# bantwal (news sources) — RSS Amplifier

Recent posts from the 1 feeds in the RSS Amplifier directory that cover bantwal.

Page: <https://rssamplifier.com/topics/bantwal/news>  
Feed: <https://rssamplifier.com/topics/bantwal/news.md>

---

## [ಪುತ್ತೂರು ಜೆರಾಕ್ಸ್ ಅಂಗಡಿ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಸಿಸಿಟಿವಿಯಲ್ಲಿ ವಾಗ್ವಾದ, ನೂಕಾಟ ತಳ್ಳಾಟದ ವಿಡಿಯೋ](https://themangaloremirror.in/puttur-darbe-xerox-shop-attack-case-cctv-footage-revealed/)

_2026-08-22 · guru · themangaloremirror.in_

ಪುತ್ತೂರು ಅಗಸ್ಟ್ 22: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ದರ್ಬೆಯಲ್ಲಿರುವ ಜೆರಾಕ್ಸ್ ಅಂಗಡಿಯೊಂದರಲ್ಲಿ ನಡೆದ ಹಲ್ಲೆ ಹಾಗೂ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಸಿಟಿವಿ (CCTV) ಕ್ಯಾಮೆರಾ ದೃಶ್ಯಾವಳಿಗಳು ಲಭ್ಯವಾಗಿದ್ದು, ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಭಾರೀ ರಾಜಕೀಯ ಹಾಗೂ ಸಾರ್ವಜನಿಕ ವಿವಾದಕ್ಕೆ ಕಾರಣವಾಗಿದ್ದ ಈ ಘಟನೆಯ ಅಸಲಿಯತ್ತು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಿಸಿಟಿವಿಯಲ್ಲೇನಿದೆ?: ದಾಖಲೆ ಪತ್ರಗಳ ಜೆರಾಕ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಅಂಗಡಿ ಮಾಲಕರು…

## [105 ವರ್ಷದ ವೃದ್ಧನಿಗೆ ಜೀವಾವಧಿ ಶಿಕ್ಷೆಯಿಂದ ಮುಕ್ತಿ ನೀಡಿದ ಸುಪ್ರೀಂ ಕೋರ್ಟ್](https://themangaloremirror.in/supreme-court-grants-relief-from-life-imprisonment-to-105-year-old-man/)

_2026-08-22 · guru · themangaloremirror.in_

ನವದೆಹಲಿ, ಆಗಸ್ಟ್ 22: 1988ರ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 105 ವರ್ಷದ ರಸಿಕ್ ಚಂದ್ರ ಮಂಡಲ್ ಅವರಿಗೆ ಸುಪ್ರೀಂ ಕೋರ್ಟ್ ಜೀವಾವಧಿ ಶಿಕ್ಷೆಯಿಂದ ಮುಕ್ತಿ ನೀಡಿ ಮಹತ್ವದ ಆದೇಶ ಹೊರಡಿಸಿದೆ. ವೃದ್ಧಾಪ್ಯ ಹಾಗೂ ಆರೋಗ್ಯ ಸಮಸ್ಯೆಗಳನ್ನು ಪರಿಗಣಿಸಿದ ನ್ಯಾಯಾಲಯ, ಉಳಿದಿರುವ ಜೀವಾವಧಿ ಶಿಕ್ಷೆಯನ್ನು ಮನ್ನಾ ಮಾಡಿ ಅವರನ್ನು ಮತ್ತೆ ಜೈಲಿಗೆ ಕಳುಹಿಸದಂತೆ ಆದೇಶಿಸಿದೆ. ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ರಸಿಕ್ ಚಂದ್ರ ಮೊಂಡಲ್ ಎಂಬುವವರು 1988 ರಲ್ಲಿ ನಡೆದ ಕೊಲೆ…

## [ಅದು ನನ್ನ ಕರ್ತವ್ಯ&#8221;: ಮದುವೆ ಸಡಗರದಲ್ಲೂ ಅಸ್ವಸ್ಥರಿಗೆ ಆಸರೆಯಾಗಿ &#8216; ರಿಯಲ್ ಹೀರೋ&#8217; ಎನಿಸಿಕೊಂಡ ಕಣ್ಣೂರಿನ ವಧು ಡಾ. ಶಿರಿನ್!](https://themangaloremirror.in/bride-doctor-dr-shirin-subair-gives-first-aid-at-wedding-viral-video/)

_2026-08-22 · guru · themangaloremirror.in_

ಕಣ್ಣೂರು ಅಗಸ್ಟ್ 22: ವಿವಾಹದ ಸಂಭ್ರಮದಲ್ಲಿದ್ದ ವೈದ್ಯೆಯೊಬ್ಬರು ತಮ್ಮ ಮದುವೆಯ ಉಡುಪಿನಲ್ಲೇ ಅಸ್ವಸ್ಥಗೊಂಡ ಇಬ್ಬರು ಅಡುಗೆ ಸಿಬ್ಬಂದಿಗೆ ತುರ್ತು ಪ್ರಥಮ ಚಿಕಿತ್ಸೆ ನೀಡಿ, ವೈದ್ಯಕೀಯ ವೃತ್ತಿಧರ್ಮ ಹಾಗೂ ಮಾನವೀಯತೆಯನ್ನು ಎತ್ತಿಹಿಡಿದ ಅಪರೂಪದ ಘಟನೆ ನಡೆದಿದೆ. ವಧುವಿನ ಅಲಂಕಾರದಲ್ಲಿದ್ದ ಡಾ. ಶಿರಿನ್ ಸುಬೈರ್ ಅಸ್ವಸ್ಥರಿಗೆ ಚಿಕಿತ್ಸೆ ನೀಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ಕಣ್ಣೂರಿನ ಪಾನೂರು ಮೂಲದ ಡಾ. ಶಿರಿನ್ ಸುಬೈರ್, ಒಟ್ಟಪಾಲಂನ…

## [ಕಿರುತೆರೆಯಿಂದ ಪ್ಯಾನ್ ಇಂಡಿಯಾ ಮಟ್ಟಕ್ಕೆ ಕುಂದಾಪುರ ಬೆಡಗಿ: &#8216;ಮಹಾಕಾಳಿ&#8217;ಯಾಗಿ ಮಿಂಚಲು ಸಜ್ಜಾದ ಭೂಮಿ ಶೆಟ್ಟಿ!](https://themangaloremirror.in/bhoomi-shetty-mahakali-pan-india-movie-first-look-poster/)

_2026-08-22 · guru · themangaloremirror.in_

ಬೆಂಗಳೂರು: ‘ಕಿನ್ನರಿ’ ಧಾರಾವಾಹಿ ಹಾಗೂ ‘ಬಿಗ್ ಬಾಸ್ ಕನ್ನಡ 7’ ಮೂಲಕ ಕನ್ನಡಿಗರ ನೆಚ್ಚಿನ ನಟಿಯಾಗಿದ್ದ ಕುಂದಾಪುರದ ಬೆಡಗಿ ಭೂಮಿ ಶೆಟ್ಟಿ ಇದೀಗ ದೊಡ್ಡ ಪರದೆಯ ಮೇಲೆ ಭಾರಿ ಧಮಾಕಾ ಮಾಡಲು ಸಜ್ಜಾಗಿದ್ದಾರೆ. ‘ಹನುಮಾನ್’ ಚಿತ್ರದ ಮೂಲಕ ಭಾರತೀಯ ಚಿತ್ರರಂಗದಲ್ಲಿ ಸಂಚಲನ ಸೃಷ್ಟಿಸಿದ್ದ ನಿರ್ದೇಶಕ ಪ್ರಶಾಂತ್ ವರ್ಮಾ ಕಥೆ ಬರೆದಿರುವ ‘ಮಹಾಕಾಳಿ’ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಭೂಮಿ ಶೆಟ್ಟಿ ನಾಯಕಿಯಾಗಿ ‘ಮಹಾಕಾಳಿ’ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕುಂದಾಪುರ ಮೂಲದ ಭೂಮಿ ಶೆಟ್ಟಿ…

