RSS Amplifier

News source

themangaloremirror.in

News Website

themangaloremirror.inSource feed ↗20 articles

Live Last read · last published · next check

Latest articles

ಕರಾವಳಿಗರ ದಶಕಗಳ ಬೇಡಿಕೆ ಈಡೇರಿಕೆ: ಕೊನೆಗೂ ಪಾಲಕ್ಕಾಡ್ ವಿಭಾಗದಿಂದ ನೈಋತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಮಂಗಳೂರು ವಿಲೀನ!

ಮಂಗಳೂರು ಅಗಸ್ಟ್ 21: ದಕ್ಷಿಣ ಕನ್ನಡ ಜಿಲ್ಲೆಯ ರೈಲ್ವೇ ಪ್ರಯಾಣಿಕರ ದಶಕಗಳ ಬಾಕಿ ಬೇಡಿಕೆಯೊಂದು ಕೊನೆಗೂ ಈಡೇರುವ ಹಂತಕ್ಕೆ ತಲುಪಿದೆ. ಪ್ರಸ್ತುತ ದಕ್ಷಿಣ ರೈಲ್ವೆ ವಲಯದ (Southern Railway) ಪಾಲಕ್ಕಾಡ್ ವಿಭಾಗದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಂಗಳೂರು ರೈಲ್ವೆ ಪ್ರದೇಶವನ್ನು ನೈಋತ್ಯ ರೈಲ್ವೆ ವಲಯದ (SWR) ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲು ಭಾರತೀಯ ರೈಲ್ವೆ ಇಲಾಖೆ ನಿರ್ಧರಿಸಿದೆ. ಈ ಕುರಿತು ಮಂಗಳೂರು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಮಾಹಿತಿ ನೀಡಿದ್ದಾರೆ. ಹೊಸ ನಿರ್ಧಾರದಂತೆ…

ಮಹಾರಾಷ್ಟ್ರ: ಪ್ರಪಾತಕ್ಕೆ ಹಾರಿದ ಮಗನನ್ನು ರಕ್ಷಿಸಲು ಹೋಗಿ ತಾಯಿ-ತಂದೆಯೂ ಬಲಿ; ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು!

ಛತ್ರಪತಿ ಸಂಭಾಜಿನಗರ ಅಗಸ್ಟ್ 21: : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಮಗನನ್ನು ಕೊನೆ ಕ್ಷಣದಲ್ಲಿ ರಕ್ಷಿಸಲು ಹೋಗಿ ತಂದೆ-ತಾಯಿ ಇಬ್ಬರೂ ಆಳವಾದ ಕ್ವಾರಿಗೆ ಬಿದ್ದು, ಒಂದೇ ಕುಟುಂಬದ ಮೂವರು ದಾರುಣವಾಗಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಧುಲೆ-ಸೋಲಾಪುರ ರಾಷ್ಟ್ರೀಯ ಹೆದ್ದಾರಿಯ ಪರ್ವತ ಪ್ರದೇಶದಲ್ಲಿ ನಡೆದಿದೆ. ಇಂದು (ಆಗಸ್ಟ್ 21) ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ಮೃತರನ್ನು ಮುರಳೀಧರ್ ದಾಮೋಧರ್ ಚಂದಗುಡೆ (48), ಅವರ ಪತ್ನಿ ಸಂಗೀತಾ…

ಕುಂದಾಪುರ: ಸುದ್ಧಿ ಪ್ರಕಟಿಸಿದ ದ್ವೇಷಕ್ಕೆ ‘ಕನ್ನಡ ಪ್ರಭ’ ಪತ್ರಕರ್ತನ ಮೇಲೆ ವೈದ್ಯನಿಂದ ಹಲ್ಲೆ; ದೂರು ದಾಖಲು

