ ಹೆಸರುಗಳನ್ನು ಮೊದಲ ಕರಡು…

ನಾಳೆ(ಆ.25) ದ.ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ಈದ್ ಮಿಲಾದ್ ಸಾರ್ವತ್ರಿಕ ರಜೆ

ಸಮಗ್ರ ನ್ಯೂಸ್: : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಆಗಸ್ಟ್ 26ರ ಬದಲಿಗೆ ಆಗಸ್ಟ್ 25ರಂದು ಈದ್ ಮಿಲಾದ್ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ಚಂದ್ರ ದರ್ಶನದ ಆಧಾರದ ಮೇಲೆ ಈದ್ ಮಿಲಾದ್ (ಮೀಲಾದುನ್ನೆಬಿ) ರಜೆಯನ್ನು ಆಗಸ್ಟ್ 26ರ ಬದಲಿಗೆ ಆಗಸ್ಟ್ 25ರಂದು ನೀಡುವಂತೆ ಮೊನ್ನೆ ಮುಸ್ಲಿಂ ಮುಖಂಡರು ಜಿಲ್ಲಾ ಉಸ್ತುವಾರಿ ಸಚಿವ ಯು ಟಿ ಖಾದರ್ ಹಾಗೂ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಅವರಿಗೆ ಮನವಿ ಸಲ್ಲಿಸಿದ್ದರು. The post ನಾಳೆ(ಆ.25) ದ.ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ಈದ್…

ಕುಕ್ಕೆ ಸುಬ್ರಹ್ಮಣ್ಯ: ಈ ನಾಲ್ಕು ದಿನಗಳಂದು ಹಲವು ಸೇವೆಗಳು ಅಲಭ್ಯ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ, ದಶಮಿ ಏಕಾದಶಿ ಪ್ರಯುಕ್ತ ಸೆಪ್ಟೆಂಬರ್ 3, 4, 6 ಮತ್ತು 7ರಂದು ಸರ್ಪ ಸಂಸ್ಕಾರ ಸೇವೆ ಇರುವುದಿಲ್ಲ. ಸೆಪ್ಟೆಂಬರ್ 4ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ದಿನದಂದು, ಸೆಪ್ಟೆಂಬರ್ 7ರಂದು ಏಕಾದಶಿ ದಿನದಂದು ಆಶ್ಲೇಷ ಬಲಿ, ನಾಗ ಪ್ರತಿಷ್ಠೆ, ಮಹಾಭಿಷೇಕ ನೆರವೇರುವುದಿಲ್ಲ. ಮಹಾಪೂಜೆ, ಶೇಷ ಸೇವೆ, ಅಭಿಷೇಕಗಳು, ಅರ್ಚನೆ ಸೇವೆಗಳು ಮತ್ತು ದೇವರ ದರ್ಶನ…

ಮಂಗಳೂರಿನ ಅಶ್ಮಿತ್ ಸರಿಗಮಪ ಲಿಟಲ್ ಚಾಂಪ್ಸ್ ವಿನ್ನರ್

ಸಮಗ್ರ ನ್ಯೂಸ್: ಜನಪ್ರಿಯ ರಿಯಾಲಿಟಿ ಶೋ ಸರಿಗಮಪ ಲಿಟಲ್‌ ಚಾಂಪ್ಸ್‌ ಗೆ ತೆರೆ ಬಿದ್ದಿದೆ. ಅದ್ಧೂರಿ ಗ್ರ್ಯಾಂಡ್‌ ಫಿನಾಲೆ ಕಾರ್ಯಕ್ರಮದಲ್ಲಿ ಮಂಗಳೂರಿನ ಅಶ್ಮಿತ್‌ ಗೆದ್ದು ಚಾಂಪಿಯನ್‌ ಆಗಿದ್ದಾರೆ. ಫಿನಾಲೆಯಲ್ಲಿ ಶಿವಶಂಕರಿ ಹಾಡನ್ನು ಹಾಡಿದ್ದ ಅಶ್ಮಿತ್‌ ಸರಿಗಮಪ ಲಿಟಲ್‌ ಚಾಂಪ್ಸ್‌ ಟ್ರೋಫಿಯೊಂದಿಗೆ 20 ಲಕ್ಷ ರೂ ಗೆದ್ದು ಬೀಗಿದ್ದಾರೆ. ಅಶ್ಮಿತ್‌, ಅಚಿಂತ್ಯ, ಮಹನ್ಯಾ, ಹರುಷ್‌, ಜಯಲಕ್ಷ್ಮೀ, ಅವ್ಯುಕ್ತ್‌ ಫಿನಾಲೆ ಸ್ಪರ್ಧೆಯಲ್ಲಿದ್ದರು. ಇಂದು ನಾಗರಾಜ್‌ ತಂಡದಲ್ಲಿದ್ದ ಅಶ್ಮಿತ್‌…

ಉಪ್ಪಿನಂಗಡಿ: ಹಿಂದೂ ಧರ್ಮೀಯನ ನಿಧನಕ್ಕೆ ಹಬ್ಬ ಮುಂದೂಡಿದ‌ ಮುಸ್ಲಿಂ ಬಾಂಧವರು| ಸಾಮರಸ್ಯಕ್ಕೆ ಸಾಕ್ಷಿಯಾಯಿತು ವಿಶಿಷ್ಟ ನಡೆ