## [ತಿರುಮಲದಲ್ಲಿ ಇನ್ಮುಂದೆ &#8216;ರೋಬೋಟ್ ನಾಯಿ&#8217; ಪಹರೆ: ಭಕ್ತರ ರಕ್ಷಣೆಗೆ ತಿರುಪತಿ ದೇವಸ್ಥಾನದ ಬಿಗ್ ಪ್ಲಾನ್!](https://themangaloremirror.in/robot-dog-to-guard-tirumala-from-now-on-tirupati-temples-big-plan-to-protect-devotees/)

_2026-08-22 · guru · themangaloremirror.in_

ಅಮರಾವತಿ, ಆಗಸ್ಟ್ 22: ತಿರುಮಲ ತಿರುಪತಿ ದೇವಸ್ಥಾನಂ ವನ್ಯಜೀವಿಗಳ ಚಲನವಲನಗಳನ್ನು ಮೇಲ್ವಿಚಾರಣೆ ಮಾಡಲು ಮತ್ತು ಅರಣ್ಯದಿಂದ ಕೂಡಿದ ತಿರುಮಲದಲ್ಲಿ ವನ್ಯಮೃಗಗಳಿಂದ ಭಕ್ತರ ಸುರಕ್ಷತೆಯನ್ನು ಹೆಚ್ಚಿಸಲು ಕೃತಕ ಬುದ್ಧಿಮತ್ತೆ ಚಾಲಿತ ರೋಬೋಟಿಕ್ ನಾಯಿಗಳ ಬಳಕೆಗೆ ಚಿಂತನೆ ನಡೆಸಲಾಗಿದೆ. ದಟ್ಟವಾದ ಅರಣ್ಯ ಪ್ರದೇಶದಲ್ಲಿ ನಿಯೋಜಿಸಲು ಅದರ ಸಿದ್ಧತೆಯನ್ನು ನಿರ್ಣಯಿಸಲು ಟಿಟಿಡಿ ಹಿರಿಯ ಅಧಿಕಾರಿ ಚ. ವೆಂಕಯ್ಯ ಚೌಧರಿ ಮತ್ತು ಇತರ ಅಧಿಕಾರಿಗಳು ಇತ್ತೀಚೆಗೆ ಶ್ರೀ ಪದ್ಮಾವತಿ ಅತಿಥಿ ಗೃಹದಲ್ಲಿ ಚತುರ್ಭುಜ…

## [ಪಾಲ್ಘಾಟ್ ನಿಂದ ಮೈಸೂರು ರೈಲ್ವೆ ವಿಭಾಗಕ್ಕೆ ಮಂಗಳೂರು : ಕೇಂದ್ರದ ನಿರ್ಧಾರ ‘ಏಕಪಕ್ಷೀಯ’ ಎಂದ ಕೇರಳ ನಾಯಕರು; ತಕ್ಷಣದ ಮರುಪರಿಶೀಲನೆಗೆ ಆಗ್ರಹ!](https://themangaloremirror.in/mangaluru-railway-transfer-vd-satheesan-criticizes-railway-board-decision/)

_2026-08-22 · guru · themangaloremirror.in_

ತಿರುವನಂತಪುರಂ ಅಗಸ್ಟ್ 22: ಮಂಗಳೂರು ರೈಲ್ವೇ ಪ್ರದೇಶವನ್ನು ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದಿಂದ ನೈರ್ಮಲ್ಯ ಮತ್ತು ನೈಋತ್ಯ ರೈಲ್ವೆಯ (SWR) ಮೈಸೂರು ವಿಭಾಗಕ್ಕೆ ವಿಲೀನಗೊಳಿಸುವ ರೈಲ್ವೇ ಮಂಡಳಿಯ ನಿರ್ಧಾರವನ್ನು ಕೇರಳ ಸಿಎಂ ವಿ.ಡಿ. ಸತೀಶನ್ ಶನಿವಾರ ತೀವ್ರವಾಗಿ ಖಂಡಿಸಿದ್ದಾರೆ. ಈ ನಿರ್ಧಾರವು ‘ಏಕಪಕ್ಷೀಯ’ವಾಗಿದ್ದು, ಕೇಂದ್ರ ಸರ್ಕಾರವು ಇದನ್ನು ತಕ್ಷಣವೇ ಮರುಪರಿಶೀಲಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಕೇರಳ ರಾಜ್ಯ ಸರ್ಕಾರಕ್ಕೆ ಯಾವುದೇ ಮುನ್ಸೂಚನೆ ನೀಡದೆ ಅಥವಾ ಚರ್ಚೆ…

## [ಅಸುರಕ್ಷಿತ ಆಹಾರ, ನಕಲಿ ಔಷಧ ತಡೆಗೆ ಜಿಲ್ಲಾ/ತಾಲ್ಲೂಕು ಮಟ್ಟದಲ್ಲಿ &#8216;ವಾಚ್ ಟೀಂ&#8217;: ಸಚಿವ ಯು.ಟಿ. ಖಾದರ್](https://themangaloremirror.in/ut-khader-announces-watch-team-for-food-safety-and-fake-medicines/)

_2026-08-22 · guru · themangaloremirror.in_

ಮಂಗಳೂರು ಅಗಸ್ಟ್ 22: ರಾಜ್ಯದಲ್ಲಿ ಅಸುರಕ್ಷಿತ ಆಹಾರ ಪದಾರ್ಥಗಳು ಹಾಗೂ ನಕಲಿ ಔಷಧಗಳ ಮಾರಾಟಕ್ಕೆ ತಡೆ ನೀಡುವ ನಿಟ್ಟಿನಲ್ಲಿ ಪ್ರತಿಯೊಂದು ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ‘ವಾಚ್ ಟೀಂ’ (Watch Team) ರಚಿಸಲು ಚಿಂತನೆ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರ ಆರೋಗ್ಯ ರಕ್ಷಣೆ ಮತ್ತು ನಕಲಿ ಜಾಲಕ್ಕೆ ಕಡಿವಾಣ ಹಾಕುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದರು.…

## [ಪುತ್ತೂರು ಜೆರಾಕ್ಸ್ ಅಂಗಡಿ ಹಲ್ಲೆ ಪ್ರಕರಣ: ಪೊಲೀಸ್ ಪಕ್ಷಪಾತ ಖಂಡಿಸಿ ಡಿವೈಎಸ್ಪಿಗೆ ಬಿಜೆಪಿ ನಿಯೋಗ ಮನವಿ; ಆರೋಪಿಗಳ ತಕ್ಷಣ ಬಂಧನಕ್ಕೆ ಆಗ್ರಹ!](https://themangaloremirror.in/puttur-xerox-shop-attack-case-bjp-delegation-meets-dysp/)

_2026-08-22 · guru · themangaloremirror.in_

ಪುತ್ತೂರು ಅಗಸ್ಟ್ 22: ನಗರದ ಜೆರಾಕ್ಸ್ ಅಂಗಡಿಯೊಂದರಲ್ಲಿ ನಡೆದ ಹಲ್ಲೆ ಹಾಗೂ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಏಕಪಕ್ಷೀಯವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಿಯೋಗವು ಪುತ್ತೂರು ಡಿವೈಎಸ್ಪಿ ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿದೆ. ವಿಧಾನಪರಿಷತ್ ಸದಸ್ಯ ಕಿಶೋರ್ ಪುತ್ತೂರು ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ನೇತೃತ್ವದ ನಿಯೋಗವು ಡಿವೈಎಸ್ಪಿ ಪ್ರಮೋದ್ ಕುಮಾರ್ ಅವರನ್ನು ಭೇಟಿಯಾಗಿ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿತು. ಜೆರಾಕ್ಸ್ ತೆಗೆಯುವ…