ಕುಂದಾಪುರ ಅಗಸ್ಟ್ 21: ಸುದ್ದಿ ಪ್ರಕಟಿಸಿದ ವರದಿಗಾರನ ವಿರುದ್ಧ ದ್ವೇಷ ಸಾಧಿಸಿ ಸರಕಾರಿ ಆಸ್ಪತ್ರೆಯ ವೈದ್ಯ ರೊಬ್ಬರು ಸಾರ್ವಜನಿಕವಾಗಿ ಪತ್ರಕರ್ತನ ಮೇಲೆ ಏಕಾಏಕಿ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿರುವ ಘಟನೆ ಕುಂದಾಪುರದಲ್ಲಿ ನಡೆದಿದೆ. ‘ಕನ್ನಡ ಪ್ರಭ’ ಪತ್ರಿಕೆಯ ಕುಂದಾಪುರ ಹಾಗೂ ಬೈಂದೂರು ತಾಲೂಕು ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಹಲ್ಲೆಗೊಳಗಾದ ಪತ್ರಕರ್ತರಾಗಿದ್ದು, ಹಲ್ಲೆ ನಡೆಸಿದ ಕುಂದಾಪುರ ಸರ್ಕಾರಿ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ. ಮಹೇಂದ್ರ ಕುಮಾರ್ ಶೆಟ್ಟಿ ವಿರುದ್ಧ ಕುಂದಾಪುರ…

ವೇಣೂರು: ಶಾಲೆಗೆ ಕರೆದೊಯ್ಯುತ್ತಿದ್ದ ಆಟೋ ಚಾಲಕನಿಂದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿ ಅರೆಸ್ಟ್

ಬೆಳ್ತಂಗಡಿ ಅಗಸ್ಟ್ 21: ಬೆಳ್ತಂಗಡಿ ತಾಲೂಕಿನ ವೇಣೂರು ಗ್ರಾಮದಲ್ಲಿ 14 ವರ್ಷದ ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆಟೋ ರಿಕ್ಷಾ ಚಾಲಕ ಜಮಾಲುದ್ದೀನ್ ಎಂಬಾತನನ್ನು ವೇಣೂರು ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೊಳಪಡಿಸಿದ್ದಾರೆ. ವೇಣೂರು ನಿವಾಸಿಯಾಗಿರುವ ಆರೋಪಿ ಜಮಾಲುದ್ದೀನ್ ತನ್ನ ಆಟೋ ರಿಕ್ಷಾದಲ್ಲಿ 14 ವರ್ಷದ ಬಾಲಕಿಯನ್ನು ಕಳೆದ ಕೆಲವು ತಿಂಗಳುಗಳಿಂದ ಶಾಲೆಗೆ ಕರೆದೊಯ್ಯುತ್ತಿದ್ದನು. ಈ ವೇಳೆ ಆಕೆಯೊಂದಿಗೆ ಅನುಚಿತವಾಗಿ…

ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕರ ಬಳಿ ಚಿನ್ನದ ಪುಡಿ ಪತ್ತೆ

ಚಿಕ್ಕಬಳ್ಳಾಪುರ, ಆಗಸ್ಟ್ 21: ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿದ್ದ ಇಬ್ಬರು ಪ್ರಯಾಣಿಕರ ಬಳಿ ಒಟ್ಟು 260 ಗ್ರಾಂ ಚಿನ್ನದ ಪುಡಿ ಪತ್ತೆಯಾಗಿದ್ದು, CISF ಸಿಬ್ಬಂದಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಕೆಐಎ ಟರ್ಮಿನಲ್-1ರಲ್ಲಿ CISF ಸಿಬ್ಬಂದಿ ಪ್ರಯಾಣಿಕರನ್ನು ತಪಾಸಣೆ ನಡೆಸುತ್ತಿದ್ದ ವೇಳೆ ಚಿನ್ನದ ಪುಡಿ ಪತ್ತೆಯಾಗಿದೆ. ಲಕ್ಷ್ಮಣ ಹಾಗೂ ರಾಘವೇಂದ್ರ ಎಂಬ ಇಬ್ಬರು ಪ್ರಯಾಣಿಕರು ಪ್ಯಾಂಟ್‌ನ ಸೊಂಟದ ಭಾಗದಲ್ಲಿ ವಿಶೇಷವಾಗಿ…