ಸಮಗ್ರ ನ್ಯೂಸ್: ಹಿಂದು ಧರ್ಮದ ವ್ಯಕ್ತಿಯೋರ್ವರು ನಿಧನರಾದ ಕಾರಣಕ್ಕೆ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮವನ್ನು ಮುಂದೂಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಕೊಯಿಲ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕುದುಲೂರು ನಿವಾಸಿ, ಆಟೋರಿಕ್ಷಾ ಚಾಲಕ ಗುರುಪ್ರಸಾದ್ (35) ಹೃದಯಾಘಾತದಿಂದ ಶನಿವಾರ ನಿಧನರಾದರು. ಶಾಲಾ ಮಕ್ಕಳನ್ನು ಶಾಲೆಗೆ ಕರೆದೊಯ್ಯುವ, ಬಾಡಿಗೆ ವಾಹನ ಹೊಂದಿದ್ದ ಇವರು ತಾಯಿ, ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಮೃತ ಗುರುಪ್ರಸಾದ್ ಮನೆ ಬಳಿ ಇರುವ ಕುದುಲೂರು…

ಗ್ರಾಹಕರಿಗೆ ಮತ್ತೊಂದು ಬೆಲೆ ಏರಿಕೆ ಬಿಸಿ|ಶತಕದ ಹೊಸ್ತಿಲಲ್ಲಿ ಈರುಳ್ಳಿ ದರ

ಸಮಗ್ರ ನ್ಯೂಸ್: ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ ಸಾಲು ಸಾಲು ಹಬ್ಬಗಳ ಸಂಭ್ರಮದಲ್ಲಿದ್ದ ಜನಸಾಮಾನ್ಯರಿಗೆ ಈರುಳ್ಳಿ ಬೆಲೆ ಏರಿಕೆ ಶಾಕ್​ ನೀಡಿದೆ. ನಿತ್ಯದ ಅಡುಗೆಯ ಅವಿಭಾಜ್ಯ ಅಂಗವಾಗಿರುವ ಈರುಳ್ಳಿಯನ್ನು ಕತ್ತರಿಸುವ ಮೊದಲೇ ಅದರ ದುಬಾರಿ ದರ ಗ್ರಾಹಕರ ಕಣ್ಣಲ್ಲಿ ನೀರು ತರಿಸುತ್ತಿದ್ದು, ಕೆಲವೇ ದಿನಗಳಲ್ಲಿ ಈರುಳ್ಳಿ ಬೆಲೆ ಪ್ರತಿ ಕೆಜಿಗೆ ಶತಕ ಬಾರಿಸುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ರಾಜ್ಯದಲ್ಲಿ ಒಂದೆಡೆ ಮುಂಗಾರು ಮಳೆ ಕೊರತೆಯಿಂದ ಬರಗಾಲ ತಾಂಡವವಾಡುತ್ತಿದೆ. ಮಳೆ, ಬೆಳೆ ಇಲ್ಲದೇ…

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಆಗಸ್ಟ್ ತಿಂಗಳ ನಾಲ್ಕನೇ ಮತ್ತು ಕೊನೆಯ ವಾರ ಇದು. ಜ್ಯೋತಿಷ್ಯದ ಪ್ರಕಾರ, ಈ ವಾರ ಅನೇಕರ ಜೀವನದಲ್ಲಿ ಮಹತ್ವದ ತಿರುವು ತರಲಿದೆ. ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯಿಂದಾಗಿ, ಈ ವಾರ ಕೆಲವು ರಾಶಿಯವರಿಗೆ ಅದೃಷ್ಟದಾಯಕವಾಗಿರುವುದು. ಇನ್ನು ಕೆಲವರಿಗೆ ಸವಾಲಿನಿಂದ ಕೂಡಿರುವುದು. ಯಾವ ರಾಶಿಗೆ ಶುಭ? ಯಾರಿಗೆ ಈ ವಾರ ಲಾಭ? ನೋಡೋಣ… ಮೇಷ ರಾಶಿ:ಮೇಷ ರಾಶಿಯವರಿಗೆ ಈ ವಾರ ಅದೃಷ್ಟದಿಂದ ಕೂಡಿರುತ್ತದೆ. ಕೆಲಸದಲ್ಲಿ ಹೊಸ ಜವಾಬ್ದಾರಿ ಸಿಗಬಹುದು. ವ್ಯವಹಾರ ಮಾಡುವವರಿಗೆ ಹೊಸ ಗ್ರಾಹಕರು…

ಪುತ್ತೂರು: ಜೆರಾಕ್ಸ್ ಅಂಗಡಿಯಲ್ಲಿ ಗಲಾಟೆ ಪ್ರಕರಣ| ಸಿಸಿ ಟಿವಿಯಲ್ಲಿ ದಾಖಲೆಯಲ್ಲಿ ಬಯಲಾಯ್ತು ಅಸಲಿಯತ್ತು!!

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ದರ್ಬೆಯಲ್ಲಿರುವ ಜೆರಾಕ್ಸ್ ಅಂಗಡಿಯೊಂದರಲ್ಲಿ ನಡೆದ ಹಲ್ಲೆ ಹಾಗೂ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಸಿಟಿವಿ (CCTV) ಕ್ಯಾಮೆರಾ ದೃಶ್ಯಾವಳಿಗಳು ಲಭ್ಯವಾಗಿದ್ದು, ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಭಾರೀ ರಾಜಕೀಯ ಹಾಗೂ ಸಾರ್ವಜನಿಕ ವಿವಾದಕ್ಕೆ ಕಾರಣವಾಗಿದ್ದ ಈ ಘಟನೆಯ ಅಸಲಿಯತ್ತು ಸಿಸಿಟಿವಿಯಲ್ಲಿ ಸೆರೆಯಾಗಿದೆ. ದಾಖಲೆ ಪತ್ರಗಳ ಜೆರಾಕ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಅಂಗಡಿ ಮಾಲಕರು ಹಾಗೂ ಬಂದಿದ್ದ ಗ್ರಾಹಕರ ನಡುವೆ…