## [ಮಂಗಳೂರು ಮೈಸೂರು ವಿಭಾಗಕ್ಕೆ ವಿಲೀನ: &#8216;ಪಾಲಕ್ಕಾಡ್‌ಗೆ ಓಣಂ ಹಬ್ಬದ ದುಃಖದ ಕೊಡುಗೆ&#8217; ಎಂದ ಕೇರಳ; ₹600 ಕೋಟಿ ಆದಾಯ ನಷ್ಟದ ಕಳವಳ!](https://themangaloremirror.in/mangaluru-railway-merger-kerala-palakkad-division-losses-600-crore/)

_2026-08-22 · guru · themangaloremirror.in_

ಮಂಗಳೂರು/ಪಾಲಕ್ಕಾಡ್ ಅಗಸ್ಟ್ 22: ಮಂಗಳೂರು ರೈಲ್ವೇ ಪ್ರದೇಶವನ್ನು ದಕ್ಷಿಣ ರೈಲ್ವೆಯ (Southern Railway) ಪಾಲಕ್ಕಾಡ್ ವಿಭಾಗದಿಂದ ನೈಋತ್ಯ ರೈಲ್ವೆಯ (SWR) ಮೈಸೂರು ವಿಭಾಗಕ್ಕೆ ವರ್ಗಾಯಿಸುವ ಕೇಂದ್ರ ರೈಲ್ವೇ ಮಂಡಳಿಯ ನಿರ್ಧಾರವು ಕರಾವಳಿ ಕರ್ನಾಟಕದಲ್ಲಿ ಹರ್ಷ ಮೂಡಿಸಿದ್ದರೆ, ನೆರೆಯ ಕೇರಳದಲ್ಲಿ ತೀವ್ರ ಆಕ್ರೋಶ ಹಾಗೂ ಕಳವಳಕ್ಕೆ ಕಾರಣವಾಗಿದೆ. “ರೈಲ್ವೇ ಇಲಾಖೆಯು ಕೇರಳಕ್ಕೆ ಓಣಂ ಹಬ್ಬದ ದುಃಖದ ಕೊಡುಗೆ ನೀಡಿದೆ. ಮಂಗಳೂರನ್ನು ಕಳೆದುಕೊಳ್ಳುವುದರೊಂದಿಗೆ 70 ವರ್ಷ ಹಳೆಯ ಪಾಲಕ್ಕಾಡ್ ವಿಭಾಗ…

## [ಬೆಳ್ತಂಗಡಿ: ಬಾಲಕ ಸುಮಂತ್ ಸಂಶಯಾಸ್ಪದ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಬೆಂಗಳೂರಿನಲ್ಲಿ ಕುಟುಂಬಸ್ಥರಿಗೆ ಮಂಪರು ಪರೀಕ್ಷೆ, ಬ್ರೈನ್ ಮ್ಯಾಪಿಂಗ್!](https://themangaloremirror.in/belthangady-sumanth-suspicious-death-case-fsl-brain-mapping-bengaluru/)

_2026-08-22 · guru · themangaloremirror.in_

ಬೆಳ್ತಂಗಡಿ ಅಗಸ್ಟ್ 22: ಗೇರುಕಟ್ಟೆ ಸಮೀಪದ ಸಂಭೋಳ್ಯದ 15 ವರ್ಷದ ಹೈಸ್ಕೂಲ್ ವಿದ್ಯಾರ್ಥಿ ಸುಮಂತ್ ಸಂಶಯಾಸ್ಪದ ಸಾವಿನ ಪ್ರಕರಣದ ನಿಗೂಢತೆಯನ್ನು ಭೇದಿಸಲು ಬೆಳ್ತಂಗಡಿ ಪೊಲೀಸರು ವೈಜ್ಞಾನಿಕ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ನ್ಯಾಯಾಲಯದ ಪೂರ್ವಾನುಮತಿ ಪಡೆದು ಬೆಂಗಳೂರಿನ ಮಡಿವಾಳದಲ್ಲಿರುವ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ (FSL) ಮಂಪರು ಪರೀಕ್ಷೆ ಹಾಗೂ ಬ್ರೈನ್ ಮ್ಯಾಪಿಂಗ್ ಪ್ರಕ್ರಿಯೆ ಆರಂಭಿಸಲಾಗಿದೆ. ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ ಬಿ.ಎಸ್. ಅವರ ನೇತೃತ್ವದ ಪೊಲೀಸ್ ತಂಡವು ಮೃತ…

## [Play Both Sides Of The Lie (Sponsored)](https://crawlproof.com/a/2O2qPg8J2kww)

_2026-08-22 · **Sponsored**_

Two operatives, one manufactured war — uncover the Complete Truth after both campaigns.

## [ಪುತ್ತೂರು: ಜೆರಾಕ್ಸ್ ಅಂಗಡಿಯಲ್ಲಿ ದಾಖಲೆ ಸುಟ್ಟ ವಿಚಾರಕ್ಕೆ ಗಲಾಟೆ, ಪರಸ್ಪರ ಹಲ್ಲೆ: ಕೌಂಟರ್ ಕೇಸ್ ದಾಖಲು, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದವರ ವಿರುದ್ಧವೂ ಪ್ರಕರಣ!](https://themangaloremirror.in/puttur-darbe-digital-seva-kendra-altercation-over-burnt-document/)

_2026-08-21 · guru · themangaloremirror.in_

ಪುತ್ತೂರು ಅಗಸ್ಟ್ 21: ದಾಖಲೆಪತ್ರ ಲ್ಯಾಮಿನೇಷನ್ ಮಾಡುವಾಗ ತಾಂತ್ರಿಕ ದೋಷದಿಂದ ಸುಟ್ಟುಹೋದ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಹಕರು ಹಾಗೂ ಅಂಗಡಿ ಮಾಲೀಕರ ನಡುವೆ ವಾಗ್ವಾದ ನಡೆದು ಪರಸ್ಪರ ಹಲ್ಲೆ ನಡೆಸಿಕೊಂಡ ಘಟನೆ ಪುತ್ತೂರಿನ ದರ್ಭೆಯಲ್ಲಿ ಆಗಸ್ಟ್ 21ರ ಮಧ್ಯಾಹ್ನ ಸಂಭವಿಸಿದೆ. ಸುಳ್ಯ ಮಂಡೆಕೋಲು ನಿವಾಸಿಗಳಾದ ಮುಬಾಶಿರ, ಫಾತೀಮಾ ಹಾಗೂ ಮುಬಾಶಿರ್ ಎಂಬುವವರು ಪುತ್ತೂರಿನ ದರ್ಭೆಯಲ್ಲಿರುವ ಅಂಜನಾ ಪೈ ಎಂಬುವರಿಗೆ ಸೇರಿದ “Dream destination digital seva Kendra” ಅಂಗಡಿಗೆ ತೆರಳಿ ಕೆಲವು…

## [ಕರಾವಳಿ ಜನರ ದಶಕಗಳ ಕನಸು ನನಸು &#8211; ಸಂಸದ ಬ್ರಿಜೇಶ್ ಚೌಟ ಶ್ರಮಕ್ಕೆ ಫಲ -ಪಾಲ್ಗಾಟ್ ನಿಂದ ಮುಕ್ತಿ ಪಡೆದ ಮಂಗಳೂರು](https://themangaloremirror.in/mangaluru-railway-network-merged-with-swr-mysuru-division-railway-ministry-approval/)