ದಕ್ಷಿಣಭಾರತ ಚಿತ್ರರಂಗದ ಹಿರಿಯ ನಟಿ ಪದ್ಮಶ್ರೀ ಪುರಸ್ಕೃತೆ ಸಾಹುಕಾರ್ ಜಾನಕಿ ಇನ್ನಿಲ್ಲ

ಚೆನ್ನೈ ಅಗಸ್ಟ್ 21: ದಕ್ಷಿಣ ಭಾರತೀಯ ಚಿತ್ರರಂಗದ ದಂತಕಥೆ, ಪದ್ಮಶ್ರೀ ಪುರಸ್ಕೃತೆ ಸಾಹುಕಾರ್ ಜಾನಕಿ (94) ಅವರು ಅನಾರೋಗ್ಯದ ಕಾರಣ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಕೊನೆಯುಸಿರೆಳೆದಿದ್ದು, ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ತೀವ್ರ ಕಂಬನಿ ಮಿಡಿದಿದ್ದಾರೆ. 1931 ಡಿಸೆಂಬರ್ 12 ರಂದು ಜನಿಸಿದ ಜಾನಕಿ ಅವರು ತಮ್ಮ ಸುದೀರ್ಘ ವೃತ್ತಿಜೀವನದಲ್ಲಿ ತಮಿಳು, ತೆಲುಗು,…

ಬೆಂಗಳೂರು: ಹೊಸೂರು ರಸ್ತೆಯಲ್ಲಿ ₹9 ಕೋಟಿ ನಗದು ಸಾಗಿಸುತ್ತಿದ್ದ ಕಾರು ಸೀಜ್, ತಮಿಳುನಾಡಿನಲ್ಲೂ ದಾಳಿ ನಡೆಸಿ ₹1.3 ಕೋಟಿ ಜಪ್ತಿ!

ಬೆಂಗಳೂರು: ನಗರದ ಹೊರವಲಯದ ಎಲೆಕ್ಟ್ರಾನಿಕ್ ಸಿಟಿ ಎಕ್ಸ್‌ಪ್ರೆಸ್‌ವೇ ಟೋಲ್ ಪ್ಲಾಜಾ ಬಳಿ ಭಾರಿ ಪ್ರಮಾಣದ ಅಕ್ರಮ ನಗದು ಸಾಗಿಸುತ್ತಿದ್ದ ಕಾರನ್ನು ತಡೆದ ಪೊಲೀಸರು ಹಾಗೂ ಆದಾಯ ತೆರಿಗೆ (IT) ಇಲಾಖೆ ಅಧಿಕಾರಿಗಳು ಕಾರಿನಲ್ಲಿದ್ದ ₹9 ಕೋಟಿ ನಗದನ್ನು ವಶಪಡಿಸಿಕೊಂಡಿದ್ದಾರೆ. ಆಗಸ್ಟ್ 18ರಂದು ಬೆಂಗಳೂರಿನ ಆದಾಯ ತೆರಿಗೆ ಇಲಾಖೆಯ ಯೂನಿಟ್-22ರ ಉಪನಿರ್ದೇಶಕರಾದ ಜಗದೀಶ್ ಅವರಿಂದ ಲಭಿಸಿದ ಖಚಿತ ಮಾಹಿತಿ ಮೇರೆಗೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯ ಬೀಟ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.…

ಕೇರಳ – ಒಂದೂವರೆ ವರ್ಷದ ಮಗುವಿನ ಸಾವಿನ ಪ್ರಕರಣ – ಚಾರ್ಜ್ ಶೀಟ್ ನಲ್ಲಿ ಮಗುವಿನ ಮೇಲಾದ ಕ್ರೌರ್ಯ ಬಿಚ್ಚಿಟ್ಟ ಪೊಲೀಸರು