ಗ್ರಾಹಕರಿಗೆ ಕಹಿಯಾದ ಸಕ್ಕರೆ| ಮೂರೇ ದಿನದಲ್ಲಿ ಶೇ40ರಷ್ಟು ಏರಿಕೆ

ಸಮಗ್ರ ನ್ಯೂಸ್: ಶ್ರಾವಣಮಾಸದಲ್ಲಿ ಸಾಲು ಸಾಲು ಹಬ್ಬಗಳು ಇರುವ ಹಿನ್ನೆಲೆಯಲ್ಲಿ ಹೂವು, ಹಣ್ಣುಗಳಿಗೆ ಬೇಡಿಕೆ ಹೆಚ್ಚಾಗಿ ದರ ಗಗನಕ್ಕೇರಿದೆ. ಈ ನಡುವೆ ಗ್ರಾಹಕರಿಗೆ ಕಹಿ ಸುದ್ದಿ ಸಿಕ್ಕಿದ್ದು, ಸಕ್ಕರೆಯ ಬೆಲೆಯಲ್ಲೂ ಭಾರಿ ಹೆಚ್ಚಳವಾಗಿದೆ. ದೇಶೀಯವಾಗಿ ಕಬ್ಬಿನ ಉತ್ಪಾದನೆ ಕುಸಿದ ಹಿನ್ನೆಲೆಯಲ್ಲಿ ಕೇವಲ ಎರಡು ತಿಂಗಳಲ್ಲೇ ಸಕ್ಕರೆ ಬೆಲೆ ಶೇ. 40ರಷ್ಟು ಏರಿಕೆಯಾಗಿದೆ. ಗಣೇಶ ಚತುರ್ಥಿ, ದಸರಾ, ದೀಪಾವಳಿ ಹಬ್ಬ ಸಮೀಪಿಸುತ್ತಿರುವ ಹಿನ್ನೆಲೆ ಸಕ್ಕರೆಗೆ ಬೇಡಿಕೆ ಹೆಚ್ಚಾಗಿದೆ. ಇದರಿಂದ ಬೆಂಗಳೂರಿನ…

ಪುತ್ತೂರು: ಬಾಲಕಿಗೆ ಲೈಂಗಿಕ ಕಿರುಕುಳ| ಆರೋಪಿಗೆ 5 ವರ್ಷಗಳ ಸಜೆ ಜೊತೆಗೆ ದಂಡ

ಸಮಗ್ರ ನ್ಯೂಸ್: 10 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಕುದ್ಮಾರು ಗ್ರಾಮದ ಅಬ್ದುಲ್ಲಾನಿಗೆ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಹಾಗೂ ಪೊಕ್ಸೊ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸುಮಂಗಲಾ ಚಕಲಬ್ಬಿ ಅವರು ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯ ಸೆಕ್ಷನ್ 10ರ ಅಡಿ 5 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹ 35 ಸಾವಿರ ದಂಡ ವಿಧಿಸಿದ್ದಾರೆ. ಬಾಲಕಿ ಎಳನೀರು ಖರೀದಿಸಲು ಅಬ್ದುಲ್ಲಾನ ಅಂಗಡಿಗೆ 2020ರ ಫೆ.14ರಂದು ತೆರಳಿದ್ದಳು.…

ನೈಋತ್ಯ ರೈಲ್ವೆಯ ಪಾಲಕ್ಕಾಡ್ ವಿಭಾಗದಿಂದ ಮೈಸೂರು ವಿಭಾಗಕ್ಕೆ ಮಂಗಳೂರು ವಿಲೀನ!

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ರೈಲ್ವೇ ಪ್ರಯಾಣಿಕರ ದಶಕಗಳ ಬಾಕಿ ಬೇಡಿಕೆಯೊಂದು ಕೊನೆಗೂ ಈಡೇರುವ ಹಂತಕ್ಕೆ ತಲುಪಿದೆ. ಪ್ರಸ್ತುತ ದಕ್ಷಿಣ ರೈಲ್ವೆ ವಲಯದ ಪಾಲಕ್ಕಾಡ್ ವಿಭಾಗದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಂಗಳೂರು ರೈಲ್ವೆ ಪ್ರದೇಶವನ್ನು ನೈಋತ್ಯ ರೈಲ್ವೆ ವಲಯದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲು ಭಾರತೀಯ ರೈಲ್ವೆ ಇಲಾಖೆ ನಿರ್ಧರಿಸಿದೆ. ಈ ಕುರಿತು ಮಂಗಳೂರು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಮಾಹಿತಿ ನೀಡಿದ್ದಾರೆ. ಹೊಸ ನಿರ್ಧಾರದಂತೆ ಉಳ್ಳಾಲವರೆಗಿನ ಮಂಗಳೂರು ರೈಲ್ವೆ…