_2026-08-21 · guru · themangaloremirror.in_

ಮಂಗಳೂರು: ದಕ್ಷಿಣ ರೈಲ್ವೆ ವಲಯದ ವ್ಯಾಪ್ತಿಯಲ್ಲಿರುವ ಮಂಗಳೂರು ಭಾಗದ ರೈಲ್ವೆ ಜಾಲವನ್ನು ನೈಋತ್ಯ ರೈಲ್ವೆ ವಲಯಕ್ಕೆ ಒಳಪಟ್ಟ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸುವುದಕ್ಕೆ ರೈಲ್ವೆ ಸಚಿವಾಲಯದಿಂದ ಒಪ್ಪಿಗೆ ಲಭಿಸಿದ್ದು, ಶೀಘ್ರ ಗೆಜೆಟೆಡ್ ನೋಟಿಫಿಕೇಶನ್ ಹೊರಬೀಳಲಿದೆ. ಇದರೊಂದಿಗೆ, ದಕ್ಷಿಣ ಕನ್ನಡ ಜನರ ಬಹು ವರ್ಷಗಳ ಬಹುದೊಡ್ಡ ರೈಲ್ವೆ ಬೇಡಿಕೆ ಈಡೇರುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಈ ಐತಿಹಾಸಿಕ ತೀರ್ಮಾನದ ಬಗ್ಗೆ…

## [ಕರಾವಳಿಗರ ದಶಕಗಳ ಬೇಡಿಕೆ ಈಡೇರಿಕೆ: ಕೊನೆಗೂ ಪಾಲಕ್ಕಾಡ್ ವಿಭಾಗದಿಂದ ನೈಋತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಮಂಗಳೂರು ವಿಲೀನ!](https://themangaloremirror.in/mangaluru-railway-region-merged-with-swr-mysuru-division/)

_2026-08-21 · guru · themangaloremirror.in_

ಮಂಗಳೂರು ಅಗಸ್ಟ್ 21: ದಕ್ಷಿಣ ಕನ್ನಡ ಜಿಲ್ಲೆಯ ರೈಲ್ವೇ ಪ್ರಯಾಣಿಕರ ದಶಕಗಳ ಬಾಕಿ ಬೇಡಿಕೆಯೊಂದು ಕೊನೆಗೂ ಈಡೇರುವ ಹಂತಕ್ಕೆ ತಲುಪಿದೆ. ಪ್ರಸ್ತುತ ದಕ್ಷಿಣ ರೈಲ್ವೆ ವಲಯದ (Southern Railway) ಪಾಲಕ್ಕಾಡ್ ವಿಭಾಗದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಂಗಳೂರು ರೈಲ್ವೆ ಪ್ರದೇಶವನ್ನು ನೈಋತ್ಯ ರೈಲ್ವೆ ವಲಯದ (SWR) ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲು ಭಾರತೀಯ ರೈಲ್ವೆ ಇಲಾಖೆ ನಿರ್ಧರಿಸಿದೆ. ಈ ಕುರಿತು ಮಂಗಳೂರು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಮಾಹಿತಿ ನೀಡಿದ್ದಾರೆ. ಹೊಸ ನಿರ್ಧಾರದಂತೆ…

## [ಮಹಾರಾಷ್ಟ್ರ: ಪ್ರಪಾತಕ್ಕೆ ಹಾರಿದ ಮಗನನ್ನು ರಕ್ಷಿಸಲು ಹೋಗಿ ತಾಯಿ-ತಂದೆಯೂ ಬಲಿ; ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು!](https://themangaloremirror.in/chhatrapati-sambhajinagar-khawadya-mountain-family-tragedy-three-dead/)

_2026-08-21 · guru · themangaloremirror.in_

ಛತ್ರಪತಿ ಸಂಭಾಜಿನಗರ ಅಗಸ್ಟ್ 21: : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಮಗನನ್ನು ಕೊನೆ ಕ್ಷಣದಲ್ಲಿ ರಕ್ಷಿಸಲು ಹೋಗಿ ತಂದೆ-ತಾಯಿ ಇಬ್ಬರೂ ಆಳವಾದ ಕ್ವಾರಿಗೆ ಬಿದ್ದು, ಒಂದೇ ಕುಟುಂಬದ ಮೂವರು ದಾರುಣವಾಗಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಧುಲೆ-ಸೋಲಾಪುರ ರಾಷ್ಟ್ರೀಯ ಹೆದ್ದಾರಿಯ ಪರ್ವತ ಪ್ರದೇಶದಲ್ಲಿ ನಡೆದಿದೆ. ಇಂದು (ಆಗಸ್ಟ್ 21) ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ಮೃತರನ್ನು ಮುರಳೀಧರ್ ದಾಮೋಧರ್ ಚಂದಗುಡೆ (48), ಅವರ ಪತ್ನಿ ಸಂಗೀತಾ…

## [ಕುಂದಾಪುರ: ಸುದ್ಧಿ ಪ್ರಕಟಿಸಿದ ದ್ವೇಷಕ್ಕೆ &#8216;ಕನ್ನಡ ಪ್ರಭ&#8217; ಪತ್ರಕರ್ತನ ಮೇಲೆ ವೈದ್ಯನಿಂದ ಹಲ್ಲೆ; ದೂರು ದಾಖಲು](https://themangaloremirror.in/kundapura-doctor-assaults-kannada-prabha-journalist-srikanth-hemmadi/)

_2026-08-21 · guru · themangaloremirror.in_

ಕುಂದಾಪುರ ಅಗಸ್ಟ್ 21: ಸುದ್ದಿ ಪ್ರಕಟಿಸಿದ ವರದಿಗಾರನ ವಿರುದ್ಧ ದ್ವೇಷ ಸಾಧಿಸಿ ಸರಕಾರಿ ಆಸ್ಪತ್ರೆಯ ವೈದ್ಯ ರೊಬ್ಬರು ಸಾರ್ವಜನಿಕವಾಗಿ ಪತ್ರಕರ್ತನ ಮೇಲೆ ಏಕಾಏಕಿ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿರುವ ಘಟನೆ ಕುಂದಾಪುರದಲ್ಲಿ ನಡೆದಿದೆ. ‘ಕನ್ನಡ ಪ್ರಭ’ ಪತ್ರಿಕೆಯ ಕುಂದಾಪುರ ಹಾಗೂ ಬೈಂದೂರು ತಾಲೂಕು ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಹಲ್ಲೆಗೊಳಗಾದ ಪತ್ರಕರ್ತರಾಗಿದ್ದು, ಹಲ್ಲೆ ನಡೆಸಿದ ಕುಂದಾಪುರ ಸರ್ಕಾರಿ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ. ಮಹೇಂದ್ರ ಕುಮಾರ್ ಶೆಟ್ಟಿ ವಿರುದ್ಧ ಕುಂದಾಪುರ…

## [ವೇಣೂರು: ಶಾಲೆಗೆ ಕರೆದೊಯ್ಯುತ್ತಿದ್ದ ಆಟೋ ಚಾಲಕನಿಂದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ &#8211; ಆರೋಪಿ ಅರೆಸ್ಟ್](https://themangaloremirror.in/venoor-belthangady-pocso-case-auto-driver-jamaluddin-arrested-for-assault/)