ನೆಡುಮಂಗಡ್ (ಕೇರಳ) ಅಗಸ್ಟ್ 21: ಕೇರಳದ ನೆಡುಮಂಗಡ್‌ನಲ್ಲಿ ಒಂದೂವರೆ ವರ್ಷದ ಕಂದಮ್ಮ ಅರ್ಷಿತ್ ಮೇಲೆ ನಡೆದ ಭೀಕರ ಹಲ್ಲೆ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ ಬೃಹತ್ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ. ಮಗುವಿನ ಹೆತ್ತ ತಾಯಿ ಅಖಿಲಾ ಚಂದ್ರನ್ ಹಾಗೂ ಆಕೆಯ ಲಿವ್-ಇನ್ ಪಾರ್ಟ್‌ಫರ್ ಎ. ಅಶ್ಕರ್ ಈ ಭೀಕರ ಕೃತ್ಯದ ಪ್ರಮುಖ ಆರೋಪಿಗಳಾಗಿದ್ದಾರೆ. ಆರೋಪಿಗಳನ್ನು ಬಂಧಿಸಿದ 83 ನೇ ದಿನದಂದು ನೆಡುಮಂಗಾಡ್ ಉಪ ಪೊಲೀಸ್ ವರಿಷ್ಠಾಧಿಕಾರಿ (DySP) ಟಿ. ಬಿನುಕುಮಾರ್ ಅವರು…

ಸಾಲು ಸಾಲು ಹಬ್ಬಗಳ ಹಿನ್ನೆಲೆ: ಮಂಗಳೂರು ನಗರದಲ್ಲಿ ಮೂಲಸೌಕರ್ಯ, ದಾರಿ ದೀಪ ಹಾಗೂ ರಸ್ತೆ ದುರಸ್ತಿಗೆ ಶಾಸಕ ವೇದವ್ಯಾಸ ಕಾಮತ್ ಆಗ್ರಹ!

ಮಂಗಳೂರು ಅಗಸ್ಟ್ 21: ಮುಂಬರುವ ಶ್ರೀಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ ಹಾಗೂ ಮಂಗಳೂರು ದಸರಾ ಸೇರಿದಂತೆ ಪ್ರಮುಖ ಹಬ್ಬಗಳ ಪ್ರಯುಕ್ತ ಮಂಗಳೂರು ನಗರ ವ್ಯಾಪ್ತಿಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಅಗತ್ಯ ಮುಂಜಾಗೃತಾ ಹಾಗೂ ನವೀಕರಣ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳುವಂತೆ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಜಿಲ್ಲಾಧಿಕಾರಿಗಳು ಹಾಗೂ ಮಹಾನಗರ ಪಾಲಿಕೆ ಆಯುಕ್ತರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಸಂಪರ್ಕ ರಸ್ತೆಗಳ ಕಾಮಗಾರಿ, ಎಲ್ಲಾ ರಸ್ತೆಗಳ ದುರಸ್ತಿ, ಶೋಭಾ ಯಾತ್ರೆ ಸಾಗುವ…

ಬೆಳ್ಳಾರೆ ಪೋಕ್ಸೋ ಪ್ರಕರಣ: ಅಜ್ಜನಿಗೆ 5 ವರ್ಷ ಜೈಲು, ₹35,000 ದಂಡ ವಿಧಿಸಿದ ಕೋರ್ಟ್!

ಮಂಗಳೂರು ಅಗಸ್ಚ್ 21: ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2020ರಲ್ಲಿ ದಾಖಲಾಗಿದ್ದ ಅಪ್ರಾಪ್ತ ವಯಸ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 5 ವರ್ಷ ಜೈಲು, ₹35,000 ದಂಡ ವಿಧಿಸಿದ ಕೋರ್ಟ್ ಆದೇಶ ಹೊರಡಿಸಿದೆ. ಕಡಬ ತಾಲೂಕಿನ ಕುದ್ಮಾರು ನಿವಾಸಿ ಅಬ್ದುಲ್ಲಾ (64) ಎಂಬಾತನಿಗೆ ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಸಾಧಾರಣ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ. ಆರೋಪಿ ಅಬ್ದುಲ್ಲಾ…

ಮಂಗಳೂರು: ಸಿಮ್ ಸ್ವಾಪ್ ಮೂಲಕ ಹಿರಿಯ ನಾಗರಿಕನ ಬ್ಯಾಂಕ್ ಖಾತೆಗಳಿಂದ ₹2.12 ಕೋಟಿಗೂ ಅಧಿಕ ಹಣ ಲೂಟಿ ಹೊಡೆದ ಸೈಬರ್ ವಂಚಕರು