ರಾಜ್ಯಾದ್ಯಂತ ಅಲ್ಲಲ್ಲಿ ಭಾರೀ ಹಾಗೂ ತುಂತುರು ಮಳೆ| ಕರಾವಳಿ, ಮಲೆನಾಡಿಗೆ ಸಾಧಾರಣ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕೊಂಚ ಮಳೆಯ ಅಬ್ಬರ ಮತ್ತೆ ಕಡಿಮೆ ಆಗಿದೆ. ಆದರೆ ಬೆಂಗಳೂರಲ್ಲಿ ಮಾತ್ರ ಸಂಜೆ ಆಗುತ್ತಿದ್ದಂತೆ ಗಂಟೆಗಳ ಕಾಲ ತುಂತುರು ಮಳೆ ಆಗುತ್ತಿದೆ. ಇದೀಗ ಹವಾಮಾನ ಇಲಾಖೆ ಇಂದಿನ ವರದಿ ಪ್ರಕಾರ, ಇಂದಿನಿಂದ ಆಗಷ್ಟ್‌ 24ರ ವರೆಗೆ ಕರಾವಳಿ ಕರ್ನಾಟಕ ಮತ್ತು ಮಲೆನಾಡು ಭಾಗಗಳಲ್ಲಿ ಮಳೆ ಪ್ರಮಾಣ ಸ್ವಲ್ಪ ಹೆಚ್ಚಿರಲಿದೆ ಎಂದು ವರದಿಯಾಗಿದೆ. ಇಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಧ್ಯಮ ಮಳೆ ಹಾಗೂ ಗುಡುಗು-ಮಿಂಚಿನ ಸಾಧ್ಯತೆ […]…

ಮಂಗಳೂರು: ಸೆಪ್ಟೆಂಬರ್ 2ನೇ ಶನಿವಾರದಿಂದ ಮಳೆ ರಜೆಯ ಹೊಂದಾಣಿಕೆಗೆ ಸೂಚನೆ

ಸಮಗ್ರ ನ್ಯೂಸ್: ದ.ಕ.ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಭಾರೀ ಮಳೆಯ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಘೋಷಿಸಿದ ರಜೆಯ ಕೊರತೆ ನೀಗಿಸಲು ಸೆಪ್ಟಂಬರ್ 2ನೇ ಶನಿವಾರದಿಂದ ಪೂರ್ಣ ತರಗತಿ ನಡೆಸಲು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ಸೂಚನೆ ನೀಡಿದ್ದಾರೆ. ಮಂಗಳೂರು ಉತ್ತರ, ಮಂಗಳೂರು ದಕ್ಷಿಣ, ಬಂಟ್ವಾಳ, ಮೂಡುಬಿದಿರೆ ಶೈಕ್ಷಣಿಕ ವಲಯಗಳಿಗೆ ಒಟ್ಟು 8 ಪೂರ್ಣ ದಿನ ಮತ್ತು 1 ಅರ್ಧ ದಿನ ಹಾಗೂ ಬೆಳ್ತಂಗಡಿ, ಪುತ್ತೂರು, ಸುಳ್ಯ…

ಸುಳ್ಯ: ಕಾಡಾನೆ ಓಡಿಸುವ ಕಾರ್ಯಾಚರಣೆ ವೇಳೆ ಎಡವಟ್ಟು| ಅರಣ್ಯ ಸಿಬ್ಬಂದಿ ಹಾರಿಸಿದ ಗುಂಡಿನಿಂದ ಇಬ್ಬರು ಅಪಾಯಕ್ಕೆ!!

ಸಮಗ್ರ ನ್ಯೂಸ್: ಚಾಮರಾಜನಗರದ ಹನೂರು ಎನ್‌ಕೌಂಟರ್ ಪ್ರಕರಣದ ತನಿಖೆ ನಡೆಯುತ್ತಿರುವ ನಡುವೆಯೇ ಅರಣ್ಯ ಇಲಾಖೆಯ ಮತ್ತೊಂದು ನಿರ್ಲಕ್ಷ್ಯದ ಘಟನೆ ದಕ್ಷಿಣ ಕನ್ನಡದಲ್ಲಿ ಬೆಳಕಿಗೆ ಬಂದಿದೆ. ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಬೆಂಗಮಲೆಯಲ್ಲಿ ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸುವ ಕಾರ್ಯಾಚರಣೆ ವೇಳೆ ಅರಣ್ಯ ಸಿಬ್ಬಂದಿ ಹಾರಿಸಿದ ಗುಂಡಿನಿಂದ ಇಬ್ಬರು ಬೈಕ್ ಸವಾರರು ಅಪಾಯಕ್ಕೆ ಸಿಲುಕಿದ್ದಾರೆ ಎನ್ನಲಾಗಿದೆ. ಕೆಲ ದಿನಗಳ ಹಿಂದೆ ನಡೆದ ಘಟನೆಯಲ್ಲಿ ರಾಘವ ಪ್ರಭು ಎಂಬುವರ ಕಾಲಿಗೆ ಗುಂಡು ತಗುಲಿ…

ಹಿರಿಯ ನಟಿ‌ ಸಾಹುಕಾರ್ ಜಾನಕಿ ನಿಧನ

ಸಮಗ್ರ ನ್ಯೂಸ್: ಬಹುಭಾಷಾ ನಟಿ, ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಹಿರಿಯ ನಟಿ ನಿಧನರಾಗಿದ್ದಾರೆ. ಪದ್ಮಶ್ರೀ ಪುರಸ್ಕೃತೆ ಸಾಹುಕಾರ್ ಜಾನಕಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. 95 ವರ್ಷದ ನಟಿಗೆ ವಯೋಸಹಜ ಸಮಸ್ಯೆಗಳ ಜೊತೆಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ಕೆಲ ದಿನಗಳ ಹಿಂದೆ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರ ರಾತ್ರಿ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಐಸಿಯುಗೆ ಸ್ಥಳಾಂತರಿಸಿ ಚಿಕಿತ್ಸೆ…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್ ನೀಡಿದ ಸಚಿವ ಮಧು ಬಂಗಾರಪ್ಪ| ತಿಂಗಳಿಗೆ ಒಂದು ರಜೆ, ಜೊತೆಗೆ ಮುಟ್ಟಿನ ರಜೆಯೂ ಮಂಜೂರು