_2026-08-21 · guru · themangaloremirror.in_

ಬೆಳ್ತಂಗಡಿ ಅಗಸ್ಟ್ 21: ಬೆಳ್ತಂಗಡಿ ತಾಲೂಕಿನ ವೇಣೂರು ಗ್ರಾಮದಲ್ಲಿ 14 ವರ್ಷದ ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆಟೋ ರಿಕ್ಷಾ ಚಾಲಕ ಜಮಾಲುದ್ದೀನ್ ಎಂಬಾತನನ್ನು ವೇಣೂರು ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೊಳಪಡಿಸಿದ್ದಾರೆ. ವೇಣೂರು ನಿವಾಸಿಯಾಗಿರುವ ಆರೋಪಿ ಜಮಾಲುದ್ದೀನ್ ತನ್ನ ಆಟೋ ರಿಕ್ಷಾದಲ್ಲಿ 14 ವರ್ಷದ ಬಾಲಕಿಯನ್ನು ಕಳೆದ ಕೆಲವು ತಿಂಗಳುಗಳಿಂದ ಶಾಲೆಗೆ ಕರೆದೊಯ್ಯುತ್ತಿದ್ದನು. ಈ ವೇಳೆ ಆಕೆಯೊಂದಿಗೆ ಅನುಚಿತವಾಗಿ…

## [ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕರ ಬಳಿ ಚಿನ್ನದ ಪುಡಿ ಪತ್ತೆ](https://themangaloremirror.in/gold-powder-found-with-passengers-arriving-in-bengaluru-from-bangkok/)

_2026-08-21 · guru · themangaloremirror.in_

ಚಿಕ್ಕಬಳ್ಳಾಪುರ, ಆಗಸ್ಟ್ 21: ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿದ್ದ ಇಬ್ಬರು ಪ್ರಯಾಣಿಕರ ಬಳಿ ಒಟ್ಟು 260 ಗ್ರಾಂ ಚಿನ್ನದ ಪುಡಿ ಪತ್ತೆಯಾಗಿದ್ದು, CISF ಸಿಬ್ಬಂದಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಕೆಐಎ ಟರ್ಮಿನಲ್-1ರಲ್ಲಿ CISF ಸಿಬ್ಬಂದಿ ಪ್ರಯಾಣಿಕರನ್ನು ತಪಾಸಣೆ ನಡೆಸುತ್ತಿದ್ದ ವೇಳೆ ಚಿನ್ನದ ಪುಡಿ ಪತ್ತೆಯಾಗಿದೆ. ಲಕ್ಷ್ಮಣ ಹಾಗೂ ರಾಘವೇಂದ್ರ ಎಂಬ ಇಬ್ಬರು ಪ್ರಯಾಣಿಕರು ಪ್ಯಾಂಟ್‌ನ ಸೊಂಟದ ಭಾಗದಲ್ಲಿ ವಿಶೇಷವಾಗಿ…

## [ದಕ್ಷಿಣಭಾರತ ಚಿತ್ರರಂಗದ ಹಿರಿಯ ನಟಿ ಪದ್ಮಶ್ರೀ ಪುರಸ್ಕೃತೆ ಸಾಹುಕಾರ್ ಜಾನಕಿ ಇನ್ನಿಲ್ಲ](https://themangaloremirror.in/legendary-actress-sowcar-janaki-passes-away-at-94-in-chennai/)

_2026-08-21 · guru · themangaloremirror.in_

ಚೆನ್ನೈ ಅಗಸ್ಟ್ 21: ದಕ್ಷಿಣ ಭಾರತೀಯ ಚಿತ್ರರಂಗದ ದಂತಕಥೆ, ಪದ್ಮಶ್ರೀ ಪುರಸ್ಕೃತೆ ಸಾಹುಕಾರ್ ಜಾನಕಿ (94) ಅವರು ಅನಾರೋಗ್ಯದ ಕಾರಣ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಕೊನೆಯುಸಿರೆಳೆದಿದ್ದು, ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ತೀವ್ರ ಕಂಬನಿ ಮಿಡಿದಿದ್ದಾರೆ. 1931 ಡಿಸೆಂಬರ್ 12 ರಂದು ಜನಿಸಿದ ಜಾನಕಿ ಅವರು ತಮ್ಮ ಸುದೀರ್ಘ ವೃತ್ತಿಜೀವನದಲ್ಲಿ ತಮಿಳು, ತೆಲುಗು,…

## [ಬೆಂಗಳೂರು: ಹೊಸೂರು ರಸ್ತೆಯಲ್ಲಿ ₹9 ಕೋಟಿ ನಗದು ಸಾಗಿಸುತ್ತಿದ್ದ ಕಾರು ಸೀಜ್, ತಮಿಳುನಾಡಿನಲ್ಲೂ ದಾಳಿ ನಡೆಸಿ ₹1.3 ಕೋಟಿ ಜಪ್ತಿ!](https://themangaloremirror.in/bangalore-electronic-city-it-raid-9-crore-cash-seized-in-creta-car/)

_2026-08-21 · guru · themangaloremirror.in_

ಬೆಂಗಳೂರು: ನಗರದ ಹೊರವಲಯದ ಎಲೆಕ್ಟ್ರಾನಿಕ್ ಸಿಟಿ ಎಕ್ಸ್‌ಪ್ರೆಸ್‌ವೇ ಟೋಲ್ ಪ್ಲಾಜಾ ಬಳಿ ಭಾರಿ ಪ್ರಮಾಣದ ಅಕ್ರಮ ನಗದು ಸಾಗಿಸುತ್ತಿದ್ದ ಕಾರನ್ನು ತಡೆದ ಪೊಲೀಸರು ಹಾಗೂ ಆದಾಯ ತೆರಿಗೆ (IT) ಇಲಾಖೆ ಅಧಿಕಾರಿಗಳು ಕಾರಿನಲ್ಲಿದ್ದ ₹9 ಕೋಟಿ ನಗದನ್ನು ವಶಪಡಿಸಿಕೊಂಡಿದ್ದಾರೆ. ಆಗಸ್ಟ್ 18ರಂದು ಬೆಂಗಳೂರಿನ ಆದಾಯ ತೆರಿಗೆ ಇಲಾಖೆಯ ಯೂನಿಟ್-22ರ ಉಪನಿರ್ದೇಶಕರಾದ ಜಗದೀಶ್ ಅವರಿಂದ ಲಭಿಸಿದ ಖಚಿತ ಮಾಹಿತಿ ಮೇರೆಗೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯ ಬೀಟ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.…

## [ಕೇರಳ &#8211; ಒಂದೂವರೆ ವರ್ಷದ ಮಗುವಿನ ಸಾವಿನ ಪ್ರಕರಣ &#8211; ಚಾರ್ಜ್ ಶೀಟ್ ನಲ್ಲಿ ಮಗುವಿನ ಮೇಲಾದ ಕ್ರೌರ್ಯ ಬಿಚ್ಚಿಟ್ಟ ಪೊಲೀಸರು](https://themangaloremirror.in/kerala-nedumangad-baby-arshith-murder-chargesheet-filed-mother-and-partner-accused/)

_2026-08-21 · guru · themangaloremirror.in_

ನೆಡುಮಂಗಡ್ (ಕೇರಳ) ಅಗಸ್ಟ್ 21: ಕೇರಳದ ನೆಡುಮಂಗಡ್‌ನಲ್ಲಿ ಒಂದೂವರೆ ವರ್ಷದ ಕಂದಮ್ಮ ಅರ್ಷಿತ್ ಮೇಲೆ ನಡೆದ ಭೀಕರ ಹಲ್ಲೆ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ ಬೃಹತ್ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ. ಮಗುವಿನ ಹೆತ್ತ ತಾಯಿ ಅಖಿಲಾ ಚಂದ್ರನ್ ಹಾಗೂ ಆಕೆಯ ಲಿವ್-ಇನ್ ಪಾರ್ಟ್‌ಫರ್ ಎ. ಅಶ್ಕರ್ ಈ ಭೀಕರ ಕೃತ್ಯದ ಪ್ರಮುಖ ಆರೋಪಿಗಳಾಗಿದ್ದಾರೆ. ಆರೋಪಿಗಳನ್ನು ಬಂಧಿಸಿದ 83 ನೇ ದಿನದಂದು ನೆಡುಮಂಗಾಡ್ ಉಪ ಪೊಲೀಸ್ ವರಿಷ್ಠಾಧಿಕಾರಿ (DySP) ಟಿ. ಬಿನುಕುಮಾರ್ ಅವರು…

## [8.1% APY Plus Free Stock (Sponsored)](https://crawlproof.com/a/5T9bpNlgEQPC)

_2026-08-21 · **Sponsored**_

Claim 8.1% APY and up to $1,030 in SK hynix and Nvidia stock.