ಮಂಗಳೂರು ಅಗಸ್ಟ್ 20: ಸಿಮ್ ನೆಟ್‌ವರ್ಕ್ ಹ್ಯಾಕ್ ಮಾಡಿ ಅಕ್ರಮವಾಗಿ ಆನ್‌ಲೈನ್ ನೆಟ್ ಬ್ಯಾಂಕಿಂಗ್ ಅಕ್ಸೆಸ್ ಪಡೆದ ಸೈಬರ್ ವಂಚಕರ ತಂಡವೊಂದು ಮಂಗಳೂರಿನ ನಿವೃತ್ತ ಖಾಸಗಿ ಉದ್ಯೋಗಿಯೊಬ್ಬರ ಬ್ಯಾಂಕ್ ಗಳಿಂದ ಬರೋಬ್ಬರಿ ₹2.12 ಕೋಟಿಗೂ ಅಧಿಕ ಹಣವನ್ನು ದೋಚಿರುವ ಸೈಬರ್ ಅಪರಾಧ ಪ್ರಕರಣ ಬೆಳಕಿಗೆ ಬಂದಿದೆ. ಮುಂಬೈನಲ್ಲಿ 50 ವರ್ಷಗಳ ಕಾಲ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿ ನಿವೃತ್ತರಾಗಿ ಪ್ರಸ್ತುತ ಮಂಗಳೂರಿನಲ್ಲಿ ನೆಲೆಸಿರುವ 78 ವರ್ಷದ ವೃದ್ಧರೊಬ್ಬರು ಈ ಸೈಬರ್ ವಂಚನೆಗೆ ಬಲಿಯಾಗಿದ್ದಾರೆ.…

ಬಾಳೆಹಣ್ಣು ಮಂಡಿ ಮೇಲೆ ದಾಳಿ : ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು

ಉಡುಪಿ ಆಗಸ್ಟ್ 20 : ಉಡುಪಿಯ ಅಲೆವೂರು, ಕೆಮ್ತೂರು ಹಾಗೂ ದುಗ್ಲಿಪದವು ಪರಿಸರದಲ್ಲಿ ಸಹಾಯಕ ಕಮೀಷನರ್ ರಶ್ಮಿ ಎಸ್.ಆರ್, ಆಹಾರ ಸುರಕ್ಷತಾ ಅಧಿಕಾರಿ ವಿವೇಕ್, ಉಡುಪಿ ತಹಶೀಲ್ದಾರ್ ಗುರುರಾಜ್ ಹಾಗೂ ವಿವಿಧ ಅಧಿಕಾರಿಗಳ ತಂಡಗಳು ಇಂದು ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ಇಂದು ದಿಢೀರ್ ದಾಳಿ ನಡೆಸಿ, ಸುಮಾರು 10 ಕೆ.ಜಿ ಯಷ್ಟು ರಾಸಾಯನಿಕ ಬಳಸಿದ ಬಾಳೆಹಣ್ಣುಗಳನ್ನು ಜಪ್ತಿ ಮಾಡಿ, ನಾಶಪಡಿಸಿದರು. ಜೊತೆಗೆ ಬಾಳೆಹಣ್ಣಿಗೆ ಬಳಸುತ್ತಿದ್ದ, ಆರೋಗ್ಯಕ್ಕೆ ಹಾನಿಕಾರಕ ರಾಸಾಯನಿಕಗಳು, ಕೃತಕ ಬಣ್ಣ…

ಉಡುಪಿ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಅರೆಸ್ಟ್, ಬಂಧಿತರ ಸಂಖ್ಯೆ 8ಕ್ಕೆ ಏರಿಕೆ!

ಉಡುಪಿ ಅಗಸ್ಟ್ 20: ಕಾಪು ತಾಲೂಕಿನ ಮುದರಂಗಡಿ ಜಂಕ್ಷನ್‌ನಲ್ಲಿ ನಡೆದ ಪ್ರಿನ್ಸ್ ಎಂಟರ್‌ಪ್ರೈಸಸ್ ಮಾಲಕ ಡೇವಿಡ್ ಡಿಸೋಜಾ (David d’souza) ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯಕ್ಕೆ ಸಂಚು ರೂಪಿಸಿ ಹಣಕಾಸು ನೆರವು ನೀಡಿದ್ದ ಮತ್ತೋರ್ವ ಆರೋಪಿಯನ್ನು ಪೊಲೀಸರು ಉತ್ತರಾಖಂಡ ರಾಜ್ಯದ ನೈನಿತಾಲ್‌ನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಿಹಾರ ರಾಜ್ಯದ ಶೇಖ್‌ಪುರ ಮೂಲದ ಸೂರಜ್ ಕುಮಾರ್ (31) ಎಂದು ಗುರುತಿಸಲಾಗಿದೆ. ಈತನ ಬಂಧನದೊಂದಿಗೆ ಈ ಕೊಲೆ ಪ್ರಕರಣದಲ್ಲಿ ಇದುವರೆಗೆ…