ಸಮಗ್ರ ನ್ಯೂಸ್: ರಾಜ್ಯದ ಸರ್ಕಾರಿ ಪದವಿ ಪೂರ್ವ (ಪಿಯು) ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ತಿಂಗಳಿಗೆ ಒಂದು ದಿನ ರಜೆ ಹಾಗೂ ಮಹಿಳಾ ಉಪನ್ಯಾಸಕಿಯರಿಗೆ ಮಾಸಿಕ ಮುಟ್ಟಿನ ರಜೆ ಸೇರಿದಂತೆ ಇತರ ಸೌಲಭ್ಯಗಳನ್ನು ಒದಗಿಸುವ ಕುರಿತು ಸರ್ಕಾರ ಪರಿಶೀಲನೆ ನಡೆಸಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಈ ಹಿಂದೆ ಸರ್ಕಾರಿ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಮಾಸಿಕ ₹12,000 ಗೌರವ ಸಂಭಾವನೆ ನೀಡಲಾಗುತ್ತಿತ್ತು. ಇದನ್ನು…

ಉದ್ಯೋಗಾಂಕ್ಷಿಗಳಿಗೆ ಸಿಹಿ ಸುದ್ದಿ|ಉದ್ಯೋಗದ ಜೊತೆಗೆ ಸ್ವಂತ ವ್ಯವಹಾರ ಆರಂಭಿಸಲು ಸುವರ್ಣಾವಕಾಶ|ಇಲ್ಲಿದೆ ಹೆಚ್ಚಿನ ಮಾಹಿತಿ

ಸಮಗ್ರ ನ್ಯೂಸ್: ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಅನುಭವ ಇರುವವರಿಗೆ, ಪದವೀಧರರಿಗೆ ಹಾಗೂ ಉದ್ಯೋಗ ಆಕಾಂಕ್ಷಿಗಳಿಗೆ ವಿಶೇಷ ಅವಕಾಶ! ನಿಮ್ಮ ಸಮಯಕ್ಕೆ ತಕ್ಕಂತೆ ಕೆಲಸ ಮಾಡಿ, ಆದಾಯ ಗಳಿಸಿ, ಜೊತೆಗೆ ನಿಮ್ಮ ನಾಯಕತ್ವ ಮತ್ತು ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಿ. ✅ Work From Home ✅ Part Time / Full Time ✅ ಶಿಕ್ಷಣ ಕ್ಷೇತ್ರದಲ್ಲಿ ಗೌರವಯುತ ಅವಕಾಶ ✅ ದಿನಕ್ಕೆ ಕೇವಲ 1 ಗಂಟೆ ಸಾಕು ✅ ಹೆಚ್ಚುವರಿ ಆದಾಯದೊಂದಿಗೆ ವ್ಯಕ್ತಿತ್ವ ವಿಕಸನ ✅ ಅನುಭವಿ […] The post…

ಮಂಗಳೂರು: ಈದ್ ಮಿಲಾದ್ ರಜೆ ಬದಲಾವಣೆಗೆ ಮನವಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದ್ ಮಿಲಾದ್‌ ಪ್ರಯುಕ್ತ ನೀಡುವ ಸರ್ಕಾರಿ ರಜೆಯನ್ನು ಆ.25ಕ್ಕೆ ಘೋಷಿಸುವಂತೆ ವಿನಂತಿಸಿ, ಮುಸ್ಲಿಂ ಮುಖಂಡರು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಸರ್ಕಾರಿ ರಜೆಯು ಆ.26ಕ್ಕೆ ನಿಗದಿಯಾಗಿದೆ. ಆದರೆ, ಇಸ್ಲಾಮಿಕ್ ತಿಂಗಳ ಆರಂಭದ ಚಂದ್ರ ದರ್ಶನದಲ್ಲಿ ವ್ಯತ್ಯಾಸದ ಕಾರಣ ಆ. 25ರಂದು ‘ಮೀಲಾದ್’ ನಡೆಸಲು ಜಿಲ್ಲೆಯ ಎಲ್ಲ ಮಸೀದಿಗಳ ಖಾಝಿಗಳು ನಿರ್ಧರಿಸಿದ್ದಾರೆ. ಮೀಲಾದ್ ದಿನದಂದು…

ಪ್ರಾಂಶುಪಾಲರನ್ನೇ 27 ಬಾರಿ ಇರಿದು ಹತ್ಯೆ ಮಾಡಿದ ವಿದ್ಯಾರ್ಥಿಗಳು

ಸಮಗ್ರ ನ್ಯೂಸ್: ಕೇವಲ ಐಷಾರಾಮಿ ಜೀವನದ ಹಪಾಹಪಿಗೆ ಬಿದ್ದ ಇಬ್ಬರು 10ನೇ ತರಗತಿಯ ವಿದ್ಯಾರ್ಥಿಗಳು, ತಮ್ಮದೇ ಶಾಲೆಯ ಪ್ರಾಂಶುಪಾಲರನ್ನು ಅಮಾನುಷವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ನಡೆದಿದೆ. ನಲ್ಗೊಂಡ ಜಿಲ್ಲೆಯ ಕೊಂಡಮಲ್ಲೇಪಲ್ಲಿಯ ಶಾಲೆಯೊಂದರ ಪ್ರಾಂಶುಪಾಲರಾದ ಕಲ್ಲು ರೂಪಾ ರೆಡ್ಡಿ ಎಂಬುವವರು ಆಗಸ್ಟ್ 11ರಂದು ತಮ್ಮ ಮನೆಯಲ್ಲಿಯೇ ಭೀಕರವಾಗಿ ಕೊಲೆಯಾಗಿದ್ದರು. ಈ ಕೊಲೆ ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ದಿಗಿಲು ಹುಟ್ಟಿಸುವ ಸತ್ಯಾಂಶಗಳು ಲಭ್ಯವಾಗಿವೆ. ಈ ಕೊಲೆ…