## [ಸಾಲು ಸಾಲು ಹಬ್ಬಗಳ ಹಿನ್ನೆಲೆ: ಮಂಗಳೂರು ನಗರದಲ್ಲಿ ಮೂಲಸೌಕರ್ಯ, ದಾರಿ ದೀಪ ಹಾಗೂ ರಸ್ತೆ ದುರಸ್ತಿಗೆ ಶಾಸಕ ವೇದವ್ಯಾಸ ಕಾಮತ್ ಆಗ್ರಹ!](https://themangaloremirror.in/mangaluru-mla-vedavyas-kamath-writes-to-dc-mcc-commissioner-for-festival-preparations/)

_2026-08-21 · guru · themangaloremirror.in_

ಮಂಗಳೂರು ಅಗಸ್ಟ್ 21: ಮುಂಬರುವ ಶ್ರೀಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ ಹಾಗೂ ಮಂಗಳೂರು ದಸರಾ ಸೇರಿದಂತೆ ಪ್ರಮುಖ ಹಬ್ಬಗಳ ಪ್ರಯುಕ್ತ ಮಂಗಳೂರು ನಗರ ವ್ಯಾಪ್ತಿಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಅಗತ್ಯ ಮುಂಜಾಗೃತಾ ಹಾಗೂ ನವೀಕರಣ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳುವಂತೆ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಜಿಲ್ಲಾಧಿಕಾರಿಗಳು ಹಾಗೂ ಮಹಾನಗರ ಪಾಲಿಕೆ ಆಯುಕ್ತರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಸಂಪರ್ಕ ರಸ್ತೆಗಳ ಕಾಮಗಾರಿ, ಎಲ್ಲಾ ರಸ್ತೆಗಳ ದುರಸ್ತಿ, ಶೋಭಾ ಯಾತ್ರೆ ಸಾಗುವ…

## [ಬೆಳ್ಳಾರೆ ಪೋಕ್ಸೋ ಪ್ರಕರಣ: ಅಜ್ಜನಿಗೆ 5 ವರ್ಷ ಜೈಲು, ₹35,000 ದಂಡ ವಿಧಿಸಿದ ಕೋರ್ಟ್!](https://themangaloremirror.in/bellare-pocso-case-64-year-old-abdulla-sentenced-to-5-years-jail-mangaluru-court/)

_2026-08-21 · guru · themangaloremirror.in_

ಮಂಗಳೂರು ಅಗಸ್ಚ್ 21: ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2020ರಲ್ಲಿ ದಾಖಲಾಗಿದ್ದ ಅಪ್ರಾಪ್ತ ವಯಸ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 5 ವರ್ಷ ಜೈಲು, ₹35,000 ದಂಡ ವಿಧಿಸಿದ ಕೋರ್ಟ್ ಆದೇಶ ಹೊರಡಿಸಿದೆ. ಕಡಬ ತಾಲೂಕಿನ ಕುದ್ಮಾರು ನಿವಾಸಿ ಅಬ್ದುಲ್ಲಾ (64) ಎಂಬಾತನಿಗೆ ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಸಾಧಾರಣ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ. ಆರೋಪಿ ಅಬ್ದುಲ್ಲಾ…

## [ಮಂಗಳೂರು: ಸಿಮ್ ಸ್ವಾಪ್ ಮೂಲಕ ಹಿರಿಯ ನಾಗರಿಕನ ಬ್ಯಾಂಕ್ ಖಾತೆಗಳಿಂದ ₹2.12 ಕೋಟಿಗೂ ಅಧಿಕ ಹಣ ಲೂಟಿ ಹೊಡೆದ ಸೈಬರ್ ವಂಚಕರು](https://themangaloremirror.in/mangaluru-cyber-crime-senior-citizen-loses-2-12-crore-in-sim-swap-fraud/)

_2026-08-20 · guru · themangaloremirror.in_

ಮಂಗಳೂರು ಅಗಸ್ಟ್ 20: ಸಿಮ್ ನೆಟ್‌ವರ್ಕ್ ಹ್ಯಾಕ್ ಮಾಡಿ ಅಕ್ರಮವಾಗಿ ಆನ್‌ಲೈನ್ ನೆಟ್ ಬ್ಯಾಂಕಿಂಗ್ ಅಕ್ಸೆಸ್ ಪಡೆದ ಸೈಬರ್ ವಂಚಕರ ತಂಡವೊಂದು ಮಂಗಳೂರಿನ ನಿವೃತ್ತ ಖಾಸಗಿ ಉದ್ಯೋಗಿಯೊಬ್ಬರ ಬ್ಯಾಂಕ್ ಗಳಿಂದ ಬರೋಬ್ಬರಿ ₹2.12 ಕೋಟಿಗೂ ಅಧಿಕ ಹಣವನ್ನು ದೋಚಿರುವ ಸೈಬರ್ ಅಪರಾಧ ಪ್ರಕರಣ ಬೆಳಕಿಗೆ ಬಂದಿದೆ. ಮುಂಬೈನಲ್ಲಿ 50 ವರ್ಷಗಳ ಕಾಲ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿ ನಿವೃತ್ತರಾಗಿ ಪ್ರಸ್ತುತ ಮಂಗಳೂರಿನಲ್ಲಿ ನೆಲೆಸಿರುವ 78 ವರ್ಷದ ವೃದ್ಧರೊಬ್ಬರು ಈ ಸೈಬರ್ ವಂಚನೆಗೆ ಬಲಿಯಾಗಿದ್ದಾರೆ.…

## [ಬಾಳೆಹಣ್ಣು ಮಂಡಿ ಮೇಲೆ ದಾಳಿ : ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು](https://themangaloremirror.in/chemical-banna-ride/)

_2026-08-20 · guru · themangaloremirror.in_

ಉಡುಪಿ ಆಗಸ್ಟ್ 20 : ಉಡುಪಿಯ ಅಲೆವೂರು, ಕೆಮ್ತೂರು ಹಾಗೂ ದುಗ್ಲಿಪದವು ಪರಿಸರದಲ್ಲಿ ಸಹಾಯಕ ಕಮೀಷನರ್ ರಶ್ಮಿ ಎಸ್.ಆರ್, ಆಹಾರ ಸುರಕ್ಷತಾ ಅಧಿಕಾರಿ ವಿವೇಕ್, ಉಡುಪಿ ತಹಶೀಲ್ದಾರ್ ಗುರುರಾಜ್ ಹಾಗೂ ವಿವಿಧ ಅಧಿಕಾರಿಗಳ ತಂಡಗಳು ಇಂದು ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ಇಂದು ದಿಢೀರ್ ದಾಳಿ ನಡೆಸಿ, ಸುಮಾರು 10 ಕೆ.ಜಿ ಯಷ್ಟು ರಾಸಾಯನಿಕ ಬಳಸಿದ ಬಾಳೆಹಣ್ಣುಗಳನ್ನು ಜಪ್ತಿ ಮಾಡಿ, ನಾಶಪಡಿಸಿದರು. ಜೊತೆಗೆ ಬಾಳೆಹಣ್ಣಿಗೆ ಬಳಸುತ್ತಿದ್ದ, ಆರೋಗ್ಯಕ್ಕೆ ಹಾನಿಕಾರಕ ರಾಸಾಯನಿಕಗಳು, ಕೃತಕ ಬಣ್ಣ…