ಲಕ್ನೋದಲ್ಲಿ ಭೀಕರ ಜೋಡಿ ಕೊಲೆ: ಹೆಂಡತಿ, ತಂಗಿಯನ್ನು ಗುಂಡಿಕ್ಕಿ ಕೊಂದು …ದುರಂತ ಅಂತ್ಯಕಂಡ ಬ್ಯಾಂಕ್ ಉದ್ಯೋಗಿ

ಲಕ್ನೋ ಅಗಸ್ಟ್ 20: ಕೌಟುಂಬಿಕ ಕಲಹ ಹಾಗೂ ದಾಂಪತ್ಯ ವಿವಾದದ ಹಿನ್ನೆಲೆಯಲ್ಲಿ ಎಸ್‌ಬಿಐ ಉದ್ಯೋಗಿಯೊಬ್ಬರು ಬ್ಯಾಂಕ್‌ ಅಧಿಕಾರಿಯಾಗಿದ್ದ ತಮ್ಮ ಪತ್ನಿಯನ್ನು ಕಚೇರಿ ಮುಂಭಾಗದಲ್ಲೇ ಗುಂಡಿಕ್ಕಿ ಕೊಂದ ಬಳಿಕ, ಮನೆಗೆ ತೆರಳಿ ತಂಗಿಗೂ ಗುಂಡಿಟ್ಟು ಕೊಂದು ತಾವೂ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಲಕ್ನೋದ ಗೋಮತಿ ನಗರದಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದೆ. ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ (SBI) ಉದ್ಯೋಗಿಯಾಗಿದ್ದ ಮಾನಸ್ ವಾಜಪೇಯಿ (38) ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ದುರಂತ ನಾಯಕ.…

ಶಾಕಿಂಗ್ ಘಟನೆ: ಹೊಮ್ ವರ್ಕ್ ಮಾಡಿಲ್ಲ ಎಂದು ಯುಕೆಜಿ ಮಗುವಿನ ಕೆನ್ನೆಗೆ ಬಾರಿಸಿದ ಶಿಕ್ಷಕಿ…ತರಗತಿಯಲ್ಲೇ ಕುಸಿದುಬಿದ್ದು ಮಗು ಸಾವು

ವಿಶಾಖಪಟ್ಟಣಂ: ಹೋಮ್‌ವರ್ಕ್ ಪರಿಶೀಲಿಸುವಾಗ ಶಿಕ್ಷಕಿಯೊಬ್ಬರು ತರಗತಿಯಲ್ಲೇ 6 ವರ್ಷದ ಬಾಲಕನನ್ನು ಬಟ್ಟೆ ಕಳಚಲು ಯತ್ನಿಸಿ, ಕೆನ್ನೆಗೆ ಹೊಡೆದ ಪರಿಣಾಮ ಆತ ಸಾವನ್ನಪ್ಪಿರುವ ಭೀಕರ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನ ‘ಒನ್ ಟೌನ್’ ಪ್ರದೇಶದಲ್ಲಿ ಗುರುವಾರ (ಆಗಸ್ಟ್ 20) ಸಂಭವಿಸಿದೆ. ಲಿಟಲ್ ಗಾರ್ಡನ್ಸ್ ಶಾಲೆಯ ಯುಕೆಜಿ ವಿದ್ಯಾರ್ಥಿ ಪ್ರಣಯ್ ತೇಜ ಮೃತಪಟ್ಟ ಬಾಲಕ. ಮಗುವನ್ನು ಕಿಂಗ್ ಜಾರ್ಜ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಶಿಕ್ಷಕಿಯ…