ಬಂಟ್ವಾಳ: ಸಿನಿಮೀಯ ಶೈಲಿಯಲ್ಲಿ 8.35 ಲಕ್ಷ ರೂ ದರೋಡೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಮುಲ್ಕಾಜೆ ಮಾಡದಲ್ಲಿ ಹಾಡಹಗಲೇ ಬೈಕ್ ಸವಾರರೋರ್ವರನ್ನು ಅಡ್ಡಗಟ್ಟಿದ ಎರಡು ಬೈಕ್‌ನಲ್ಲಿ ಬಂದ ನಾಲ್ವರು ಅಪರಿಚಿತರು, ತಲವಾರು ತೋರಿಸಿ 8.35 ಲಕ್ಷ ರೂ. ನಗದು ಹಣವನ್ನು ಸುಲಿಗೆಗೈದು ಪರಾರಿಯಾದ ಘಟನೆ ಗುರುವಾರ ನಡೆದಿದ್ದು, ಸ್ಥಳೀಯವಾಗಿ ಅತಂಕವನ್ನುಂಟು ಮಾಡಿದೆ. ಮಂಗಳೂರಿನ ಕಣ್ಣೂರು ಎಂಬಲ್ಲಿ ಸಿಮೆಂಟ್ ಹಾಗೂ ಕಬ್ಬಿಣ ಮಾರಾಟದ ಹೋಲ್ ಸೇಲ್ ಸಂಸ್ಥೆಯೊಂದರ ಉದ್ಯೋಗಿ, ಸುರತ್ಕಲ್‌ನ ಚೊಕ್ಕಬೆಟ್ಟು ನಿವಾಸಿ,…

ವರ್ಷಾಂತ್ಯದೊಳಗೆ ಜಿ.ಪಂ, ತಾ.ಪಂ, ಗ್ರಾ.ಪಂ ಗಳಿಗೆ ಚುನಾವಣೆ – ಯತೀಂದ್ರ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯಿತಿಗಳ ಜೊತೆಗೆ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳಿಗೂ ಈ ವರ್ಷದ ಅಂತ್ಯದೊಳಗೆ ಚುನಾವಣೆ ನಡೆಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂದು ಸಭಾನಾಯಕ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಪರಿಷತ್‌ನಲ್ಲಿ ನಿಯಮ 72ರ ಅಡಿಯಲ್ಲಿ ಕಾಂಗ್ರೆಸ್ ಸದಸ್ಯ ಮಂಜುನಾಥ ಭಂಡಾರಿ ಅವರು ಪ್ರಸ್ತಾಪಿಸಿದ ಗಮನಸೆಳೆಯುವ ಸೂಚನೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಪರವಾಗಿ ಉತ್ತರಿಸಿದ ಯತೀಂದ್ರ ಸಿದ್ದರಾಮಯ್ಯ,…

ವಿಟ್ಲ: ಬಸ್ಸಿನಲ್ಲಿ ಬಾಲಕನಿಗೆ ಲೈಂಗಿಕ ಕಿರುಕುಳ|ಆರೋಪಿಗೆ ನ್ಯಾಯಾಂಗ ಬಂಧನ

ಸಮಗ್ರ ನ್ಯೂಸ್: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕನಿಗೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವಿಟ್ಲ ಠಾಣೆ ಪೊಲೀಸರು ಕೊಂಡಗಾಯಿ ನಿವಾಸಿ ಉಮೇಶ್ (53) ಎಂಬಾತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಳಪಡಿಸಿದ್ದಾರೆ. ಆಗಸ್ಟ್ 15 ರಂದು ಸಂತ್ರಸ್ತ ಅಪ್ರಾಪ್ತ ಬಾಲಕನು ವಿಟ್ಲ ಠಾಣಾ ವ್ಯಾಪ್ತಿಯ ಅಳಿಕೆಯಿಂದ ಪುತ್ತೂರು ಕಡೆಗೆ ಬಸ್ಸಿನಲ್ಲಿ ಬರುತ್ತಿದ್ದಾಗ, ವಿಟ್ಲ ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಸನ್ನೇರಿದ ಅಪರಿಚಿತ ವ್ಯಕ್ತಿ (ಉಮೇಶ್) ಬಾಲಕನ ಪಕ್ಕದಲ್ಲಿ…

ನಿರೂಪಣೆಗೆ ಗುಡ್ ಬೈ ಹೇಳಿದ ಅನುಪಮಾ ಗೌಡ

ಸಮಗ್ರ ನ್ಯೂಸ್: ಕನ್ನಡದ ಖ್ಯಾತ ನಿರೂಪಕಿ ಅನುಪಮಾ ಗೌಡ ಅವರು ತಮ್ಮ 8 ವರ್ಷಗಳ ನಿರೂಪಣೆಯ ಪಯಣಕ್ಕೆ ವಿದಾಯ ಹೇಳಿದ್ದಾರೆ. ಅನುಬಂಧ ಅವಾರ್ಡ್ಸ್‌, ಸೀರಿಯಲ್ ಸಂತೆ, ರಾಜ ರಾಣಿ, ಕ್ವಾಟ್ಲೆ ಕಿಚನ್, ನನ್ನಮ್ಮ ಸೂಪರ್ ಸ್ಟಾರ್ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ನಿರೂಪಣೆ ಮಾಡಿ ಕನ್ನಡಿಗರ ನೆಚ್ಚಿನ ನಿರೂಪಕಿಯಲ್ಲಿ ಒಬ್ಬರಾಗಿದ್ದರು. ‘ಅಕ್ಕ’ ಸೇರಿದಂತೆ ಹಲವು ಧಾರಾವಾಹಿಗಳಲ್ಲೂ ಅನುಪಮಾ ಕಾಣಿಸಿಕೊಂಡಿದ್ದಾರೆ. ಈಗ ನಿರೂಪಣೆಗೆ ವಿದಾಯ ಹೇಳುತ್ತಿರುವ ಬಗ್ಗೆ ಅನುಪಮಾ ಆನಂದಕುಮಾರ್ ಎನ್ನುವ…