## [ಉಡುಪಿ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಅರೆಸ್ಟ್, ಬಂಧಿತರ ಸಂಖ್ಯೆ 8ಕ್ಕೆ ಏರಿಕೆ!](https://themangaloremirror.in/udupi-david-dsouza-murder-case-8th-accused-suraj-kumar-arrested-uttarakhand/)

_2026-08-20 · guru · themangaloremirror.in_

ಉಡುಪಿ ಅಗಸ್ಟ್ 20: ಕಾಪು ತಾಲೂಕಿನ ಮುದರಂಗಡಿ ಜಂಕ್ಷನ್‌ನಲ್ಲಿ ನಡೆದ ಪ್ರಿನ್ಸ್ ಎಂಟರ್‌ಪ್ರೈಸಸ್ ಮಾಲಕ ಡೇವಿಡ್ ಡಿಸೋಜಾ (David d’souza) ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯಕ್ಕೆ ಸಂಚು ರೂಪಿಸಿ ಹಣಕಾಸು ನೆರವು ನೀಡಿದ್ದ ಮತ್ತೋರ್ವ ಆರೋಪಿಯನ್ನು ಪೊಲೀಸರು ಉತ್ತರಾಖಂಡ ರಾಜ್ಯದ ನೈನಿತಾಲ್‌ನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಿಹಾರ ರಾಜ್ಯದ ಶೇಖ್‌ಪುರ ಮೂಲದ ಸೂರಜ್ ಕುಮಾರ್ (31) ಎಂದು ಗುರುತಿಸಲಾಗಿದೆ. ಈತನ ಬಂಧನದೊಂದಿಗೆ ಈ ಕೊಲೆ ಪ್ರಕರಣದಲ್ಲಿ ಇದುವರೆಗೆ…

## [ಲಕ್ನೋದಲ್ಲಿ ಭೀಕರ ಜೋಡಿ ಕೊಲೆ: ಹೆಂಡತಿ, ತಂಗಿಯನ್ನು ಗುಂಡಿಕ್ಕಿ ಕೊಂದು &#8230;ದುರಂತ ಅಂತ್ಯಕಂಡ ಬ್ಯಾಂಕ್ ಉದ್ಯೋಗಿ](https://themangaloremirror.in/sbi-employee-shoots-wife-outside-icici-bank-in-lucknow-kills-sister-then-self/)

_2026-08-20 · guru · themangaloremirror.in_

ಲಕ್ನೋ ಅಗಸ್ಟ್ 20: ಕೌಟುಂಬಿಕ ಕಲಹ ಹಾಗೂ ದಾಂಪತ್ಯ ವಿವಾದದ ಹಿನ್ನೆಲೆಯಲ್ಲಿ ಎಸ್‌ಬಿಐ ಉದ್ಯೋಗಿಯೊಬ್ಬರು ಬ್ಯಾಂಕ್‌ ಅಧಿಕಾರಿಯಾಗಿದ್ದ ತಮ್ಮ ಪತ್ನಿಯನ್ನು ಕಚೇರಿ ಮುಂಭಾಗದಲ್ಲೇ ಗುಂಡಿಕ್ಕಿ ಕೊಂದ ಬಳಿಕ, ಮನೆಗೆ ತೆರಳಿ ತಂಗಿಗೂ ಗುಂಡಿಟ್ಟು ಕೊಂದು ತಾವೂ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಲಕ್ನೋದ ಗೋಮತಿ ನಗರದಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದೆ. ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ (SBI) ಉದ್ಯೋಗಿಯಾಗಿದ್ದ ಮಾನಸ್ ವಾಜಪೇಯಿ (38) ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ದುರಂತ ನಾಯಕ.…

## [ಶಾಕಿಂಗ್ ಘಟನೆ: ಹೊಮ್ ವರ್ಕ್ ಮಾಡಿಲ್ಲ ಎಂದು ಯುಕೆಜಿ ಮಗುವಿನ ಕೆನ್ನೆಗೆ ಬಾರಿಸಿದ ಶಿಕ್ಷಕಿ&#8230;ತರಗತಿಯಲ್ಲೇ ಕುಸಿದುಬಿದ್ದು ಮಗು ಸಾವು](https://themangaloremirror.in/ukg-student-dies-after-teacher-tries-to-strip-slaps-him-in-visakhapatnam-classroom/)

_2026-08-20 · guru · themangaloremirror.in_

ವಿಶಾಖಪಟ್ಟಣಂ: ಹೋಮ್‌ವರ್ಕ್ ಪರಿಶೀಲಿಸುವಾಗ ಶಿಕ್ಷಕಿಯೊಬ್ಬರು ತರಗತಿಯಲ್ಲೇ 6 ವರ್ಷದ ಬಾಲಕನನ್ನು ಬಟ್ಟೆ ಕಳಚಲು ಯತ್ನಿಸಿ, ಕೆನ್ನೆಗೆ ಹೊಡೆದ ಪರಿಣಾಮ ಆತ ಸಾವನ್ನಪ್ಪಿರುವ ಭೀಕರ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನ ‘ಒನ್ ಟೌನ್’ ಪ್ರದೇಶದಲ್ಲಿ ಗುರುವಾರ (ಆಗಸ್ಟ್ 20) ಸಂಭವಿಸಿದೆ. ಲಿಟಲ್ ಗಾರ್ಡನ್ಸ್ ಶಾಲೆಯ ಯುಕೆಜಿ ವಿದ್ಯಾರ್ಥಿ ಪ್ರಣಯ್ ತೇಜ ಮೃತಪಟ್ಟ ಬಾಲಕ. ಮಗುವನ್ನು ಕಿಂಗ್ ಜಾರ್ಜ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಶಿಕ್ಷಕಿಯ…

## [ಮುಲ್ಕಿ ಚಂದ್ರಮೌಳೇಶ್ವರ ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ: ಆರೋಪಿ ಅರೆಸ್ಟ್](https://themangaloremirror.in/mulki-chandramouleshwara-temple-kanike-hundi-theft-accused-arrested/)

_2026-08-20 · guru · themangaloremirror.in_

ಮಂಗಳೂರು: ಮುಲ್ಕಿ ಪೊಲೀಸ್‌ ಠಾಣಾ ವ್ಯಾಪ್ತಿಯ ಪ್ರಸಿದ್ಧ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಸಿಸಿಟಿವಿ ಕ್ಯಾಮೆರಾ ತಿರುಗಿಸಿ ಕಾಣಿಕೆ ಹುಂಡಿಯ ಬೀಗ ಮುರಿದು ಕಳ್ಳತನ ಮಾಡಿದ್ದ ಆರೋಪಿಯನ್ನು ಮಂಗಳೂರು ನಗರದ ಮುಲ್ಕಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಕಳುವಾಗಿದ್ದ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಅಯ್ಯಂಗೇರಿ ಅಜ್ಜಿಮಡ ನಿವಾಸಿ ರವಿಕುಮಾರ ಅಲಿಯಾಸ್ ರವಿ ಹೆಚ್.ಜಿ. ಬಂಧಿತ ಆರೋಪಿ. ಆಗಸ್ಟ್ 18ರ ಮಧ್ಯರಾತ್ರಿ ಚಂದ್ರಮೌಳೇಶ್ವರ ದೇವಸ್ಥಾನದ ಮಾಡಿನ…