ಮುಲ್ಕಿ ಚಂದ್ರಮೌಳೇಶ್ವರ ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ: ಆರೋಪಿ ಅರೆಸ್ಟ್

ಮಂಗಳೂರು: ಮುಲ್ಕಿ ಪೊಲೀಸ್‌ ಠಾಣಾ ವ್ಯಾಪ್ತಿಯ ಪ್ರಸಿದ್ಧ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಸಿಸಿಟಿವಿ ಕ್ಯಾಮೆರಾ ತಿರುಗಿಸಿ ಕಾಣಿಕೆ ಹುಂಡಿಯ ಬೀಗ ಮುರಿದು ಕಳ್ಳತನ ಮಾಡಿದ್ದ ಆರೋಪಿಯನ್ನು ಮಂಗಳೂರು ನಗರದ ಮುಲ್ಕಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಕಳುವಾಗಿದ್ದ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಅಯ್ಯಂಗೇರಿ ಅಜ್ಜಿಮಡ ನಿವಾಸಿ ರವಿಕುಮಾರ ಅಲಿಯಾಸ್ ರವಿ ಹೆಚ್.ಜಿ. ಬಂಧಿತ ಆರೋಪಿ. ಆಗಸ್ಟ್ 18ರ ಮಧ್ಯರಾತ್ರಿ ಚಂದ್ರಮೌಳೇಶ್ವರ ದೇವಸ್ಥಾನದ ಮಾಡಿನ…

ಬಂಟ್ವಾಳದಲ್ಲಿ ಹಾಡಹಗಲೇ ಬೈಕ್ ಸವಾರನಿಗೆ ತಲವಾರು ತೋರಿಸಿ ₹8 ಲಕ್ಷಕ್ಕೂ ಅಧಿಕ ಹಣ ದೋಚಿದ ಖದೀಮರು!

ಬಂಟ್ವಾಳ ಅಗಸ್ಟ್ 20: ಮಣಿಹಳ್ಳ-ಕಕ್ಯಪದವು ರಸ್ತೆಯ ಮಣಿನಾಲ್ಕೂರು ಗ್ರಾಮದ ಮುಲ್ಕಾಜೆಮಾಡ ಎಂಬ ನಿರ್ಜನ ಪ್ರದೇಶದಲ್ಲಿ ಗುರುವಾರ (ಆಗಸ್ಟ್ 20) ಹಾಡಹಗಲೇ ಬೈಕ್ ಸವಾರನನ್ನು ಅಡ್ಡಗಟ್ಟಿದ ನಾಲ್ವರು ದುಷ್ಕರ್ಮಿಗಳು ತಲವಾರು ತೋರಿಸಿ ಬೆದರಿಸಿ ಲಕ್ಷಾಂತರ ರೂಪಾಯಿ ದರೋಡೆ ನಡೆಸಿ ಪರಾರಿಯಾಗಿದ್ದಾರೆ. ಸುರತ್ಕಲ್ ನಿವಾಸಿ ಮಯ್ಯದಿ ಎಂಬವರೇ ದರೋಡೆಗೊಳಗಾದ ಬೈಕ್ ಸವಾರ. ವಿವಿಧ ಅಂಗಡಿಗಳಿಗೆ ಹೋಲ್‌ಸೇಲ್ ಆಧಾರದಲ್ಲಿ ಪೂರೈಸಿದ್ದ ಸಿಮೆಂಟ್ ವ್ಯಾಪಾರದ ನಗದು ಹಣವನ್ನು ವಸೂಲಿ ಮಾಡಿಕೊಂಡು ಮಯ್ಯದಿ ಅವರು…