ರಾಜ್ಯಾದ್ಯಂತ ಮುಂದುವರಿದ ಮಳೆ| ಹಲವು ಜಿಲ್ಲೆಗಳಲ್ಲಿ ಗಾಳಿ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಮುಂದಿನ ಕೆಲವು ದಿನಗಳಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹಲವು ಜಿಲ್ಲೆಗಳಲ್ಲಿ ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ಸಾಧ್ಯತೆಯಿದ್ದು, ಸಾರ್ವಜನಿಕರು ಹಾಗೂ ರೈತರು ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ…

ಕಾಸರಗೋಡು: ಇಬ್ಬರು ಅಪ್ರಾಪ್ತೆಯರನ್ನು ಲಾಡ್ಜ್ ಗೆ ಕರೆದೊಯ್ದ ಇಬ್ಬರು ಯುವಕರ ಬಂಧನ

ಸಮಗ್ರ ನ್ಯೂಸ್: ಸ್ನ್ಯಾಪ್‌ಚಾಟ್ ಸಾಮಾಜಿಕ ಜಾಲತಾಣದ ಮೂಲಕ ಪರಿಚಯ ಮಾಡಿಕೊಂಡು, 14 ಹಾಗೂ 16 ವರ್ಷದ ಇಬ್ಬರು ಶಾಲಾ ಬಾಲಕಿಯರನ್ನು ಮಂಗಳೂರು ಸಮೀಪದ ಉಳ್ಳಾಲದ ಲಾಡ್ಜ್‌ಗೆ ಕರೆದೊಯ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಹೊಸದುರ್ಗ ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಮೂಲದ ರಿಜ್ವಾನ್ (23) ಹಾಗೂ ಮುಹಮ್ಮದ್ ಸಾದ್ (19) ಬಂಧಿತ ಆರೋಪಿಗಳು. ಇವರ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ – POCSO) ಕಾಯ್ದೆಯ ಸೆಕ್ಷನ್ 3 ಮತ್ತು 4 ರ ಅಡಿಯಲ್ಲಿ ಪ್ರಕರಣ…

ಉಪ್ಪಿನಂಗಡಿ: ಯುವತಿಯರ ಮೇಲೆ‌ ಹಲ್ಲೆ ಆರೋಪ| 9 ಮಂದಿ ವಿರುದ್ಧ ದೂರು ದಾಖಲು

ಸಮಗ್ರ ನ್ಯೂಸ್: ಕಾರನ್ನು ಅಕ್ರಮವಾಗಿ ತಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಹಾಗೂ ಜೀವ ಬೆದರಿಕೆ ಒಡ್ಡಿದ ಘಟನೆಗೆ ಸಂಬಂಧಿಸಿದಂತೆ ಒಂಬತ್ತು ಮಂದಿ ಆರೋಪಿಗಳ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ಠಾಣಾ ವ್ಯಾಪ್ತಿಯ ನಿವಾಸಿ ಫಾಯಿಝಾ (18) ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ದೂರುದಾರರಾದ ಫಾಯಿಝಾ ಅವರು ಆಗಸ್ಟ್ 12ರ ರಾತ್ರಿ ಕೆಲಸ ಮುಗಿಸಿಕೊಂಡು ತಮ್ಮ ಪರಿಚಯದ ಸಿಪ್ನಾನ್‌, ಝಾಹಿರ್‌ ಹಾಗೂ ಸಫಿಯಾ ಅವರೊಂದಿಗೆ ಕಾರಿನಲ್ಲಿ ಮನೆಗೆ…

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಆಷಾಢ ಕಳೆದು ಶ್ರಾವಣ ಮಾಸ ಪ್ರಾರಂಭವಾಗಿದೆ. ದೇವತಾ ಕಾರ್ಯಗಳಿಗೆ ಮತ್ತೆ ಚಾಲನೆ ದೊರಕಿದೆ. ಆದ್ದರಿಂದ ಈ ವಾರದಲ್ಲಿ ರಾಶಿಗಳ ಗೋಚಾರ ಫಲಗಳೂ ಬದಲಾಗಿವೆ. ಈ ಶುಭ ವಾರದಲ್ಲಿ ಯಾವ ರಾಶಿಗೆ ಲಾಭ? ಯಾರಿಗೆ ಶುಭ? ನೋಡೋಣ ಬನ್ನಿ… ಮೇಷ ರಾಶಿ:ಶಿವ ಪೂಜೆ ಮಾಡಿದವನಿಗೆ ದೇವರೇ ದಾರಿಯನ್ನು ತೋರಿಸಿ ಬದುಕನ್ನು ತೋರಿಸುತ್ತಾನೆ. ಶ್ರಾವಣ ಮಾಸದಲ್ಲಿ ಸೋಮವಾರದಂದು ಕೇದಾರೇಶ್ವರ ವ್ರತ ಓದಿ. ಚತುರ್ಥದಲ್ಲಿ ಗುರು ಇರುವುದರಿಂದ ಕೇದಾರೇಶ್ವರ ಪೂಜೆ ಹಾಗೂ ಸುಬ್ರಹ್ಮಣ್ಯನನ್ನು ಪೂಜಿಸಿದರೆ ನಿಮ್ಮ…