## [ಬಂಟ್ವಾಳದಲ್ಲಿ ಹಾಡಹಗಲೇ ಬೈಕ್ ಸವಾರನಿಗೆ ತಲವಾರು ತೋರಿಸಿ ₹8 ಲಕ್ಷಕ್ಕೂ ಅಧಿಕ ಹಣ ದೋಚಿದ ಖದೀಮರು!](https://themangaloremirror.in/bantwal-maninalkuru-robbery-bike-rider-threatened-with-talwar-lakhs-stolen/)

_2026-08-20 · guru · themangaloremirror.in_

ಬಂಟ್ವಾಳ ಅಗಸ್ಟ್ 20: ಮಣಿಹಳ್ಳ-ಕಕ್ಯಪದವು ರಸ್ತೆಯ ಮಣಿನಾಲ್ಕೂರು ಗ್ರಾಮದ ಮುಲ್ಕಾಜೆಮಾಡ ಎಂಬ ನಿರ್ಜನ ಪ್ರದೇಶದಲ್ಲಿ ಗುರುವಾರ (ಆಗಸ್ಟ್ 20) ಹಾಡಹಗಲೇ ಬೈಕ್ ಸವಾರನನ್ನು ಅಡ್ಡಗಟ್ಟಿದ ನಾಲ್ವರು ದುಷ್ಕರ್ಮಿಗಳು ತಲವಾರು ತೋರಿಸಿ ಬೆದರಿಸಿ ಲಕ್ಷಾಂತರ ರೂಪಾಯಿ ದರೋಡೆ ನಡೆಸಿ ಪರಾರಿಯಾಗಿದ್ದಾರೆ. ಸುರತ್ಕಲ್ ನಿವಾಸಿ ಮಯ್ಯದಿ ಎಂಬವರೇ ದರೋಡೆಗೊಳಗಾದ ಬೈಕ್ ಸವಾರ. ವಿವಿಧ ಅಂಗಡಿಗಳಿಗೆ ಹೋಲ್‌ಸೇಲ್ ಆಧಾರದಲ್ಲಿ ಪೂರೈಸಿದ್ದ ಸಿಮೆಂಟ್ ವ್ಯಾಪಾರದ ನಗದು ಹಣವನ್ನು ವಸೂಲಿ ಮಾಡಿಕೊಂಡು ಮಯ್ಯದಿ ಅವರು…

## [ಗ್ಲಾಮರ್ ಪ್ರಪಂಚದ ಹಿಂದೆ ಕಾಣಸಿಗದ ಛಾಯಾಗ್ರಾಹಕನ ನೈಜ ಮುಖ &#8220;ಫೋಕಸ್&#8221; ಕಿರುಚಿತ್ರ](https://themangaloremirror.in/focus-a-short-film-revealing-the-true-face-of-a-photographer-hidden-behind-the-world-of-glamour/)

_2026-08-20 · guru · themangaloremirror.in_

ಮಂಗಳೂರು, ಆಗಸ್ಟ್ 20: ಕ್ಯಾಮೆರಾ ಕಣ್ಣಿನ ಹಿಂದೆ ನಿಂತು ಜಗತ್ತಿನ ಸುಂದರ ಕ್ಷಣಗಳನ್ನು ಬಂಧಿಸುವ ಛಾಯಾಗ್ರಾಹಕನ (Photographer) ನಿಜವಾದ ಬದುಕು ಹೇಗಿರುತ್ತದೆ? ಪರರ ಸಂತೋಷ, ಸಂಭ್ರಮ ಹಾಗೂ ಭಾವನೆಗಳಿಗೆ ಬಣ್ಣ ತುಂಬುವ ಆತನ ಬದುಕಿನ ಹಿಂದೆ ಎಂತೆಂತಹ ಕಣ್ಣೀರಿನ ಕಥೆಗಳಿರುತ್ತವೆ? – ಈ ಎಲ್ಲಾ ಸತ್ಯಗಳನ್ನು ಅತ್ಯಂತ ಭಾವುಕವಾಗಿ, ದೃಶ್ಯಕಾವ್ಯದ ರೂಪದಲ್ಲಿ ತೆರೆಯ ಮೇಲೆ ತಂದಿದೆ ‘ಫೋಕಸ್’ (Focus) ಕಿರುಚಿತ್ರ. ಛಾಯಾಗ್ರಾಹಕನೊಬ್ಬನ ಬದುಕಿನ ಬವಣೆ, ಆರ್ಥಿಕ ಸಂಕಷ್ಟ ಹಾಗೂ ಪ್ರೀತಿಯ ಸುತ್ತ…

## [Make any domain metal (Sponsored)](https://crawlproof.com/a/lCizMy9BPN9v)

_2026-08-20 · **Sponsored**_

Turn any domain into a blacked-out metal landing page with an email waitlist

## [4 ತಿಂಗಳಲ್ಲಿ 22 ಮಂದಿಗೆ ಮರಣದಂಡನೆ ಶಿಕ್ಷೆ ನೀಡಿದ್ದ ನ್ಯಾಯಾಧೀಶರ ಪೀಠದಿಂದ 100 ಕೊಲೆ ಪ್ರಕರಣಗಳು ವರ್ಗಾವಣೆ!](https://themangaloremirror.in/100-murder-cases-transferred-from-judge-ravi-kumar-diwakar-in-muzaffarnagar/)

_2026-08-20 · guru · themangaloremirror.in_

ಉತ್ತರ ಪ್ರದೇಶ ಅಗಸ್ಟ್ 20: : ಕಳೆದ ನಾಲ್ಕು ತಿಂಗಳಲ್ಲಿ 10 ಪ್ರತ್ಯೇಕ ಪ್ರಕರಣಗಳಲ್ಲಿ ಬರೋಬ್ಬರಿ 22 ಮಂದಿ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಕಠಿಣ ತೀರ್ಪು ನೀಡಿದ್ದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ರವಿಕುಮಾರ್ ದಿವಾಕರ್ ಅವರ ನ್ಯಾಯಾಲಯದಲ್ಲಿದ್ದ ಸುಮಾರು 100 ಕೊಲೆ ಪ್ರಕರಣಗಳನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿದೆ. ಆಡಳಿತಾತ್ಮಕ ಆದೇಶದ ಮೂಲಕ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಪೀಠಕ್ಕೆ ಈ ಪ್ರಕರಣಗಳನ್ನು ವರ್ಗಾಯಿಸಲಾಗಿದೆ ಎಂದು ಅಧಿಕಾರಿಗಳು…

## [ಹಾವೇರಿ &#8211; ನಿಂತಿದ್ದ ಲಾರಿಗೆ ಕಾರು ಡಿಕ್ಕಿ &#8211; ಮೂವರು ಸಾವು](https://themangaloremirror.in/three-killed-on-the-spot-after-car-collides-with-parked-lorry-in-haveri/)

_2026-08-20 · guru · themangaloremirror.in_

ಹಾವೇರಿ ಅಗಸ್ಟ್ 20: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಟೋಲ್ ನಾಕಾ ಬಳಿ ಕಳೆದ ರಾತ್ರಿ ನಡೆದಿದೆ. ದಾವಣಗೆರೆಯ ನಿಟವಳ್ಳಿ ಮೌನೇಶ್ವರ ಬಡಾವಣೆಯ ನಿವಾಸಿಗಳಾದ ಸಿದ್ದಾರ್ಥ (27), ಹಸನ್ಮುಖಿ (29) ಹಾಊ ಯಶೋಧಾ ಬಾಯಿ (51) ಮೃತರು. ಕಾರಿನಲ್ಲಿದ್ದ ಸೌಂದರ್ಯ, ಸಿಂಧು ಸೇರಿ ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ. ಅವರಿಗೆ ದಾವಣಗೆರೆ ಎಸ್.ಎಸ್. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾಣೆಬೆನ್ನೂರಿನಿಂದ…