ಗ್ಲಾಮರ್ ಪ್ರಪಂಚದ ಹಿಂದೆ ಕಾಣಸಿಗದ ಛಾಯಾಗ್ರಾಹಕನ ನೈಜ ಮುಖ “ಫೋಕಸ್” ಕಿರುಚಿತ್ರ

ಮಂಗಳೂರು, ಆಗಸ್ಟ್ 20: ಕ್ಯಾಮೆರಾ ಕಣ್ಣಿನ ಹಿಂದೆ ನಿಂತು ಜಗತ್ತಿನ ಸುಂದರ ಕ್ಷಣಗಳನ್ನು ಬಂಧಿಸುವ ಛಾಯಾಗ್ರಾಹಕನ (Photographer) ನಿಜವಾದ ಬದುಕು ಹೇಗಿರುತ್ತದೆ? ಪರರ ಸಂತೋಷ, ಸಂಭ್ರಮ ಹಾಗೂ ಭಾವನೆಗಳಿಗೆ ಬಣ್ಣ ತುಂಬುವ ಆತನ ಬದುಕಿನ ಹಿಂದೆ ಎಂತೆಂತಹ ಕಣ್ಣೀರಿನ ಕಥೆಗಳಿರುತ್ತವೆ? – ಈ ಎಲ್ಲಾ ಸತ್ಯಗಳನ್ನು ಅತ್ಯಂತ ಭಾವುಕವಾಗಿ, ದೃಶ್ಯಕಾವ್ಯದ ರೂಪದಲ್ಲಿ ತೆರೆಯ ಮೇಲೆ ತಂದಿದೆ ‘ಫೋಕಸ್’ (Focus) ಕಿರುಚಿತ್ರ. ಛಾಯಾಗ್ರಾಹಕನೊಬ್ಬನ ಬದುಕಿನ ಬವಣೆ, ಆರ್ಥಿಕ ಸಂಕಷ್ಟ ಹಾಗೂ ಪ್ರೀತಿಯ ಸುತ್ತ…

4 ತಿಂಗಳಲ್ಲಿ 22 ಮಂದಿಗೆ ಮರಣದಂಡನೆ ಶಿಕ್ಷೆ ನೀಡಿದ್ದ ನ್ಯಾಯಾಧೀಶರ ಪೀಠದಿಂದ 100 ಕೊಲೆ ಪ್ರಕರಣಗಳು ವರ್ಗಾವಣೆ!

ಉತ್ತರ ಪ್ರದೇಶ ಅಗಸ್ಟ್ 20: : ಕಳೆದ ನಾಲ್ಕು ತಿಂಗಳಲ್ಲಿ 10 ಪ್ರತ್ಯೇಕ ಪ್ರಕರಣಗಳಲ್ಲಿ ಬರೋಬ್ಬರಿ 22 ಮಂದಿ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಕಠಿಣ ತೀರ್ಪು ನೀಡಿದ್ದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ರವಿಕುಮಾರ್ ದಿವಾಕರ್ ಅವರ ನ್ಯಾಯಾಲಯದಲ್ಲಿದ್ದ ಸುಮಾರು 100 ಕೊಲೆ ಪ್ರಕರಣಗಳನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿದೆ. ಆಡಳಿತಾತ್ಮಕ ಆದೇಶದ ಮೂಲಕ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಪೀಠಕ್ಕೆ ಈ ಪ್ರಕರಣಗಳನ್ನು ವರ್ಗಾಯಿಸಲಾಗಿದೆ ಎಂದು ಅಧಿಕಾರಿಗಳು…

ಹಾವೇರಿ – ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಮೂವರು ಸಾವು

ಹಾವೇರಿ ಅಗಸ್ಟ್ 20: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಟೋಲ್ ನಾಕಾ ಬಳಿ ಕಳೆದ ರಾತ್ರಿ ನಡೆದಿದೆ. ದಾವಣಗೆರೆಯ ನಿಟವಳ್ಳಿ ಮೌನೇಶ್ವರ ಬಡಾವಣೆಯ ನಿವಾಸಿಗಳಾದ ಸಿದ್ದಾರ್ಥ (27), ಹಸನ್ಮುಖಿ (29) ಹಾಊ ಯಶೋಧಾ ಬಾಯಿ (51) ಮೃತರು. ಕಾರಿನಲ್ಲಿದ್ದ ಸೌಂದರ್ಯ, ಸಿಂಧು ಸೇರಿ ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ. ಅವರಿಗೆ ದಾವಣಗೆರೆ ಎಸ್.ಎಸ್. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾಣೆಬೆನ್ನೂರಿನಿಂದ…