ಬೆಳ್ಳಾರೆ: ಅಕ್ರಮ ಮರ ಸಾಗಾಟ| ಲಾರಿ‌ ಸಹಿತ ಆರೋಪಿ ವಶಕ್ಕೆ

ಬೆಳ್ಳಾರೆ: ಅಕ್ರಮವಾಗಿ ಮರ ಕಡಿದು ಲಾರಿಯಲ್ಲಿ ಸಾಗಿಸುತ್ತಿದ್ದ ಜಾಲವನ್ನು ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಭೇದಿಸಿದ್ದು, ಲಾರಿ ಹಾಗೂ ಮರದ ಸಮೇತ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಮಾಡಾವು ನಿವಾಸಿ ಇಸ್ಮಾಯಿಲ್ ಬಂಧಿತ ಆರೋಪಿ. ಅಗಸ್ಟ್ 14ರಂದು ನೆಟ್ಟಾರು ಎಂಬಲ್ಲಿ ಅಕ್ರಮವಾಗಿ ಕಡಿದ ಕಿರಾಲು ಭೋಗಿ ಜಾತಿಯ ಮರದ ದಿಮ್ಮಿಗಳನ್ನು ಲಾರಿಯಲ್ಲಿ ಸಾಗಿಸಲಾಗುತ್ತಿತ್ತು. ಬೆಳ್ಳಾರೆಯಿಂದ ಪುತ್ತೂರು ಕಡೆಗೆ ಸಾಗುತ್ತಿದ್ದ ಲಾರಿಯನ್ನು ಕೆಯ್ಯೂರು ಗ್ರಾಮದ ಸಂತೋಷ್ ನಗರ…

ಆರ್ ಎಸ್ಎಸ್ ಇದುವರೆಗೂ ನೋಂದಣಿಯಾಗಿಲ್ಲ, ಮುಂದೆಯೂ ನೋಂದಣಿ ಮಾಡಿಕೊಳ್ಳುವುದಿಲ್ಲ| ಕಾಂಗ್ರೆಸ್ ಗೆ ಟಾಂಗ್ ಕೊಟ್ಟ ಬಿ.ಎಲ್ ಸಂತೋಷ್

ಸಮಗ್ರ ನ್ಯೂಸ್: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ನೋಂದಣಿ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಆರ್‌ಎಸ್‌ಎಸ್ ನಡುವೆ ಸೃಷ್ಟಿಯಾಗಿರುವ ರಾಜಕೀಯ ಸಂಘರ್ಷ ಈಗ ಮತ್ತಷ್ಟು ತೀವ್ರಗೊಂಡಿದೆ. ಆರ್‌ಎಸ್‌ಎಸ್‌ ಇದುವರೆಗೆ ಯಾವುದೇ ಕಾಯ್ದೆಯಡಿ ನೋಂದಣಿಯಾಗಿಲ್ಲ ಮತ್ತು ಭವಿಷ್ಯದಲ್ಲೂ ನೋಂದಣಿ ಮಾಡುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸ್ಪಷ್ಟವಾಗಿ ಹೇಳಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಬೆಂಗಳೂರಿನ…

ನಾಗರಪಂಚಮಿ ಹಿನ್ನೆಲೆ| ದ.ಕ ಜಿಲ್ಲೆಯಾದ್ಯಂತ ನಾಳೆ(ಆ.17) ಸಾರ್ವತ್ರಿಕ ರಜೆ ಘೋಷಣೆ

ಸಮಗ್ರ ನ್ಯೂಸ್: ನಾಗರಪಂಚಮಿ ಪ್ರಯುಕ್ತ ಆ. 17ರಂದು (ಸೋಮವಾರ) ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು, ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ. The post ನಾಗರಪಂಚಮಿ ಹಿನ್ನೆಲೆ| ದ.ಕ ಜಿಲ್ಲೆಯಾದ್ಯಂತ ನಾಳೆ(ಆ.17) ಸಾರ್ವತ್ರಿಕ ರಜೆ ಘೋಷಣೆ appeared first on Samagra Samachara .

ಮುಂದಿನ 6 ತಿಂಗಳಲ್ಲಿ ಎಲ್ಲಾ ಖಾಲಿ ಹುದ್ದೆಗಳ ಭರ್ತಿ – ಸಿಎಂ

ಸಮಗ್ರ ನ್ಯೂಸ್: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಇಂದು ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಶಾ ಪೆರೇಡ್ ಮೈದಾನದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಿದರು. ನಮ್ಮ ನಾಡಿನ 7.5 ಕೋಟಿ ಕನ್ನಡಿಗರಿಗೆ ಮತ್ತು ಎಲ್ಲ ಭಾರತೀಯರಿಗೆ 80ನೇ ಸ್ವಾತಂತ್ರ್ಯೋತ್ಸವದ ಶುಭಾಶಯಗಳು. ಈ ಪವಿತ್ರ ದಿನದಂದು ರಾಜ್ಯದ ಮುಖ್ಯಮಂತ್ರಿಯಾಗಿ ನಾಡಿನ ಜನರನ್ನು ಉದ್ದೇಶಿಸಿ ಮಾತನಾಡುತ್ತಿರುವುದು ನನ್ನ ಪೂರ್ವ…